Site icon PowerTV

ದ್ವಿತೀಯ ಪಿಯು ಫಲಿತಾಂಶ ಪ್ರಕಟ; ಉಡುಪಿ ಫಸ್ಟ್​, ಯಾದಗಿರಿ ಲಾಸ್ಟ್​

ದ್ವಿತೀಯ ಪಿಯುಸಿ ಫಲಿಶಾಂಶ ಪ್ರಕಟವಾಗಿದ್ದು. ಒಟ್ಟು ಫಲಿತಾಂಶ 73.45 ಶೇಕಡಾ ಬಂದಿದೆ. ಉಡುಪಿ ಜಿಲ್ಲೆ ಫಲಿತಾಂಶದಲ್ಲಿ ಪ್ರಥಮ ಸ್ಥಾನ ಗಳಿಸಿದ್ದು ಶೇಕಡಾ 93.90% ರಷ್ಟು ಫಲಿತಾಂಶ ಬಂದಿದ್ದರೆ. ದಕ್ಷಿಣ ಕನ್ನಡ ಜಿಲ್ಲೆಗೆ ದ್ವೀತಿಯ ಸ್ಥಾನ ಗಳಿಸಿದೆ, ಯಾದಗಿರಿ ಜಿಲ್ಲೆ ಕೊನೆಯ ಸ್ಥಾನಕ್ಕೆ ತೃಪ್ತಿಪಟ್ಟಿಕೊಂಡಿದೆ. ಇನ್ನು ಒಟ್ಟು 123 ಕಾಲೇಜುಗಳಲ್ಲಿ ಶೂನ್ಯ ಫಲಿತಾಂಶ ಬಂದಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಸುದ್ದಿಗೋಷ್ಟಿಯಲ್ಲಿ ತಿಳಿಸಿದ್ದಾರೆ.

6,81,079 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಅವರಲ್ಲಿ 4,68,439 ಮಂದಿ ತೇರ್ಗಡೆಯಾಗಿದ್ದಾರೆ. ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ 93.90% ಸಾಧನೆ ಮಾಡುವ ಮೂಲಕ  ಉಡುಪಿ ಜಿಲ್ಲೆ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದೆ.  ಎರಡನೇ ಸ್ಥಾನ ದಕ್ಷಿಣ ಕನ್ನಡ (93.57%),  ಮೂರನೇ ಸ್ಥಾನವನ್ನು ಬೆಂಗಳೂರು ದಕ್ಷಿಣ(85.36%) ಪಡೆದುಕೊಂಡಿದೆ. ಕೊನೆ ಸ್ಥಾನ ಯಾದಗಿರಿ ಪಡೆದುಕೊಂಡಿದೆ.

ಇದನ್ನೂ ಓದಿ :ಕಾಲುವೆಯಲ್ಲಿ ಮುಳುಗಿ ಒಂದೇ ಕುಟುಂಬದ ಮೂರು ಮಕ್ಕಳು ಸಾ*ವು

ಕಲಾ ವಿಭಾಗದಲ್ಲಿ ಬಳ್ಳಾರಿಯ ಸಂಜನಾ ಬಾಯಿ ರಾಜ್ಯಕ್ಕೆ ಮೊದಲ ಸ್ಥಾನ ಗಳಿಸಿದ್ದು. 600 ಅಂಕಗಳಿಗೆ 597 ಅಂಕ ಗಳಿಸಿದ್ದಾರೆ. ಇನ್ನು ವಾಣಿಜ್ಯ ವಿಭಾಗದಲ್ಲಿ ವಿದ್ಯಾರ್ಥಿನಿ ದೀಪಶ್ರೀ 599 ಅಂಕ ಗಳಿಸಿ ವಾಣಿಜ್ಯ ವಿಭಾಗದಲ್ಲಿ ಅತಿ ಹೆಚ್ಚು ಅಂಕ ಗಳಿಸಿದ್ದಾರೆ.

ಇನ್ನು ವಿಜ್ಞಾನ ವಿಭಾಗದಲ್ಲಿ ಅಮೂಲ್ಯ ಕಾಮತ್​ ಎಂಬ ವಿದ್ಯಾರ್ಥಿನಿ 600ಕ್ಕೆ 599 ಅಂಕ ಗಳಿಸಿ ವಿಜ್ಞಾನ ವಿಭಾಗದಲ್ಲಿ ಅತಿ ಹೆಚ್ಚು ಅಂಕ ಗಳಿಸಿದ್ದು. ಮಂಗಳೂರಿನ ಎಕ್ಸಪರ್ಟ್ ಕಾಲೇಜಿನಲ್ಲಿ ವ್ಯಾಸಂಗ ಮಾಡಿದ್ದರು ಎಂದು ತಿಳಿದು ಬಂದಿದೆ.

ಯಾವ ಶ್ರೇಣಿಯಲ್ಲಿ ಎಷ್ಟು ಮಂದಿ ಪಾಸ್‌?
ಉನ್ನತ ಶ್ರೇಣಿ- 1,00,571
ಪ್ರಥಮ ದರ್ಜೆ- 2,78,054
ದ್ವೀತಿಯ ದರ್ಜೆ-70969
ತೃತೀಯ ದರ್ಜೆ-18845

 

Exit mobile version