Site icon PowerTV

PSI ಅನ್ನಪೂರ್ಣಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ ಕೊಡುತ್ತೇನೆ ; ಲಕ್ಷ್ಮೀ ಹೆಬ್ಬಾಳ್ಕರ್

ಬೆಳಗಾವಿ : ಹುಬ್ಬಳ್ಳಿಯಲ್ಲಿ 5 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಕುರಿತು ಬೆಳಗಾವಿಯಲ್ಲಿ ಮಾತನಾಡಿದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್​. ಪೊಲೀಸರ ಕಾರ್ಯಕ್ಕೆ ಶ್ಲಾಘನೆ ವ್ಯಕ್ತಪಡಿಸಿದ್ದು. ಪಿಎಸ್ಐ ಅನ್ನಪೂರ್ಣ ಅವರಿಗೆ ಮಹಿಳಾ ಕಲ್ಯಾಣ ಇಲಾಖೆಯಿಂದ ಕಿತ್ತೂರು ರಾಣಿ ಪ್ರಶಸ್ತಿ ಕೊಡುತ್ತೇನೆ ಎಂದು ಹೇಳಿದರು.

ಹುಬ್ಬಳ್ಳಿಯಲ್ಲಿ ನಡೆದ ಘಟನೆ ಬಗ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ ಲಕ್ಷ್ಮೀ ಹೆಬ್ಬಾಳ್ಕರ್​ ‘ ಇಂತಹ ದುಷ್ಕೃತ್ಯ ಎಸೆಗಿದ ಪಾಪಿಗಳಿಗೆ ಗಲ್ಲು ಶಿಕ್ಷೆಯಾಗಬೇಕು. ಪಿಎಸ್​ಐ ಅನ್ನಪೂರ್ಣ ಅವರ ಕಾರ್ಯಕ್ಕೆ ಶ್ಲಾಘನೆ ವ್ಯಕ್ತಪಡಿಸುತ್ತೇನೆ. ಅವರಿಗೆ ಅತ್ಯುನ್ನತ ಪದಕ ಸಿಗಬೇಕು ಎಂದು ಸಿಎಂ ಮತ್ತು ಗೃಹಸಚಿವರಿಗೆ ಮನವಿ ಮಾಡುತ್ತೇನೆ. ಇಂತಹ ಅಧಿಕಾರಿಗಳು ಬೇರೆ ಅಧಿಕಾರಿಗಳಿಗೆ ದಾರಿ ದೀಪವಾಗಬೇಕು. ನಮ್ಮ ಇಲಾಖೆಯಿಂದ ಇವರಿಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿಯನ್ನು ನೀಡುತ್ತೇನೆ ಎಂದು ಹೇಳಿದರು.

ಇದನ್ನೂ ಓದಿ : ಅಂಬೇಡ್ಕರ್ ಬಯಸಿದ್ದ ಸಮಾಜ ನಿರ್ಮಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇವೆ: ಸಿಎಂ ಸಿದ್ದರಾಮಯ್ಯ

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಚೆನ್ನಾಗಿದೆ..!

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹಾಳಾಗಿದೆ ಎಂಬ ಬಿಜೆಪಿ ಆರೋಪಕ್ಕೆ ತಿರುಗೇಟು ನೀಡಿದ ಲಕ್ಷ್ಮೀ ಹೆಬ್ಬಾಳ್ಕರ್​ ‘ನಮ್ಮ ಸರ್ಕಾರ ಇಂತಹ ಘಟನೆಗಳನ್ನು ಸಮರ್ಥವಾಗಿ ನಿಭಾಯಿಸಿದೆ. ಬೇರೆ ರಾಜ್ಯಗಳಿಗೆ ಹೊಲಿಸಲು ನಾನು ಹೋಗಲ್ಲ. ಬಿಜೆಪಿಯವರು ಮಣಿಪುರದ ಕಡೆ ಒಮ್ಮೆ ನೋಡಲಿ. ಪ್ರಧಾನಿ ಒಮ್ಮೆಯೂ ಮಣಿಪುರಕ್ಕೆ ಭೇಟಿಕೊಟ್ಟಿಲ್ಲ. ನಮ್ಮ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಚೆನ್ನಾಗಿದೆ ಎಂದು ಹೇಳಿದರು.

Exit mobile version