Site icon PowerTV

ಬೊಲೆರೋ ವಾಹನ ಹಾಗೂ ಸಾರಿಗೆ ಬಸ್ ನಡುವೆ ಭೀಕರ ಅಪಘಾತ; ಒಂದೇ ಗ್ರಾಮದ ನಾಲ್ವರು ಸಾ*ವು

ಯಾದಗಿರಿ : ಭೀಕರ ರಸ್ತೆ ಅಪಘಾತಕ್ಕೆ ನಾಲ್ವರು ಸಾವನ್ನಪ್ಪಿರುವ ಘಟನೆ ಯಾದಗಿರಿಯಲ್ಲಿ ನಡೆದಿದ್ದು. ಬೊಲೆರೋ ವಾಹನಕ್ಕೆ ಸಾರಿಗೆ ಬಸ್​ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ. ಮೃತರೆಲ್ಲರನ್ನು ಒಂದೇ ಗ್ರಾಮದವರು ಎಂದು ಗುರುತಿಸಲಾಗಿದೆ.

ಯಾದಗಿರಿ ಜಿಲ್ಲೆಯ, ಶಹಾಪುರ ತಾಲೂಕಿನ, ಮದ್ದರಕಿ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತ ಸಂಭವಿಸಿದ್ದು. ಕಲಬುರಗಿಯ ಘತ್ತರಗಿ ಭಾಗ್ಯವಂತಿ ದೇವರ ಕಾರ್ಯಕ್ಕೆ ಎಂದು ಬೊಲೆರೋ ವಾಹನದಲ್ಲಿ ಹೋಗಿದ್ದ ಕುಟುಂಬಸ್ಥರು ದೇವರ ಕಾರ್ಯ ಮುಗಿಸಿಕೊಂಡು ವಾಪಾಸಾಗುತ್ತಿದ್ದರು. ಈ ವೇಳೆ ಕೆಎಸ್​ಆರ್​ಟಿಸಿ ಬಸ್​ಗೆ ಬೊಲೆರೋ ವಾಹನ ಡಿಕ್ಕಿಯಾಗಿದ್ದು. ನಾಲ್ವರು ಸಾವನ್ನಪ್ಪಿದ್ದಾರೆ.

ಇದನ್ನೂ ಓದಿ :ಬೆಂಗಳೂರು ಮೆಟ್ರೋ ನಿಲ್ದಾದಲ್ಲಿ ಯುವ ಜೋಡಿಯ ರೋಮ್ಯಾನ್ಸ್ ವಿಡಿಯೋ ವೈರಲ್

ಮೃತರೆಲ್ಲರನ್ನು ಯಾದಗಿರಿ ತಾಲೂಕಿನ ವರ್ಕನಹಳ್ಳಿ ಗ್ರಾಮಸ್ಥರಗಿದ್ದು. ಮೃತರನ್ನು ಶರಣಪ್ಪ,ಸುನೀತಾ, ಸೋಮವ್ವ,ತಂಗವ್ವ ಎಂದು ಗುರುತಿಸಲಾಗಿದೆ. ಘಟನೆಯಲ್ಲಿ 12ಕ್ಕೂ ಜನರು ಗಾಯಗೊಂಡಿದ್ದು. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಭೀಮರಾಯನ ಗುಡಿ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ಅಪಘಾತ ಸಂಭವಿಸಿದೆ. ಇದನ್ನೂ ಓದಿ :42ನೇ ವಯಸ್ಸಿನಲ್ಲಿ PUC ಪರೀಕ್ಷೆ ಪಾಸ್​ ಮಾಡಿ ಮಾದರಿಯಾದ ಗೃಹಿಣಿ

Exit mobile version