Site icon PowerTV

ರಾಜ್ಯದಲ್ಲಿ ಆಲಿಕಲ್ಲು ಮಳೆಯಾಗುವ ಸಾಧ್ಯತೆ; ಯಲ್ಲೋ ಅಲರ್ಟ್​ ಘೋಷಣೆ

ಬೆಂಗಳೂರು : ರಾಜ್ಯದಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಹಗುರ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ಎಚ್ಚರಿಕೆ ನೀಡಿದ್ದು. ಕೆಲವೆಡೆ ಆಲಿಕಲ್ಲು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಮಾಹಿತಿ ದೊರೆತಿದೆ.

ಕಳೆದ ಕೆಲ ದಿನಗಳಿಂದ ಬಿರು ಬೇಸಿಗೆಯ ಬಿಸಿಲಿನಿಂದ ಬಳಲಿದ್ದ ಭೂಮಿಗೆ ವರುಣ ಸಿಂಚನವಾಗುವ ಸಾಧ್ಯತೆ ಇದೆ ಎಂದು ರಾಜ್ಯ ಹವಮಾನ ಇಲಾಖೆ ಮಾಹಿತಿ ನೀಡಿದೆ. ಇಂದಿನಿಂದ (ಏ.01) ನಾಲ್ಕು ದಿನಗಳ ಕಾಲ ಹಗುರ ಮಳೆಯಾಗಲಿದ್ದು. ಕರಾವಳಿ ಹಾಗೂ ದಕ್ಷಿಣ ಒಳನಾಡಿನ  ಕೆಲವು ಭಾಗಗಳಲ್ಲಿ ಮಳೆಯಾಗಲಿದೆ.

ಇದನ್ನು ಓದಿ :ಮೊನಾಲಿಸಾ ಜತೆ ಸಿನಿಮಾ ಮಾಡುತ್ತಿದ್ದ ನಿರ್ದೇಶಕನ ಮೇಲೆ ರೇಪ್ ಕೇಸ್

ದಕ್ಷಿಣ ಕನ್ನಡ, ಉಡುಪಿ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು,ಮೈಸೂರು, ಹಾಸನ, ಕೊಡಗು, ಚಾಮರಾಜನಗರ ಸೇರಿದಂತೆ ಹಲವು ಕಡೆ ಮಳೆಯಾಗುವ ಸಾಧ್ಯತೆ ಇದ್ದು. ಈ ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್​ ಘೋಷಣೆ ಮಾಡಲಾಗಿದೆ. ನಾಳೆ ಕೆಲವು ಕಡೆ ಆಲಿಕಲ್ಲು ಮಳೆಯಾಗುವ ಸಾಧ್ಯತೆ ಇದೆ. ಏಪ್ರೀಲ್​ 3ರಿಂದ ಏಪ್ರೀಲ್​ 5ರವರೆಗೆ ಉಷ್ಣತೆಯೂ ಎರಡು, ಮೂರು ಡಿಗ್ರಿ ಇಳಿಯುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ಮಾಹಿತಿ ನೀಡಿದೆ.

Exit mobile version