Site icon PowerTV

ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದಿಂದ ಕೆಳಗಿಳಿಯುತ್ತಾರಾ ಅಣ್ಣಾಮಲೈ..!

ಚೆನ್ನೈ: ತಮಿಳುನಾಡಿನ ಬಿಜೆಪಿ ರಾಜ್ಯಧ್ಯಕ್ಷ ಕೆ.ಅಣ್ಣಾಮಲೈ ತಮಿಳುನಾಡು ಬಿಜೆಪಿ ರಾಜ್ಯಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುವ ಸಾಧ್ಯತೆ ಇದೆ ಎಂದು ವಿಶ್ಲೇಷಿಸಲಾಗುತ್ತಿದೆ. ಎಐಎಡಿಎಂಕೆ ಪಕ್ಷದೊಂದಿಗಿನ ಬಿಜೆಪಿ ಮೈತ್ರಿಯ ಕಾರಣದಿಂದ ಅಣ್ಣಮಲೈ ಬಿಜೆಪಿ ರಾಜ್ಯಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುತ್ತಾರೆ ಎಂದು ಮಾಹಿತಿ ಲಭಿಸಿದೆ.

2023ರಲ್ಲಿ ಎಐಎಡಿಎಂಕೆ ಮತ್ತು ಬಿಜೆಪಿ ನಡುವಿನ ಮೈತ್ರಿ ಮುರಿದು ಬೀಳಲು ಅಣ್ಣಾಮಲೈ ಕಾರಣ ಎಂಬುದು ಎಐಎಡಿಎಂಕೆ ಪಕ್ಷದ ಅಸಮಾಧಾನಕ್ಕೆ ಪ್ರಮುಖ ಕಾರಣವಾಗಿದೆ. ಅಲ್ಲದೇ ಜಾತಿ ಸಮೀಕರಣಗಳ ಕಾರಣದಿಂದಲೂ ಅಣ್ಣಾಮಲೈ ಅವರ ರಾಜೀನಾಮೆಗೆ ಬಿಜೆಪಿ ಒತ್ತಾಯಿಸುವ ಸಾಧ್ಯತೆಗಳಿವೆ ಎಂದು ರಾಜಕೀಯ ಪರಿಣಿತರು ವಿಶ್ಲೇಷಿಸಲಾಗಿದೆ.

ಮುಂದಿನ ವರ್ಷ ತಮಿಳುನಾಡಿನಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದ್ದು. ಈ ಚುನಾವಣೆಯಲ್ಲಿ ಶತಾಯ ಗತಾಯ ಡಿಎಂಕೆಯನ್ನು ಹಣಿಯಲು ಬಿಜೆಪಿ ಮತ್ತು ಎಐಎಡಿಎಂಕೆ ಪಣ ತೊಟ್ಟಿವೆ. ಆದರೆ ಎರಡು ಪಕ್ಷಗಳ ನಡುವಿನ ಮೈತ್ರಿ ಮುರಿದು ಬಿದ್ದಿರುವ ಕಾರಣ ಈ ಚುನಾವಣೆಯಲ್ಲಿ ಆಡಳಿತರೂಡ ಡಿಎಂಕೆಗೆ ಲಾಭವಾಗುವ ಸಾಧ್ಯತೆ ಇದೆ. 2026ರ ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ಎಐಎಡಿಎಂಕೆ ಮತ್ತು ಬಿಜೆಪಿ ಪಕ್ಷಗಳು ಒಟ್ಟಾಗಿ ಸ್ಪರ್ಧಿಸಿದರೆ, ಎರಡೂ ಪಕ್ಷಗಳ ಮುಖಂಡರು ಒಂದೇ ಸಮುದಾಯದವರಾಗಿರಬಾರದು ಎಂಬುದು ಉಭಯ ಪಕ್ಷಗಳ ಲೆಕ್ಕಾಚಾರವಾಗಿದೆ.

