Site icon PowerTV

13ಸಾವಿರ ಕೋಟಿ ವಂಚಿಸಿ ಪರಾರಿಯಾಗಿದ್ದ ಮೆಹುಲ್​ ಚೋಕ್ಸಿ ಬೆಲ್ಜಿಯಂನಲ್ಲಿ ಅರೆಸ್ಟ್​

ಮುಂಬೈ: ಪಂಜಾಬ್ ನ್ಯಾಷನಲ್ ಬ್ಯಾಂಕ್ ಸಾಲ ಹಗರಣದಲ್ಲಿ ಪ್ರಮುಖ ಆರೋಪಿಯಾದ ದೇಶ ಭ್ರಷ್ಟ ವಜ್ರೋದ್ಯಮಿ ಮೆಹುಲ್ ಚೋಕ್ಸಿಯನ್ನು ಬೆಲ್ಜಿಯಂನಲ್ಲಿ ಬಂಧಿಸಲಾಗಿದ್ದು. ಭಾರತ ಸರ್ಕಾರದ ಕೋರಿಕೆಯ ಮೇರೆಗೆ ಆತನನ್ನು ಶನಿವಾರ ಬಂಧಿಸಲಾಗಿದೆ ಎಂದು ತಿಳಿದು ಬಂದಿದೆ.

ವಜ್ರದ ವ್ಯಾಪಾರಿಗಳಾದ ನೀರವ್​ ಮೋದಿ ಮತ್ತು ಮೆಹುಲ್​ ಚೋಕ್ಸಿ ಸರ್ಕಾರಿ ಸ್ವಾಮ್ಯದ ಪಂಜಾಬ್ ನ್ಯಾಷನಲ್‌ ಬ್ಯಾಂಕ್‌ನಿಂದ 13,850 ಕೋಟಿ ರೂ. ಸಾಲ ಪಡೆದಿದ್ದರು. ಆದರೆ ಸಾಲ ಪಾವತಿಸಿದೆ ಮೆಹುಲ್ ಚೋಕ್ಸಿ 2018ರಲ್ಲಿ ದೇಶದಿಂದ ಪರಾರಿಯಾಗಿದ್ದರು. ಆಂಟಿಗುವಾ ಮತ್ತು ಬಾರ್ಬುಡಾದಲ್ಲಿ ವಾಸಿಸುತ್ತಿದ್ದರು ಎಂದು ಹೇಳಾಗುತ್ತಿತ್ತು. ಆದರೆ ಇತ್ತೀಚೆಗೆ ಬೆಲ್ಜಿಯಂನಲ್ಲಿ ವಾಸಿಸುತ್ತಿದ್ದನು.

ಇದನ್ನೂ ಓದಿ :ನನ್ನನ್ನು ಮುಗಿಸಲು ಬಂದ್ರೆ ಇಡೀ ರಾಜ್ಯದಲ್ಲಿ ಬೆಂಕಿ ಹೊತ್ತಿಕೊಳ್ಳುತ್ತೆ: ಯತ್ನಾಳ್​ 

ಈತನನ್ನು ಬಂಧಿಸಿ ಭಾರತಕ್ಕೆ ಹಸ್ತಾಂತರಿಸುವಂತೆ ಸಿಬಿಐ ಮತ್ತು ಇಡಿ ಬೆಲ್ಜಿಯಂ ಸರ್ಕಾರಕ್ಕೆ ಮನವಿ ಮಾಡಿತ್ತು. ಇದಕ್ಕೆ ಸಮ್ಮತಿಸಿರುವ ಬೆಲ್ಜಿಯಂ ಸರ್ಕಾರ ಶನಿವಾರ ಚೊಕ್ಸಿಯನ್ನು ಬಂಧಿಸಿ ಜೈಲಿಗಟ್ಟಿದೆ ಎಂದು ತಿಳಿದು ಬಂದಿದೆ.

ಸದ್ಯ ಚೋಕ್ಸಿ ಬೆಲ್ಜಿಯಂ ಕೋರ್ಟ್‌ನಲ್ಲಿ ತನ್ನನ್ನು ಭಾರತಕ್ಕೆ ಹಸ್ತಾಂತರಿಸದಂತೆ ಮನವಿ ಮಾಡಬಹುದು. ಹೀಗಾಗಿ ಆರೋಪಿಯನ್ನ ಭಾರತಕ್ಕೆ ಕರೆತರಲು ಸಂಬಂಧಪಟ್ಟ ತನಿಖಾ ಸಂಸ್ಥೆಗಳು ಅಗತ್ಯ ಸಿದ್ಧತೆ ಮಾಡಿಕೊಳ್ಳುತ್ತಿವೆ. ಕಾನೂನು ಹೋರಾಟ ಸ್ವಲ್ಪ ಸಮಯ ತೆಗೆದುಕೊಳ್ಳಬಹುದು ಎಂದು ಮೂಲಗಳು ತಿಳಿಸಿವೆ

ಪಂಜಾಬ್ ನ್ಯಾಷನಲ್ ಬ್ಯಾಂಕ್‌ಗೆ 13,850 ಕೋಟಿ ರೂಪಾಯಿ ವಂಚಿಸಿದ ಆರೋಪದ ಮೇಲೆ ಕೇಂದ್ರೀಯ ತನಿಖಾ ಸಂಸ್ಥೆ (ಸಿಬಿಐ) ಮತ್ತು ಜಾರಿ ನಿರ್ದೇಶನಾಲಯ (ಇಡಿ)ಕ್ಕೆ ಪ್ರಮುಖವಾಗಿ ಬೇಕಾಗಿರುವ ಚೋಕ್ಸಿ ಸದ್ಯ ಕೆರಿಬಿಯನ್ ದ್ವೀಪ ರಾಷ್ಟ್ರವಾದ ಆಂಟಿಗುವಾ ಮತ್ತು ಬಾರ್ಬುಡಾದಲ್ಲಿ ವಾಸಿಸುತ್ತಿದ್ದ.

 

Exit mobile version