Site icon PowerTV

ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಫೇಲ್​ ಆದ ವಿದ್ಯಾರ್ಥಿನಿ ಆತ್ಮಹ*ತ್ಯೆಗೆ ಶರಣು

ಮೈಸೂರು : ಇಂದು (ಏ.08) ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು. ಪರೀಕ್ಷೆಯಲ್ಲಿ ಅನುತೀರ್ಣಳಾದ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರಿನಲ್ಲಿ ನಡೆದಿದೆ.

ಮೈಸೂರಿನ ಕಲಾಮಂದಿರ ಅಪಾರ್ಟ್ಮೆಂಟ್ ನಲ್ಲಿ ಘಟನೆ ನಡೆದಿದ್ದು. 19 ವರ್ಷದ ವಿದ್ಯಾರ್ಥಿನಿ ಐಶ್ವರ್ಯ ಒಂಟಿಕೊಪ್ಪಲಿನ ಸರ್ಕಾರಿ ಪಿಯು ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದರು. ವಿಜ್ಞಾನ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿದ್ದ ಐಶ್ವರ್ಯ ಪರೀಕ್ಷೆಯನ್ನು ಸಮರ್ಥವಾಗಿ ಎದುರಿಸಿದ್ದಳು. ಆದರೆ ಇಂದು ಫಲಿತಾಂಶ ಹೊರಬಿದ್ದಿದ್ದು. ಫೇಲ್​ ಆದ ಕಾರಣ ಯುವತಿ ಆತ್ಮಹತ್ಯೆಗೆ ಶರಣಾಗಿದ್ದಾಳೆ.

ಇದನ್ನೂ ಓದಿ :ಶ್ರೀಕಂಠೇಶ್ವರ ರಥೋತ್ಸವದಲ್ಲಿ ಅವಘಢ ಸಂಭವ; ಕಾಲಜ್ಞಾನಿ ಭವಿಷ್ಯ

ಮನೆಯಲ್ಲಿ ಯಾರು ಇಲ್ಲದ ವೇಳೆ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾಗಿದ್ದು. ಪರೀಕ್ಷೆಯಲ್ಲಿ ಫೇಲ್​ ಆಗಿದ್ದಕ್ಕೆ ಮನನೊಂದು ಈ ನಿರ್ಧಾರ ಮಾಡಿದ್ದಾಳೆ. ಮಗಳು ಸಾವನ್ನಪ್ಪಿರುವ ವಿಷಯ ತಿಳಿಯುತ್ತಿದ್ದಂತೆ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.

Exit mobile version