Thursday, August 28, 2025
HomeUncategorizedಸರ್ಕಾರದ ಮೈಕ್ರೋ ಫೈನಾನ್ಸ್ ಸುಗ್ರೀವಾಜ್ಞೆಗೆ ತಣ್ಣೀರೆರಚಿದ ರಾಜ್ಯಪಾಲರು: ಏಕೆ ಗೊತ್ತಾ !

ಸರ್ಕಾರದ ಮೈಕ್ರೋ ಫೈನಾನ್ಸ್ ಸುಗ್ರೀವಾಜ್ಞೆಗೆ ತಣ್ಣೀರೆರಚಿದ ರಾಜ್ಯಪಾಲರು: ಏಕೆ ಗೊತ್ತಾ !

ಬೆಂಗಳೂರು : ಮೈಕ್ರೋ ಫೈನಾನ್ಸ್​ ಕಿರುಕುಳಕ್ಕೆ ರಾಜ್ಯದಲ್ಲಿ ಅನೇಕ ಜನರು ಆತ್ಮಹತ್ಯೆ ಮಾಡಿಕೊಂಡಿದ್ದ ಹಿನ್ನಲೆ ರಾಜ್ಯ ಸರ್ಕಾರ ಇದಕ್ಕೆಲ್ಲಾ ಕಡಿವಾಣ ಹಾಕಲು ಸುಗ್ರೀವಾಜ್ಞೆ ಹೊರಡಿಸಲು ಸಿದ್ದತೆ ನಡೆಸಿತ್ತು. ಈ ಸುಗ್ರೀವಾಜ್ಞೆಯನ್ನು ರಾಜ್ಯಪಾಲರ ಅಂಕಿತಕ್ಕೆ ಎಂದು ಕಳುಹಿಸಲಾಗಿತ್ತು. ಇದೀಗ ರಾಜ್ಯಪಾಲರು ಸುಗ್ರೀವಾಜ್ಞೆಗೆ ಸಹಿ ಹಾಕದೆ ಹಿಂದಕ್ಕೆ ಕಳುಹಿಸಿದ್ದಾರೆ.

ಸುಗ್ರೀವಾಜ್ಞೆ ಮೂಲಕ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಬ್ರೇಕ್ ಹಾಕಲು ರಾಜ್ಯ ಸರ್ಕಾರ ಮುಂದಾಗಿತ್ತು. ಇದೀಗ ರಾಜ್ಯಪಾಲ ಥಾವರ್ ಚಂದ್ ಗೆಹಲೋತ್ ಈ ಸುಗ್ರೀವಾಜ್ಞೆಗೆ ಅಂಕಿತ ಹಾಕದೆ ಹಿಂದಕ್ಕೆ ಕಳುಹಿಸಿದೆ.  ಸರ್ಕಾರದಿಂದ ಹಲವು ಸ್ಪಷ್ಟನೆ ಕೇಳಿ ಸರ್ಕಾರಕ್ಕೆ ಸುಗ್ರೀವಾಜ್ಞೆ ವಾಪಸ್ ಕಳುಹಿಸಿದ್ದು. ಈ ಸುಗ್ರೀವಾಜ್ಞೆಯಲ್ಲಿ ಸಾಲ ಪಡೆದವರ ರಕ್ಷಣೆಗೆ ಮಾತ್ರವೇ ಗಮನ ಹರಿಸಿದೆ, ಸಹಜ ನ್ಯಾಯದ ಅಡಿಯಲ್ಲಿ ಸಾಲ‌ ಕೊಟ್ಟವರಿಗೆ ರಕ್ಷಣೆ ಕಾಣಿಸ್ತಿಲ್ಲ.

ಸುದೀರ್ಘ ಅವಧಿಯಲ್ಲಿ ಇದು ಮಾರಕವಾಗಲಿದೆ, ಮೈಕ್ರೋ ಫೈನಾನ್ಸ್ 3 ಲಕ್ಷಕ್ಕಿಂತ ಜಾಸ್ತಿ ಸಾಲ ಕೊಡುವುದಿಲ್ಲ, ಆದರೆ ಕಿರುಕುಳ ನೀಡುವ ಮೈಕ್ರೋಫೈನಾನ್ಸ್​ಗಳಿಗೆ ನೀವು ಐದು ಲಕ್ಷ ದಂಡ‌ ಹೇಗೆ ವಿಧಿಸುತ್ತೀರಾ? ಎಂದು ಪ್ರಶ್ನಿಸಿ ಸುಗ್ರೀವಾಜ್ಙಯನ್ನು ವಾಪಾಸ್​ ಕಳುಹಿಸಿದ್ದಾರೆ.

ಇದನ್ನೂ ಓದಿ : ದೇವಾಸ್ಥಾನದ ಕಳಸ ಸ್ಥಾಪನೆ ವೇಳೆ ದುರ್ಘಟನೆ: ಕ್ರೇನ್​ ಮೇಲಿಂದ ಬಿದ್ದು ಓರ್ವ ಸಾ*ವು

ಜೊತೆಗೆ ಈ ಕಾನೂನನ್ನು ಉಲ್ಲಂಘಿಸಿದ ಮೈಕ್ರೋಫೈನಾನ್ಸ್​ಗಳಿಗೆ ಶಿಕ್ಷೆ ಪ್ರಮಾಣ ಹತ್ತು ವರ್ಷ ವಿಧಿಸಲಾಗಿದೆ
ಶಿಕ್ಷೆ ಪ್ರಮಾಣದಲ್ಲಿ ಯಾವುದೇ ಲಾಜಿಕ್ ಇಲ್ಲ, ಪ್ರಾಮಾಣಿಕವಾಗಿ ಸಾಲ‌ ಕೊಟ್ಟವರಿಗೂ ಇದು ಎಫೆಕ್ಟ್ ಆಗಲಿದೆ
ಪ್ರಾಮಾಣಿಕವಾಗಿ ಸಾಲ ಮರುಪಾವತಿ ಮಾಡುವವರಿಗೂ ಸಮಸ್ಯೆ ಆಗಲಿದೆ, ಬಜೆಟ್ ಅಧಿವೇಶನದ ಹತ್ತಿರವಾಗ್ತಿರುವಾಗ ಸದನದಲ್ಲಿ ಸಾದಕಬಾಧಕ ಚರ್ಚಿಸಿ. ಈಗ ಇರುವ ಕಾನೂನಗಳಲ್ಲೆ ಪೊಲೀಸರು ಸರಿಯಾದ ಕ್ರಮ ಕೈಗೊಳ್ಳುತ್ತಿಲ್ಲ. ಈಗಿರುವಾಗ ಮತ್ತೊಂದು ಕಾನೂನಿನ ಅಗತ್ಯತೆ ಇಲ್ಲ ಎಂದು ಪ್ರಶ್ನಿಸಿ ರಾಜ್ಯಪಾಲಾರು ಸುಗ್ರೀವಾಜ್ಞೆಯನ್ನು ವಾಪಾಸು ಕಳುಹಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments