Tuesday, September 9, 2025
HomeUncategorizedಅಂಬೇಡ್ಕರ್ ಬಯಸಿದ್ದ ಸಮಾಜ ನಿರ್ಮಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇವೆ: ಸಿಎಂ ಸಿದ್ದರಾಮಯ್ಯ

ಅಂಬೇಡ್ಕರ್ ಬಯಸಿದ್ದ ಸಮಾಜ ನಿರ್ಮಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇವೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಸರ್ಕಾರ ಅಂಬೇಡ್ಕರ್ ಅವರು ಪ್ರತಿಪಾದಿಸಿದ್ದ ಶಿಕ್ಷಣ, ಸಂಘಟನೆ ಮತ್ತು ಹೋರಾಟದ ಮಂತ್ರ ಅನುಸರಿಸುವ ಪ್ರಯತ್ನ ಮಾಡುತ್ತಿದ್ದು, ಅವರು ಬಯಸಿದಂತ ಸಮಾಜವನ್ನು ನಿರ್ಮಾಣ ಮಾಡಲು ಪ್ರಾಮಾಣಿಕ ಪ್ರಯತ್ನವನ್ನು ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಸಂವಿಧಾನ ಶಿಲ್ಪಿ ಡಾ: ಬಿ. ಆರ್.ಅಂಬೇಡ್ಕರ್ ಅವರ 134 ನೇ ಜನ್ಮ ದಿನಾಚರಣೆಯ ಅಂಗವಾಗಿ ವಿಧಾನಸೌಧದ ಪೂರ್ವ ದ್ವಾರದಲ್ಲಿರುವ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಪುಷ್ಪ ನಮನ ಸಲ್ಲಿಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ “ನಮ್ಮ ಸರ್ಕಾರ ಅತ್ಯಂತ ಗೌರವ, ನಮ್ರತೆಯಿಂದ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಜನ್ಮ ದಿನವನ್ನು ಆಚರಿಸುತ್ತಿದೆ. ಅಂಬೇಡ್ಕರ್ ಅವರು ಕೇವಲ ದಲಿತರ ನಾಯಕರಾಗಿರದೇ ಸಮಾಜದಲ್ಲಿ ಶೋಷಿತರು, ಅನ್ಯಾಯ ಹಾಗೂ ದೌರ್ಜನ್ಯಕ್ಕೆ ಒಳಗಾದವರ ಪರವಾಗಿ ಅನ್ಯಾಯದಿಂದ ಮುಕ್ತಿ ಪಡೆಯಬೇಕೆಂದು ತಮ್ಮ ಬದುಕನ್ನೇ ಮುಡಿಪಾಗಿಟ್ಟಿದ್ದರು.

ಇದನ್ನೂ ಓದಿ :ಕೈತುತ್ತು ಕೊಟ್ಟು ಬೆಳೆಸಿದ ಮಗಳ ಚಿತೆಗೆ ಅಗ್ನಿ ಸ್ಪರ್ಷ ಮಾಡಿದ ತಂದೆ

ಅಂಬೇಡ್ಕರ್ ಎಲ್ಲರಿಗೂ ಆರ್ಥಿಕ, ಸಾಮಾಜಿಕ, ರಾಜಕೀಯ ಸ್ವಾತಂತ್ರ್ಯ ದೊರಕಿಸಲು ಶ್ರಮಿಸಿದವರು
ಮಹಾನ್ ಮೇಧಾವಿಯಾಗಿದ್ದ ಅಂಬೇಡ್ಕರ್, ಅವರ ಸ್ವಾರ್ಥಕ್ಕಾಗಿ ಓದಿಕೊಳ್ಳದೆ ಶೋಷಿತರ, ಅಸ್ಪೃಶ್ಯತೆಯಿಂದ ನರಳುತ್ತಿರುವವ ಜನರಿಗೆ ವಿಮೋಚನೆ ನೀಡಲೆಂದೇ ಜ್ಞಾನಾರ್ಜನೆ ಮಾಡಿಕೊಂಡಿದ್ದರು. ದೇಶದ ಕೆಲವೇ ಮೇಧಾವಿಗಳಲ್ಲಿ ಅವರೂ ಒಬ್ಬರು.

