Site icon PowerTV

ಅಮೃತಸರದ ಗೋಲ್ಡನ್​ ಟೆಂಪಲ್​ಗೆ ಭೇಟಿ ನೀಡಿದ ನ್ಯಾಷನಲ್​ ಕ್ರಷ್​ ರಶ್ಮಿಕಾ

ದಕ್ಷಿಣ ಭಾರತದ ಖ್ಯಾತ ನಟಿ ರಶ್ಮಿಕಾ ಮಂದಣ್ಣ ಬಾಲಿವುಡ್​ನ ‘ಛಾವಾ’ ಸಿನಿಮಾದ ಶ್ಯೂಟಿಂಗ್​ನಲ್ಲಿ ಬ್ಯುಸಿಯಾಗಿದ್ದು. ಇದೀಗ ಛಾವಾ ಸಿನಿಮಾದ ನಟ ವಿಕ್ಕಿ ಕೌಶಲ್​ ಹೊತೆ ಅಮೃತಸರದ ಗೋಲ್ಡನ್​ ಟೆಂಪಲ್​​ಗೆ ನಟಿ ಭೇಟಿ ನೀಡಿದ್ದಾರೆ.

ಸಿನಿಮಾ ಜೀವನದಲ್ಲಿ ಇದೇ ಮೊದಲ ಬಾರಿಗೆ ರಶ್ಮಿಕಾ ಐತಿಹಾಸಿಕ ಸಿನಿಮಾದಲ್ಲಿ ಕಾಣಿಸಿಕೊಳ್ಳುತ್ತಿದ್ದು. ಛತ್ರಪತಿ ಸಾಂಬಾಜಿ ಜೀವನಧಾರಿತ ಚಿತ್ರದಲ್ಲಿ ಮಹರಾಣಿಯ ಪಾತ್ರದಲ್ಲಿ ರಶ್ಮಿಕಾ ಕಾಣಿಸಿಕೊಳ್ಳುತ್ತಿದ್ದಾರೆ. ಈ ಸಿನಿಮಾದ ಭರ್ಜರಿ ಪ್ರಚಾರದಲ್ಲಿ ರಶ್ಮಿಕಾ ಮತ್ತು ಚಿತ್ರತಂಡ ತೊಡಗಿಸಿಕೊಂಡಿದ್ದು. ಸಿನಿಮಾ ರೀಲಿಸ್​ಗೂ ಮುನ್ನ ರಶ್ಮಿಕಾ ಗೋಲ್ಡನ್​ ಟೆಂಪಲ್​ಗೆ ಭೇಟಿ ನೀಡಿದ್ದಾರೆ.

ಇದನ್ನೂ ಓದಿ :ಗಂಡನ ಅಕ್ರಮ ಸಂಬಂಧಕ್ಕೆ ಬೇಸತ್ತು ಗೃಹಿಣಿ ಆತ್ಮಹ*ತ್ಯೆ !

ಛಾವಾ’ ಸಿನಿಮಾದಲ್ಲಿ ಮರಾಠ ರಾಜ ಛತ್ರಪತಿ ಶಿವಾಜಿ ಮಹಾರಾಜರ ಹಿರಿಯ ಮಗ ಛತ್ರಪತಿ ಸಂಭಾಜಿ ಮಹಾರಾಜನ ಪಾತ್ರವನ್ನು ವಿಕ್ಕಿ ಕೌಶಲ್ ನಿಭಾಯಿಸಿದ್ದಾರೆ. ಸಂಭಾಜಿ ಮಹಾರಾಜರ ಶೌರ್ಯ ಅವರ ತ್ಯಾಗ ಮತ್ತು ಯುದ್ಧಗಳನ್ನು ಗೆಲ್ಲುವ ತಂತ್ರಗಳ ಬಗ್ಗೆ ಇದೆ. ಗಂಡ ಮತ್ತು ಹೆಂಡತಿಯ ನಡುವಿನ ಭಾವನಾತ್ಮಕ ಪ್ರೇಮಕಥೆಯನ್ನು ಸಹ ಒಳಗೊಂಡಿದೆ.

ಮರಾಠ ಸಾಮ್ರಾಜ್ಯದಿಂದ ಸಂಭಾಜಿ ದೂರ ಇದ್ದಾಗ ಅವರ ಹೆಂಡತಿ ಎಲ್ಲವನ್ನೂ ಯಾವ ರೀತಿ ನಿರ್ವಹಿಸುತ್ತಿದ್ದರು ಎಂಬುದು ಕಥೆಯ ಹೈಲೈಟ್ ಆಗಿದೆ. ಇಲ್ಲಿ ವಿಕ್ಕಿ ಕೌಶಲ್ ರಶ್ಮಿಕಾ ನಾಯಕಿಯಾಗಿದ್ದಾರೆ. ಇದೇ ಫೆ.14ರಂದು ಸಿನಿಮಾ ರಿಲೀಸ್ ಆಗಲಿದೆ.

Exit mobile version