Monday, August 25, 2025
Google search engine
HomeUncategorizedಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಆಗುತ್ತೆ, ಈ ಬಗ್ಗೆ ಖರ್ಗೆ ಅವರೇ ಹೇಳಿದ್ದಾರೆ: ಸತೀಶ್​ ಜಾರಕಿಹೊಳಿ

ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಆಗುತ್ತೆ, ಈ ಬಗ್ಗೆ ಖರ್ಗೆ ಅವರೇ ಹೇಳಿದ್ದಾರೆ: ಸತೀಶ್​ ಜಾರಕಿಹೊಳಿ

ಹುಬ್ಬಳ್ಳಿ : ರಾಜ್ಯ ಕಾಂಗ್ರೆಸ್​ನಲ್ಲಿ ಕಳೆದ ಕೆಲ ದಿನಗಳಿಂದ ಕೆಪಿಸಿಸಿ ಅಧ್ಯಕ್ಷರನ್ನು ಬದಲಾಯಿಸಬೇಕು ಎಂಬ ಕೂಗು ಕೇಳಿ ಬರುತ್ತಿದ್ದು. ಇದೀಗ ಈ ಚರ್ಚೆಗೆ ಸತೀಶ್​ ಜಾರಕಿಹೊಳಿ ಮತ್ತಷ್ಟು ಪುಷ್ಟಿ ನೀಡಿದ್ದಾರೆ. ಮಾಧ್ಯಮದ ಮುಂದೆ ಕೆಪಿಸಿಸಿ ಅಧ್ಯಕ್ಷದ ಬದಲಾವಣೆ ಆಗುತ್ತೆ,ಈ ಕುರಿತು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್​ ಖರ್ಗೆ ಹೇಳಿದ್ದಾರೆ ಎಂದು ಹೇಳಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ಹುದ್ದೆಯ ಪ್ರಬಲ ಆಕಾಂಕ್ಷಿ ವಿಚಾರದ ಕುರಿತು ಮಾತನಾಡಿದ ಸಚಿವ ಸತೀಶ್ ಜಾರಕಿಹೊಳಿ ‘ಈ ಬಗ್ಗೆ ಯಾವುದೇ ಪ್ರಸ್ತಾಪ ಆಗಿಲ್ಲ, ಚರ್ಚೆ ಆಗಿಲ್ಲ, ಸಮಯ ಬಂದಾಗ ನೋಡೋಣ. ಕರ್ನಾಟಕದಲ್ಲಿ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಆಗುತ್ತೆ ಈ ಬಗ್ಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್​ ಖರ್ಗೆ ಅವರೇ ಹೇಳಿದ್ದಾರೆ. ದೇಶದ ನಾನಾ ರಾಜ್ಯಗಳಲ್ಲಿ ಪಿಸಿಸಿ ಅಧ್ಯಕ್ಷರ ಬದಲಾವಣೆ ಆಗಿದೆ. ಅದೇ ರೀತಿ ಕರ್ನಾಟಕದಲ್ಲೂ ಆಗುತ್ತದೆ.

ಇದನ್ನೂ ಓದಿ :ಗಾಳಿಪಟ ಉತ್ಸವದಲ್ಲಿ ಹನುಮಂತು ಜೊತೆ ತತ್ವಪದ ಹಾಡಿದ ಸಚಿವ ಪ್ರಹ್ಲಾದ್​ ಜೋಶಿ

ತಕ್ಷಣಕ್ಕೆ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಆಗದೆ ಇರಬಹುದು ಆದರೆ ಆಗೇ ಆಗುತ್ತೆ. ಹೈಕಮಾಂಡ್ ಯಾವಾಗ ಮಾಡ್ತಾರೆ ಎಂದು ಕಾದು ನೋಡೋಣ. ಆದರೆ ನಾನಂತೂ ಯಾವುದೇ ರೀತಿಯ ಆಕಾಂಕ್ಷಿ ಅಲ್ಲಾ, ಆದರೆ
ನಾನು ಅಧ್ಯಕ್ಷ ಆಗಬೇಕು ಅಂತ ನನ್ನ ಹಿಂಬಾಲಕರು, ಪ್ರಮುಖರು ಇಂಗಿತ ವ್ಯಕ್ತಪಡಿಸಿದ್ದಾರೆ, ಇದು ಸಹಜ ಕೂಡ ಎಂದು ಕೆಪಿಸಿಸಿ ಅಧ್ಯಕ್ಷರ ಬದಲಾವಣೆಯ ಕುರಿತು ಸುಳಿವು ನೀಡಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments