ಶಾಲಾ-ಕಾಲೇಜುಗಳಲ್ಲಿ ಪರೀಕ್ಷೆ ಸಮಯದಲ್ಲಿ ಸರಸ್ವತಿ ಪೂಜೆಯನ್ನು ಆಚರಿಸುವ ಸಂಪ್ರದಾಯವಿದೆ. ಆದರೆ ಇಲ್ಲೊಂದು ಕಾಲೇಜಿನಲ್ಲಿ ಸರಸ್ವತಿ ಪೂಜೆ ದಿನ ವಿದ್ಯಾರ್ಥಿನಿಯೋರ್ವಳು ಅಶ್ಲೀಲವಾಗಿ ನೃತ್ಯ ಮಾಡಿದ್ದು. ಈ ಕುರಿತಾದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು. ಯುವತಿಯ ವಿರುದ್ದ ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಘಟನೆ ನೇಪಾಳದಲ್ಲಿ ನಡೆದಿದ್ದು, ಎಂಜಿನಿಯರಿಂಗ್ ಕಾಲೇಜು ವಿದ್ಯಾರ್ಥಿನಿಯೋರ್ವಳು ಸರಸ್ವತಿ ಪೂಜೆಯ ಸಂದರ್ಭದಲ್ಲಿ ಅಶ್ಲೀಲ ನೃತ್ಯ ಪ್ರದರ್ಶನ ಮಾಡಿ ಟೀಕೆಗೆ ಗುರಿಯಾಗಿದ್ದಾಳೆ. ಈ ಕುರಿತ ವಿಡಿಯೋವನ್ನು tedhi.soch ಹೆಸರಿನ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಶೇರ್ ಮಾಡಲಾಗಿದೆ. ವೈರಲ್ ಆಗುತ್ತಿರುವ ವಿಡಿಯೋದಲ್ಲಿ ಸರಸ್ವತಿ ಪೂಜೆಯ ವೇಳೆ ವಿದ್ಯಾರ್ಥಿನಿಯೋರ್ವಳು ಸ್ಟೇಜ್ ಮೇಲೆ ಅಶ್ಲೀಲ ನೃತ್ಯ ಪ್ರದರ್ಶನ ಮಾಡುತ್ತಿರುವ ದೃಶ್ಯವನ್ನು ಕಾಣಬಹುದು.