Site icon PowerTV

ಕೂಲಿ ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವಾಹನ ಪಲ್ಟಿ: 14 ಕಾರ್ಮಿಕರಿಗೆ ಗಂಭೀರ ಗಾಯ

ಹಾಸನ : ಕೂಲಿ ಕಾರ್ಮಿಕರನ್ನು ಕೆಲಸಕ್ಕೆ ಕರೆದೊಯ್ಯುವ ಸಂದರ್ಭದಲ್ಲಿ ವಾಹನ ಪಲ್ಟಿಯಾಗಿ 14 ಜನರಿಗೆ ಗಾಯವಾಗಿರುವ ಘಟನೆ ಹಾಸನದಲ್ಲಿ ನಡೆದಿದ್ದು. ಗಾಯಗೊಂಡವರಲ್ಲಿ ನಾಲ್ವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ.

ಹಾಸನ ಜಿಲ್ಲೆ, ಸಕಲೇಶಪುರ ತಾಲ್ಲೂಕಿನ, ನಿಡನೂರು ಕೂಡಿಗೆ ಬಳಿ ಇಂದು ಮುಂಜಾನೆ ಘಟನೆ ಘಟಿಸಿದ್ದು. ತಮಿಳುನಾಡಿನ ಸೇಲಂನಿಂದ ಮಡಿಕೇರಿ ಜಿಲ್ಲೆ, ಶನಿವಾರಸಂತೆಯ ಬಳಿ ಇರುವ ಕಾಫಿ ತೋಟಕ್ಕೆ 13 ಮಂದಿ ಕಾರ್ಮಿಕರನ್ನು ಕೊಂಡೊಯ್ಯುತ್ತಿದ್ದ ಟಾಟಾ ವಿಂಗರ್ ವಾಹನ ಚಾಲಕನ ನಿಯಂತ್ರಣ ತಪ್ಪಿ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಪಲ್ಟಿಯಾಗಿದೆ.

ಇದನ್ನೂ ಓದಿ: ಎತ್ತಿನ ಗಾಡಿಗೆ ಬೈಕ್​ ಡಿಕ್ಕಿ: ಮೂವರು ವಿದ್ಯಾರ್ಥಿಗಳು ಸ್ಥಳದಲ್ಲೆ ಸಾ*ವು

ವಾಹನದಲ್ಲಿ ಸಿಲುಕಿಕೊಂಡಿದ್ದ 14 ಮಂದಿ ಕೂಲಿ ಕಾರ್ಮಿಕರನ್ನು ಸ್ಥಳೀಯರು ಮತ್ತು ಪೊಲೀಸರು ರಕ್ಷಿಸಿದ್ದು. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಗಂಭೀರವಾಗಿ ಗಾಯಗೊಂಡಿದ್ದವರನ್ನು ಹಾಸನ ಜಿಲ್ಲಾಸ್ಪತ್ರಗೆ ದಾಖಲು ಮಾಡಲಾಗಿದೆ . ಅಪಘಾತದ ಪರಿಣಾಮ ಕೂಲಿ ಕಾರ್ಮಿಕರ ಬಟ್ಟೆ, ಆಹಾರ ಸಾಮಾಗ್ರಿಗಳು ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದಿವೆ.

ಅತೀ ವೇಗದಿಂದ ನಿಯಂತ್ರಣ  ತಪ್ಪಿ ವಾಹನ ಪಲ್ಟಿಯಾಗಿರುವ ಶಂಕೆ ವ್ಯಕ್ತವಾಗಿದ್ದು. ಘಟನಾ ಸ್ಥಳಕ್ಕೆ ಸಕಲೇಶಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.

Exit mobile version