ದೇಶ ಕಂಡ ಮಹಾನ್ ನಾಯಕರು ಹಾಗೂ ಮಾನವತಾವಾದಿ. ಎಲ್ಲರೂ ಮನುಷ್ಯರಾಗಿ ಬದುಕಬೇಕು. ಸಮಾಜದಲ್ಲಿ ಎಲ್ಲರಿಗೂ ಸಮಾನತೆ ದೊರಕಬೇಕು. ಆರ್ಥಿಕ, ಸಾಮಾಜಿಕ, ರಾಜಕೀಯ ಸ್ವಾತಂತ್ರ್ಯ ದೊರಕಬೇಕು. ಹಾಗಾದಾಗ ಮಾತ್ರ ದೇಶಕ್ಕೆ ನಿಜವಾದ ಸ್ವಾತಂತ್ರ್ಯ ಸಿಗುತ್ತದೆ. ಮಹಿಳೆಯರು ಆರ್ಥಿಕವಾಗಿ, ಸಾಮಾಜಿಕವಾಗಿ ಸಬಲರಾಗಬೇಕು. ಅಸ್ಪೃಶ್ಯತೆ ನಾಶವಾಗಬೇಕು ಎಂದು ಅಂಬೇಡ್ಕರ್ ಶ್ರಮಿಸಿದ್ದರು ಎಂದರು.

ಇದನ್ನೂ ಓದಿ :ಇಂದು ಮಧ್ಯರಾತ್ರಿಯಿಂದಲೇ ಲಾರಿ ಮುಷ್ಕರ ಫಿಕ್ಸ್; ದಿನಬಳಕೆ ವಸ್ತುಗಳ ಪೂರೈಕೆಯಲ್ಲಿ ವ್ಯತ್ಯಯ

ನೆಹರೂ ಅಂಬೇಡ್ಕರ್ ಅವರನ್ನು ವಿರೋಧಿಸಲಿಲ್ಲ

ಬಿಜೆಪಿಯವರು ಅಂಬೆಡ್ಕರ್​ ನೆಹರೂರನ್ನ ವಿರೋಧಿಸುತ್ತಾರೆ ಎನ್ನುತ್ತಾರೆ. ಆದರೆ ಅಂಬೇಡ್ಕರ್ ಅವರನ್ನು ನೆಹರೂ ವಿರೋಧಿಸಲಿಲ್ಲ. ಹಾಗಿದ್ದರೆ, ಅಂಬೇಡ್ಕರ್ ಅವರನ್ನು ಸಂವಿಧಾನ ಬರೆಯಲು ಆಯ್ಕೆ ಮಾಡುತ್ತಿರಲಿಲ್ಲ. ಹಿಂದೂ ಕೋಡ್ ಬಿಲ್ ತಂದಾಗ ನೆಹರೂ ಅದರ ಪರವಾಗಿಯೇ ಇದ್ದರು. ನಮ್ಮಲ್ಲಿರುವ ಕೆಲವು ಶಕ್ತಿಗಳು ನೆಹರೂ ಅವರು ಅದನ್ನು ಜಾರಿ ಮಾಡಲು ಬಿಡಲಿಲ್ಲ. ಆದರೆ ಹಿಂದೂ ಕೋಡ್ ಬಿಲ್ ನಲ್ಲಿರುವ ಅಂಶಗಳನ್ನು ನೆಹರೂ ಅವರು ಅವರ ಅಧಿಕಾರದ ಅವಧಿಯಲ್ಲಿ ಜಾರಿ ಮಾಡುವ ಪ್ರಯತ್ನ ಮಾಡಿದ್ದರು ಎಂದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments