Site icon PowerTV

ಕೋಟಿ ಒಡೆಯನಾದ ಮಾದಪ್ಪ; 3.26 ಕೋಟಿ ರೂಪಾಯಿ ಕಾಣಿಕೆ ಸಂಗ್ರಹ

ಚಾಮರಾಜನಗರ: ಕರ್ನಾಟಕದ ಪ್ರಸಿದ್ಧ ಯಾತ್ರಾ ಸ್ಥಳವಾದ ಮಲೆ ಮಹದೇಶ್ವರ ಬೆಟ್ಟದಲ್ಲಿ ಹುಂಡಿ ಏಣಿಕೆ ಕಾರ್ಯ ನಡೆದಿದ್ದು, ಕಳೆದ 35 ದಿನಗಳ ಅವಧಿಯಲ್ಲಿ ದಾಖಲೆಯ 3.26 ಕೋಟಿ ರೂಪಾಯಿ ಮೊತ್ತ ಸಂಗ್ರಹವಾಗಿದೆ.

ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಇತಿಹಾಸ ಪ್ರಸಿದ್ಧ ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆದ ಹುಂಡಿ ಹಣ ಎಣಿಕೆಯಲ್ಲಿ ಈ ಬಾರಿ 35 ದಿನಗಳ ಅವಧಿಯಲ್ಲಿ ಬರೋಬ್ಬರಿ 3.26 ಕೋಟಿ ಕೋಟಿ ರೂ. ಸಂಗ್ರಹವಾಗಿದ್ದು. ಬೆಟ್ಟದ ಇತಿಹಾಸದಲ್ಲೇ ಅತಿ ಹೆಚ್ಚು ಎನ್ನಲಾಗಿದೆ.

ಇದನ್ನೂ ಓದಿ :ವಿಜಯಪುರದಲ್ಲಿ ಜನಾಕ್ರೋಶ ಯಾತ್ರೆ; ‘ಅತಿಥಿ ದೇವೋಭವ’ ಎಂದು ಸ್ವಾಗತಿಸಿದ ಯತ್ನಾಳ್​ ಬೆಂಬಲಿಗರು

ಅಲ್ಲದೇ 47 ಗ್ರಾಂ ಚಿನ್ನ, 2 ಕೆಜಿ 200 ಗ್ರಾಂ ಬೆಳ್ಳಿ ಕಾಣಿಕೆ ರೂಪದಲ್ಲಿ ಸಂಗ್ರಹವಾಗಿದೆ. ಇದರೊಂದಿಗೆ 11 ವಿದೇಶಿ ನೋಟುಗಳು, 2,000 ರೂ. ಮುಖಬೆಲೆಯ 20 ನೋಟುಗಳು ಕಂಡುಬಂದಿವೆ. ಸಾಲೂರು ಶ್ರೀಗಳ ನೇತೃತ್ವದಲ್ಲಿ ನಡೆದ ಹುಂಡಿ ಎಣಿಕೆ ಕಾರ್ಯ ನಡೆಯಿತು.

Exit mobile version