Site icon PowerTV

ಜನಿವಾರ ತೆಗೆಸಿ CET ಪರೀಕ್ಷೆಗೆ ಅವಕಾಶ; ಬ್ರಾಹ್ಮಣ ಸಂಘಟನೆಗಳಿಂದ ಆಕ್ರೋಶ

ಶಿವಮೊಗ್ಗ : ಸಿಇಟಿ ಪರೀಕ್ಷೆ ಸಂದರ್ಭದಲ್ಲಿ ಬ್ರಾಹ್ಮಣ ವಿದ್ಯಾರ್ಥಿಗಳ ಗಾಯಿತ್ರಿ ದೀಕ್ಷೆ ಪಡೆದ ಜನಿವಾರವನ್ನು ತೆಗೆಸಿ ಪರೀಕ್ಷೆ ಬರೆಯಲು ಒಳಗೆ ಕಳುಹಿಸಿರುವುದಕ್ಕೆ ಅಖಿಲ ಕರ್ನಾಟಕ ಬ್ರಾಹ್ಮಣ ಸಭಾ ಮತ್ತು ಶಿವಮೊಗ್ಗ ಜಿಲ್ಲೆಯ ಬ್ರಾಹ್ಮಣ ಸಂಘಟನೆಗಳು ತೀವ್ರ ಖಂಡನೆ ವ್ಯಕ್ತಪಡಿಸಿದ್ದು. ಹೀನ ಕೃತ್ಯ ಎಸಗಿದ ಅಧಿಕಾರಿಗಳ ವಿರುದ್ದ ಸೂಕ್ತ ಕ್ರಮ ಕೈಗೊಳ್ಳಲು ಆಗ್ರಹಿಸಿದ್ದಾರೆ.

ಶಿವಮೊಗ್ಗ ನಗರದ ಆದಿಚುಂಚನಗಿರಿ ಕಾಲೇಜಿನ ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆ ಬರೆಯಲು ಕಾಲೇಜಿನ ಒಳಭಾಗಕ್ಕೆ ತೆರಳುವ ಸಮಯದಲ್ಲಿ ಅಲ್ಲಿನ ಸಿಬ್ಬಂದಿಗಳು ಬ್ರಾಹ್ಮಣ ವಿದ್ಯಾರ್ಥಿಗಳು ಕೈಯಲ್ಲಿ ಕಟ್ಟಿಕೊಂಡಿದ್ದ ಕಾಶಿದಾರ ಮತ್ತು ಗಾಯಿತ್ರಿ ದೀಕ್ಷೆ ಪಡೆದ ಜನಿವಾರವನ್ನು ತೆಗೆಸಿದ್ದಾರೆ. ಈ ವಿಶಯವನ್ನು ಮಕ್ಕಳು ತಮ್ಮ ಪೋಷಕರಿಗೆ ತಿಳಿಸಿದ್ದು. ವಿದ್ಯಾರ್ಥಿಗಳ ಜನಿವಾರ ಬಿಚ್ಚಿಸಿ ಅವಮಾನ ಮಾಡಿದ ಬಗ್ಗೆ ತೀವ್ರ ಖಂಡನೆ ವ್ಯಕ್ತಿವಾಗಿದೆ. ಇದನ್ನೂ ಓದಿ :ಭೀಕರ ರಸ್ತೆ ಅಪಘಾತ; ಕುರಿಸಂತೆಗೆ ಹೋಗುತ್ತಿದ್ದ ನಾಲ್ವರು ಸಾವಿನ ಮನೆಗೆ

ವರ್ಷಪೂರ್ತಿ ಕಷ್ಟಪಟ್ಟು ಅಧ್ಯಯನ ಮಾಡಿ ಒಳ್ಳೆಯ ಭವಿಷ್ಯಕ್ಕಾಗಿ ಸಿದ್ದತೆ ಮಾಡಿಕೊಂಡು ಬಂದಿದ್ದ ವಿದ್ಯಾರ್ಥಿಗಳ ಜನಿವಾರ ಬಿಚ್ಚಿಸುವ ಅಧಿಕಾರಿಗಳ ಕೃತ್ಯ ಬ್ರಾಹ್ಮಣ ಮತ್ತು ಹಿಂದೂ ವಿರೋಧಿಯಾಗಿದ್ದು, ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಮತ್ತು ವಿಪ್ರ ಸಂಘಟನೆಗಳ ಒಕ್ಕೂಟ ತೀವ್ರವಾಗಿ ಖಂಡಿಸಿದೆ.

ಇದನ್ನೂ ಓದಿ :ಯಾವುದೇ ನಿರ್ಣಯ ಅಂಗೀಕರಿಸದೆ ಮುಕ್ತಾಯವಾದ ಸಚಿವ ಸಂಪುಟ ಸಭೆ; ಮೇ.02ಕ್ಕೆ ಅಂತಿಮ ಕ್ಲೈಮ್ಯಾಕ್ಸ್​

ಕೂಡಲೇ ಜಿಲ್ಲಾಧಿಕಾರಿಗಳು ತನಿಖೆ ನಡೆಸಿ ಹಿಂದೂ ಪರಂಪರೆಯ ಸಂಸ್ಕಾರವಾದ ಗಾಯಿತ್ರಿ ಮಂತ್ರ ದೀಕ್ಷೆಯ ಪ್ರಾಮುಖ್ಯತೆ, ಘನತೆ ಗೌರವ ಗೊತ್ತಿಲ್ಲದ ಧರ್ಮ ವಿರೋಧಿ ಕೃತ್ಯ ಎಸಗಿರುವ ಹೀನ ಅಧಿಕಾರಿಗಳ ಮೇಲೆ ಸೂಕ್ತ ಕ್ರಮ ಕೈಗೊಳ್ಳಲು ನಿರ್ದೇಶನ ನೀಡಬೇಕೆಂದು ಆಗ್ರಹಿಸಿದ್ದಾರೆ.

Exit mobile version