Site icon PowerTV

ಅಕ್ರಮ ಸಂಬಂಧದ ಅನುಮಾನ: ಪತ್ನಿಯ ಕಣ್ಣುಗುಡ್ಡೆಯನ್ನೆ ಕಿತ್ತ ಪಾಪಿ ಪತಿ

ಮಧ್ಯಪ್ರದೇಶ : ಪತ್ನಿ ಅಕ್ರಮ ಸಂಬಂಧ ಹೊಂದಿದ್ದಾಳೆ ಎಂಬ ಅನುಮಾನದಿಂದ ಪತಿಯೊಬ್ಬ ಚಾಕುವಿನಿಂದ ಪತ್ನಿಯ ಕಣ್ಣು ಗುಡ್ಡೆಯನ್ನೆ ಕಿತ್ತಿರುವ ಘಟನೆ ಮಧ್ಯಪ್ರದೇಶದ ಶಿವಪುರಿಯಲ್ಲಿ ನಡೆದಿದೆ. ಅಷ್ಟೆ ಅಲ್ಲದ ಮಹಿಳೆಯ ಖಾಸಗಿ ಭಾಗಗಳು ಸೇರಿದಂತೆ ಹಲವು ಕಡೆ ಗಾಯಗಳನ್ನು ಮಾಡಿದ್ದಾನೆ ಎಂದು ವರದಿಯಾಗಿದೆ.

ಮಧ್ಯಪ್ರದೇಶದ ಶಿವಪುರಿ ಬಳಿಯ ಪೋಹ್ರಿ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು. ಆರೋಪಿಯನ್ನು ಛೋಟು ಖಾನ್​ ಎಂದು ಗುರುತಿಸಲಾಗಿದೆ. ಈತ ತನ್ನ ಪತ್ನಿ ಅಕ್ರಮ ಸಂಬಂಧ ಹೊಂದಿದ್ದಾಳೆ ಎಂದು ಅನುಮಾನ ಹೊಂದಿದ್ದನು ಎಂದು ತಿಳಿದು ಬಂದಿದೆ. ಇದೇ ಅನುಮಾನದಿಂದ ಈತ ಪತ್ನಿಯ ಬಳಿ ಮೊಬೈಲ್​ ಪೋನ್​ ಕೇಳಿದ್ದ. ಆದರೆ ಪತ್ನಿ ಇದಕ್ಕೆ ನಿರಾಕರಿಸಿದ್ದಳು.

ಇದನ್ನೂ ಓದಿ :ಕ್ಷುಲ್ಲಕ ವಿಚಾರಕ್ಕೆ ಜಗಳ: ಮಾಜಿ ಶಾಸಕನ ಕೊ*ಲೆ ಮಾಡಿದ ಆಟೋ ಡ್ರೈವರ್​

ಇದರಿಂದ ಕುಪಿತಗೊಂಡ ಗಂಡ ಛೊಟು ಖಾನ್​ ಪತ್ಮಿಯ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿದ್ದಾನೆ. ಹಲ್ಲೆ ಮಾಡಿದ ನಂತರ ಆರೋಪಿ ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ತಿಳಿದು ಬಂದಿದೆ. ಘಟನೆ ಕುರಿತು ನೆರೆಮನೆಯವರು ಗಾಯಾಳು ಮಹಿಳೆಯ ಕುಟುಂಬಸ್ಥರಿಗೆ ಮಾಹಿತಿ ನೀಡಿದ್ದು. ರಕ್ತಸಿಕ್ತವಾಗಿ ಬಿದ್ದಿದ್ದ ಆಕೆಯನ್ನು ಜಿಲ್ಲಾ ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ತಿಳಿದು ಬಂದಿದೆ.

ಪೊಲೀಸ್ ಅಧಿಕಾರಿಗಳು ಪ್ರಸ್ತುತ ಸಂತ್ರಸ್ತೆ ಮತ್ತು ಆಕೆಯ ಕುಟುಂಬದಿಂದ ಹೇಳಿಕೆಗಳನ್ನು ದಾಖಲಿಸುತ್ತಿದ್ದಾರೆ. ಏತನ್ಮಧ್ಯೆ, ಪರಾರಿಯಾಗಿರುವವ ಪತಿಯನ್ನು ಪತ್ತೆಹಚ್ಚಲು ಶೋಧ ಕಾರ್ಯ ಆರಂಭಿಸಲಾಗಿದೆ. ಶೀಘ್ರದಲ್ಲೇ ಆತನನ್ನು ಬಂಧಿಸಲಾಗುವುದು ಎಂದು ಪೊಲೀಸರು ಭರವಸೆ ನೀಡಿದ್ದಾರೆ.

Exit mobile version