Site icon PowerTV

ಬ್ಯಾಂಕ್​ ವಂಚನೆ ಪ್ರಕರಣ: ಮಾಜಿ ಸಚಿವ ಕೃಷ್ಣಯ್ಯ ಶೆಟ್ಟಿಗೆ ಜೈಲು ಶಿಕ್ಷೆ ಪ್ರಕಟ

ಬೆಂಗಳೂರು : ಮಾಜಿ ಸಚಿವ ಕೃಷ್ಣಯ್ಯ ಶೆಟ್ಟಿ ಬ್ಯಾಂಕ್ ವಂಚನೆ ಪ್ರಕರಣದಲ್ಲಿ ತಪ್ಪಿತಸ್ಥರೆಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ತೀರ್ಪು ನೀಡಿದೆ. 1993ರಲ್ಲಿ ಸಾರ್ವಜನಿಕ ಉದ್ದಿಮೆಗಳ ನೌಕರರಿಗೆ ನಕಲಿ ದಾಖಲೆಗಳ ಮೂಲಕ 7.17 ಕೋಟಿ ರೂ. ಸಾಲ ಪಡೆದು ವಂಚಿಸಿದ ಆರೋಪದ ಮೇಲೆ ಶಿಕ್ಷೆ ವಿಧಿಸಲಾಗಿದೆ.

ಮಾಜಿ ಸಚಿವ ಕೃಷ್ಣಯ್ಯ ಶೆಟ್ಟಿಗೆ ಜೈಲು ಶಿಕ್ಷೆಯಾಗಿದೆ. ಬ್ಯಾಂಕ್ ವಂಚನೆ ಪ್ರಕರಣದಲ್ಲಿ ತಪ್ಪಿತಸ್ಥರು ಎಂದು ಕೋರ್ಟ್ ತೀರ್ಪು ಪ್ರಕಟಿಸಿದ್ದು, ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ತಪ್ಪಿತಸ್ಥ ಎಂದು ತೀರ್ಪು ನೀಡಿದ್ದು, ಶಿಕ್ಷೆಯ ಪ್ರಮಾಣ ಪ್ರಕಟಿಸಬೇಕಿದೆ.

ಇದನ್ನೂ ಓದಿ :ಲವರ್​ ಜೊತೆ ಪರಾರಿಯಾದ ಹೆಂಡತಿ; ಮನನೊಂದು ಪ್ರಾಣ ಬಿಟ್ಟ ಗಂಡ

1993ರಲ್ಲಿ ಬಾಲಾಜಿಕೃಪಾ ಎಂಟರ್‌ಪ್ರೈಸಸ್‌ನ ಮಾಲೀಕರಾಗಿದ್ದ ಕೃಷ್ಣಯ್ಯ ಶೆಟ್ಟಿ ಸಾರ್ವಜನಿಕ ಉದ್ದಿಮೆಗಳ ನೌಕರರಿಗೆ ಗೃಹ ನಿರ್ಮಾಣಕ್ಕೆ ಸಾಲ ಕೊಡಿಸುವುದಾಗಿ ಹೇಳಿ ವಂಚನೆ ನಡೆಸಿದ್ದರು. ಬಿಟಿಎಸ್, ಕೆಎಸ್‌ಆರ್‌ಟಿಸಿ, ಬಿಎಸ್‌ಎನ್‌ಎಲ್, ಐಟಿಐ, ಎಚ್‌ಎಎಲ್, ಬಿಇಎಂಎಲ್, ಎಡಿಇ ಸಂಸ್ಥೆಗಳ 181 ಮಂದಿಗೆ 7.17 ಕೋಟಿ ರೂ.ಬ್ಯಾಂಕ್ ಸಾಲವನ್ನು ನಕಲಿ ದಾಖಲೆ ಸೃಷ್ಟಿಸಿ ಪಡೆದ ಆರೋಪ ಇತ್ತು. ಇದರಲ್ಲಿ 3.53 ಕೋಟಿ ಸಾಲ ತೀರಿಸಿಲ್ಲ ಎಂದು ಸಿಸಿಐ ಆರೋಪಿಸಿತ್ತು. ಮುಖ್ಯ ವಿಚಕ್ಷಣೆ ದಳದ ಮುಖ್ಯಸ್ಥ ಆರ್.ಡಿ.ನಾಯ್ಡು ನೀಡಿರುವ ದೂರು ಆಧರಿಸಿ, ಸಿಬಿಐ ತನಿಖೆ ಕೈಗೆತ್ತಿಕೊಂಡಿತ್ತು.ಬ್ಯಾಂಕ್ ಖಾತೆಗಳು, ಸಾಲ ವಿತರಣೆಯಾದ ಮಾಹಿತಿ ಕಲೆ ಹಾಕಿ ಸಿಬಿಐ ಚಾರ್ಜ್‌ಶೀಟ್ ಸಲ್ಲಿಸಿತ್ತು..

Exit mobile version