Site icon PowerTV

ಪೀಣ್ಯ ಫ್ಲೈಓವರ್ ಮೇಲೆ ಹೊತ್ತಿ ಉರಿದ ಲಾರಿ; ವಾಹನ ಸಂಚಾರಕ್ಕೆ ನಿರ್ಬಂಧ

ಬೆಂಗಳೂರು: ಪೀಣ್ಯ ಫ್ಲೈಓವರ್​ ಮೇಲೆ ಲಾರಿಯೊಂದಕ್ಕೆ ಬೆಂಕಿ ತಗುಲಿ ಕಿ,ಮೀಗಟ್ಟಲೆ ಟ್ರಾಫಿಕ್​ ಜಾಮ್​ ಉಂಟಾಗಿದ್ದು. ಪೀಣ್ಯ ಫ್ಲೈಓವರ್​ ಮೇಲೆ ವಾಹನ ಸಂಚಾರವನ್ನು ನಿರ್ಭಂಧಿಸಲಾಗಿದೆ.

ಮಧ್ಯಹ್ನಾ 1 ಗಂಟೆ ಸುಮಾರಿಗೆ ಘಟನೆ ನಡೆದಿದ್ದು. ಫ್ಲೈಓವರ್​ ಮೇಲೆ ಚಲಿಸುತ್ತಿದ್ದ ಲಾರಿಯಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು. ಕ್ಷಣಾರ್ಧದಲ್ಲೇ ಬೆಂಕಿ ಲಾರಿಯನ್ನು ಆವರಿಸಿಕೊಂಡಿದೆ. ಬೆಂಕಿ ಕಾಣಿಸುತ್ತಿದ್ದಂತೆ ಲಾರಿ ಚಾಲಕ ಕೆಳಗಿಳಿದಿದ್ದು ಪ್ರಾಣ ಉಳಿಸಿಕೊಂಡಿದ್ದಾರೆ.

ಇದನ್ನೂ ಓದಿ :ನೆನ್ನೆ ಜೈಲ್​, ಇಂದು ಬೇಲ್​; ರೀಲ್ಸ್​ ರಜತ್​​ಗೆ ಜಾಮೀನು ಮಂಜೂರು

ಬೆಂಕಿ ಹೊತ್ತಿಕೊಂಡ ಹಿನ್ನೆಲೆ ಕೆಲಗಂಟೆಗಳ ಕಾಲ ಪೀಣ್ಯ ಫ್ಲೈಓವರ್ ತಾತ್ಕಾಲಿಕವಾಗಿ ಬಂದ್ ಮಾಡಲಾಗಿತ್ತು. ನಗರದ ಕಡೆಗೆ ಬರುವವರು ಫ್ಲೈಓವರ್ ಕೆಳಗಡೆ ಬರುವಂತೆ ಸೂಚನೆ ನೀಡಲಾಗಿತ್ತು. ಘಟನೆ ನಡೆದ ಕೂಡಲೇ ಸ್ಥಳೀಯರು 112ಕ್ಕೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳ ಸಿಬ್ಬಂದಿಯಿಂದ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ.

Exit mobile version