ಸೋಷಿಯಲ್ ಮೀಡಿಯಾದಲ್ಲಿ ಪ್ರತಿನಿತ್ಯ ಹಲವಾರು ವಿಡಿಯೋಗಳು ವೈರಲ್ ಆಗುತ್ತಿರುತ್ತವೆ. ಅವುಗಳಲ್ಲಿ ಕೆಲವೊಂದು ದೃಶ್ಯ ಸಿಕ್ಕಾಪಟ್ಟೆ ವೈರಲ್ ಆಗುತ್ತವೆ. ಅಂತಹದ್ದೊಂದು ವಿಡೀಯೋ ಇದೀಗ ಹರಿದಾಡುತ್ತಿದ್ದು, ಅಗ್ನಿ ಶಾಮಕ ದಳದ ಸಿಬ್ಬಂದಿಗಳ ಬೆಂಕಿ ಡ್ಯಾನ್ಸ್‌ಗೆ ನೆಟ್ಟಿಗರಂತೂ ಫುಲ್ ಫಿದಾ ಆಗಿದ್ದಾರೆ.
ಅಗ್ನಿ ಶಾಮಕ ಸೇವಾ ವಾಹನದೊಳಗೆ ಕುಳಿತು ಮಲಯಾಳಂ ಹಾಡಿಗೆ ಉತ್ಸಾಹಭರಿತವಾಗಿ ಡ್ಯಾನ್ಸ್ ಮಾಡಿದ್ದಾರೆ. ಇವರ ಈ ಭರ್ಜರಿ ಡ್ಯಾನ್ಸ್ ಪರ್ಫಾರ್ಮೆನ್ಸ್ ವಿಡಿಯೋ ಸಖತ್ ವೈರಲ್ ಆಗುತ್ತಿದೆ. ಈ ಕುರಿತ ವಿಡಿಯೋವನ್ನು thalathirinjavan007 ಹೆಸರಿನ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಶೇರ್ ಮಾಡಲಾಗಿದ್ದು, “ಕರ್ತವ್ಯದ ಬಳಿಕದ ವಿಶ್ರಾಂತಿಯ ಕ್ಷಣ” ಎಂಬ ಶೀರ್ಷಿಕೆಯನ್ನು ಬರೆಯಲಾಗಿದೆ.
ಇದನ್ನೂ ಓದಿ :ಪತ್ನಿಯೊಂದಿಗೆ ಅಕ್ರಮ ಸಂಬಂಧ ಬೆಳೆಸಿದ್ದ ಸ್ನೇಹಿತನಿಗೆ ಗುಂಡಿ ತೋಡಿದ ಗಂಡ
ವೈರಲ್ ಆಗುತ್ತಿರುವ ವಿಡಿಯೋದಲ್ಲಿ ಯುನಿಫಾರ್ಮ್ ತೊಟ್ಟ ಅಗ್ನಿಶಾಮಕ ದಳದ ಸಿಬ್ಬಂದಿಗಳು ಜೊತೆಯಾಗಿ ಕುಳಿತು ಮಲಯಾಳಂ ಹಾಡಿಗೆ ಭರ್ಜರಿಯಾಗಿ ಡ್ಯಾನ್ಸ್ ಮಾಡುತ್ತಿರುವಂತಹ ದೃಶ್ಯವನ್ನು ಕಾಣಬಹುದು. ಆರು ದಿನಗಳ ಹಿಂದೆ ಹಂಚಿಕೊಳ್ಳಲಾದ ಈ ವಿಡಿಯೋ 5.1 ಮಿಲಿಯನ್ ವೀಕ್ಷಣೆಗಳನ್ನು ಹಾಗೂ ಹಲವಾರು ಕಾಮೆಂಟ್ಸಗಳನ್ನು ಪಡೆದುಕೊಂಡಿದೆ.
ಒಬ್ಬ ಬಳಕೆದಾರರು ʼಬೆಂಕಿ ಡ್ಯಾನ್ಸ್ʼ ಎಂಬ ಕಾಮೆಂಟ್ ಬರೆದುಕೊಂಡಿದ್ದಾರೆ. ಇನ್ನೊಬ್ಬ ಬಳಕೆದಾರರು ʼಬೆಂಕಿ ನಂದಿಸಲು ಮಾತ್ರವಲ್ಲ ಡ್ಯಾನ್ಸ್ ಮೂಲಕ ಬೆಂಕಿ ಹತ್ತಿಸಲು ಕೂಡಾ ಇವರು ಫೇಮಸ್ʼ ಎಂದು ಹೇಳಿದ್ದಾರೆ. ಮತ್ತೊಬ್ಬ ಬಳಕೆದಾರರು ʼಅದ್ಭುತವಾಗಿದೆʼ ಎಂಬ ಕಾಮೆಂಟ್ ಬರೆದುಕೊಂಡಿದ್ದಾರೆ.