ಇದನ್ನೂ ಓದಿ : ಶಿವಕುಮಾರ ಸ್ವಾಮೀಜಿಗಳಿಗೆ ಭಾರತ ರತ್ನ ಕೊಟ್ಟಾಗ, ಆ ಪ್ರಶಸ್ತಿಗೆ ಶಕ್ತಿ ಬರುತ್ತದೆ: ವಿ. ಸೋಮಣ್ಣ

ಜೊತೆಗೆ ಈಗಾಗಲೇ ಅಣ್ಣಾಮಲೈ ಕೇಂದ್ರ ಗೃಹ ಸಚವ ಅಮಿತ್ ಶಾರನ್ನು ದೆಹಲಿಯಲ್ಲಿ ಭೇಟಿಯಾಗಿ ಚರ್ಚೆ ನಡೆಸಿರುವ ಸಂದರ್ಭದಲ್ಲಿ ಈ ಕುರಿತು ಚರ್ಚೆಯಾಗಿದೆ ಎನ್ನಲಾಗುತ್ತಿದ್ದು. ಅಣ್ಣಾಮಲೈ ಬಿಜೆಪಿ ರಾಜ್ಯಾಧ್ಯಕ್ಷ ಪಟ್ಟವನ್ನು ಕಳೆದುಕೊಳ್ಳಲಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ.

ಅಣ್ಣಾಮಲೈಗೆ ರಾಷ್ಟ್ರೀಯ ಜವಬ್ದಾರಿ..!

ಅಣ್ಣಾಮಲೈರನ್ನು ತಮಿಳುನಾಡು ಬಿಜೆಪಿ ರಾಜ್ಯಧ್ಯಕ್ಷ ಸ್ಥಾನದಿಂದ ಕೆಳಗಿಳಿಸಿದ ನಂತರ ಅವರಿಗೆ ರಾಷ್ಟ್ರೀಯ ಜವಬ್ದಾರಿ ಅಥವಾ ಅನ್ಯ ರಾಜ್ಯಗಳ ಉಸ್ತುವಾರಿ ಜವಾಬ್ದಾರಿಯನ್ನು ನೀಡಲು ತೀರ್ಮಾನ ಮಾಡಿದಂತಿದೆ. ಜೊತೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಅವರ ಅವಧಿಯೂ ಮುಗಿದಿದ್ದು. ರಾಷ್ಟ್ರೀಯ ಅಧ್ಯಕ್ಷ ಸ್ಥಾನದ ರೇಸ್​ನಲ್ಲೂ ಅಣ್ಣಾಮಲೈ ಇರಲಿದ್ದಾರೆ ಎಂದು ವಿಶ್ಲೇಷಣೆಗಳು ಕೇಳಿ ಬರುತ್ತಿವೆ.

ಈ ಎಲ್ಲಾ ಬೆಳವಣಿಗೆಗಳ ಕುರಿತು ಕೊಯಮತ್ತೂರಿನಲ್ಲಿ ಮಾತನಾಡಿದ ಅಣ್ಣಾಮಲೈ ಅಮಿತ್ ಶಾ ಅವರ ತೀರ್ಮಾನವೇ ಅಂತಿಮ ಎಂದು ಸ್ಪಷ್ಟಪಡಿಸಿದ್ದಾರೆ. “ತಮಿಳುನಾಡಿನ ರಾಜಕೀಯ ಪರಿಸ್ಥಿತಿಯ ಬಗ್ಗೆ ಹೈಕಮಾಂಡ್‌ಗೆ ವರದಿಯನ್ನು ಸಲ್ಲಿಸಿದ್ದೇನೆ. ರಾಜ್ಯದ ಪರಿಸ್ಥಿತಿ ಮತ್ತು ಮುಂದಿನ ಕಾರ್ಯತಂತ್ರದ ಬಗ್ಗೆ ಹೈಕಮಾಂಡ್‌ ತೆಗೆದುಕೊಳ್ಳುವ ತೀರ್ಮಾನಕ್ಕೆ ಬದ್ಧನಾಗಿರುತ್ತೇನೆ..” ಎಂದು ಅಣ್ಣಾಮಲೈ ಹೇಳಿದ್ದಾರೆ.

Exit mobile version