Site icon PowerTV

3 ಸಾವಿರಕ್ಕೆ ವಾರ್ಷಿಕ ಟೋಲ್​ ಪಾಸ್​: ಮಧ್ಯಮ ವರ್ಗಕ್ಕೆ ಮತ್ತೊಂದು ಗಿಫ್ಟ್​​ ಕೊಡುತ್ತಾ ಮೋದಿ ಸರ್ಕಾರ !

ದೆಹಲಿ: ಇತ್ತೀಚೆಗೆ ಕೇಂದ್ರ ಬಜೆಟ್​ನಲ್ಲಿ ಮಧ್ಯಮ ವರ್ಗದ ಜನರಿಗೆ ಭಾರಿ ಕೊಡುಗೆ ಕೊಟ್ಟಿರುವ ಕೇಂದ್ರ ಸರ್ಕಾರ ಇದೀಗ ಮತ್ತೊಂದು ಬಿಗ್​ ಗಿಫ್ಟ್​ ಕೊಡಲು ಹೊರಟಿದೆ ಎಂದು ತಿಳಿದು ಬಂದಿದ್ದು. ಟೋಲ್​​ ಸಂಗ್ರಹದಲ್ಲಿ ಉಂಟಾಗುತ್ತಿದ್ದ ಕಿರಿಕಿರಿ ತಪ್ಪಿಸಲು ವಾರ್ಷಿಕ ಟೋಲ್​ ಪಾಸ್​​ ವ್ಯವಸ್ಥೆಯ ಅನುಷ್ಠಾನಕ್ಕೆ ಚಿಂತನೆ ನಡೆಸಲಾಗಿದೆ ಎಂದು ತಿಳಿದು ಬಂದಿದೆ.

ಹೌದು.. ಫೆ.01ರಂದು ನಡೆದ ಕೇಂದ್ರ ಬಜೆಟ್​ನಲ್ಲಿ ಮೋದಿ ಸರ್ಕಾರ ಮಧ್ಯಮ ವರ್ಗದ ಜನರಿಗೆ ಟ್ಯಾಕ್ಸ್​ ಹೊರೆಯನ್ನು ಕಡಿಮೆ ಮಾಡಿತ್ತು. 12 ಲಕ್ಷದವರೆಗಿನ ಆದಾಯಕ್ಕೆ ಟ್ಯಾಕ್ಸ್​ ಇಲ್ಲ ಎಂದು ಘೋಷಿಸಿ ಕೇಂದ್ರ ಸರ್ಕಾರಕ್ಕೆ ಘೋಷಿಸಿತ್ತು. ಇದೀಗ ಮಧ್ಯಮ ವರ್ಗ ಹಾಗೂ ಖಾಸಗಿ ಕಾರು ಮಾಲೀಕರಿಗೆ ಕೇಂದ್ರ ಸರ್ಕಾರ ಗುಡ್‌ನ್ಯೂಸ್‌ ಕೊಡೋದಕ್ಕೆ ಮುಂದಾಗಿದೆ.

ಈ ಪ್ರಸ್ತಾವನೆ ಕುರಿತು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ ಪರಿಶೀಲಿಸುತ್ತಿದೆ. ಅದರಂತೆ ಒಮ್ಮೆಲೆ 3,000 ರೂ. ಪಾವತಿಸಿ ಒಂದು ವರ್ಷದಲ್ಲಿ ಎಷ್ಟು ಬಾರಿ ಬೇಕಾದರೂ ಟೋಲ್‌ಗಳಲ್ಲಿ ಸಂಚಾರ ಮಾಡಬಹುದು. 30,000 ರೂ. ಪಾವತಿಸಿದ್ರೆ ʻಜೀವಮಾನದ ಪಾಸ್‌ʼ ಒದಗಿಸುವ ಸಾಧ್ಯತೆಯೂ ಇದೆ. 30,000 ರೂ.ಗಳ ಪಾಸ್‌ ಪಡೆದರೆ 15 ವರ್ಷಗಳವರೆಗೆ ಟೋಲ್‌ಗಳಲ್ಲಿ ಸಂಚಾರಕ್ಕೆ ಅವಕಾಶ ಇರಲಿದೆ ಎಂದು ಮೂಲಗಳು ತಿಳಿಸಿವೆ.

ಇದನ್ನೂ ಓದಿ: ಬ್ಯಾಂಕ್​ ವಂಚನೆ ಪ್ರಕರಣ: ಮಾಜಿ ಸಚಿವ ಕೃಷ್ಣಯ್ಯ ಶೆಟ್ಟಿಗೆ ಜೈಲು ಶಿಕ್ಷೆ ಪ್ರಕಟ

ಸದ್ಯದ ಮಾಹಿತಿ ಪ್ರಕಾರ, ಈ ವ್ಯವಸ್ಥೆ ಅನುಷ್ಠಾನಗೋಳಿಸುವ ಪ್ರಸ್ತಾವನೆಯು ಪ್ರಗತಿಯಲ್ಲಿದೆ. ಜೊತೆಗೆ ಕಾರುಗಳಿಗೆ ಪ್ರತಿ ಕಿಮೀಗೆ ವಿಧಿಸಲಾಗುವ ಟೂಲ್‌ನ ಮೂಲ ಬೆಲೆಯನ್ನೂ ಮೊಟಕುಗೊಳಿಸುವ ಬಗ್ಗೆಯೂ ಸಚಿವಾಲಯ ಚಿಂತನೆ ನಡೆಸಿದೆ. ಫಾಸ್ಟ್‌ ಟ್ಯಾಗ್‌ ಹೊಂದಿರುವವರಿಗೆ ಇದು ಅಗತ್ಯವಿಲ್ಲ ಎಂದು ಸಹ ಹೇಳಲಾಗಿದೆ.

ಇತ್ತೀಚೆಗೆ ಕೇಂದ್ರ ಸಚಿವ ನಿತಿನ್‌ ಗಡ್ಕರಿ ʻಏಕ ಟೋಲ್‌ʼ ವ್ಯವಸ್ಥೆ ಜಾರಿಗೊಳಿಸುವ ಬಗ್ಗೆ ಚಿಂತನೆ ನಡೆಸುವುದಾಗಿ ಹೇಳಿದ್ದರು. 2023-24ರ ವರ್ಷದಲ್ಲಿ ಸಂಗ್ರಹವಾದ 55,000 ಕೋಟಿ ರೂ.ಗಳ ಪೈಕಿ, ಖಾಸಗಿ ಕಾರುಗಳಿಂದ ಸಂಗ್ರಹಿತವಾದ ಟೋಲ್‌ ಶುಲ್ಕ 8,000 ಕೋಟಿ ರೂ. ಮಾತ್ರವೇ ಇದೆ. ಖಾಸಗಿ ಕಾರುಗಳ ವಹಿವಾಟು 53% ಇದ್ದರೂ, ಟೋಲ್‌ ಸಂಗ್ರಹದಲ್ಲಿ ಶೇ.21 ರಷ್ಟಿದೆ ಎಂದು ಡೇಟಾ ತೋರಿಸಿದೆ. ಹೀಗಾಗಿ ಹೊಸ ಕ್ರಮಕ್ಕೆ ಸಚಿವಾಲಯ ಮುಂದಾಗಿದೆ.

Exit mobile version