Site icon PowerTV

ಪ್ರವಾಸಿಗರ ಮೇಲೆ ಭಯೋತ್ಪಾದಕ ದಾಳಿ: ಅಮಿತ್​ ಶಾ ನೇತೃತ್ವದಲ್ಲಿ ತುರ್ತು ಸಭೆ

ಶ್ರೀ ನಗರ : ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಇಂದು ನಡೆದ ಭಯೋತ್ಪಾದಕ ದಾಳಿಯಲ್ಲಿ ಒಬ್ಬ ಪ್ರವಾಸಿ ಸಾವನ್ನಪ್ಪಿದ್ದು, ಕರ್ನಾಟಕದ 2 ಪ್ರವಾಸಿಗರು ಸೇರಿದಂತೆ 12 ಪ್ರವಾಸಿಗರು ಗಾಯಗೊಂಡಿದ್ದಾರೆ. ಘಟನೆ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರು ಕೇಂದ್ರ ಸಚಿವ ಅಮಿತ್ ಶಾ ಅವರನ್ನು ದೂರವಾಣಿ ಸಂಭಾಷಣೆಯ ಮೂಲಕ ಮಾಹಿತಿ ಪಡೆದಿದ್ದು. ಎಲ್ಲಾ ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳುವಂತೆ ಸೂಚಿಸಿದ್ದಾರೆ ಎಂದು ತಿಳಿದು ಬಂದಿದೆ.

ಇದನ್ನೂ ಓದಿ : ಭೀಕರ ಭಯೋತ್ಪಾದಕ ದಾಳಿ: ಕರ್ನಾಟಕದ ಇಬ್ಬರು ಸೇರಿದಂತೆ 12 ಪ್ರವಾಸಿಗರಿಗೆ ಗುಂಡೇಟು

ದಾಳಿಯ ಬೆನ್ನಲ್ಲೆ ಅಮಿತ್ ಶಾ ದೆಹಲಿಯಲ್ಲಿರುವ ತಮ್ಮ ಮನೆಯಲ್ಲಿ ತುರ್ತು ಸಭೆ ಕರೆದಿದ್ದಾರೆ, ಇದರಲ್ಲಿ ಗುಪ್ತಚರ ಬ್ಯೂರೋ ಮುಖ್ಯಸ್ಥ ತಪನ್ ದೇಕಾ ಮತ್ತು ಕೇಂದ್ರ ಗೃಹ ಕಾರ್ಯದರ್ಶಿ ಗೋವಿಂದ್ ಮೋಹನ್ ಭಾಗವಹಿಸಲಿದ್ದು. ಸಿಆರ್‌ಪಿಎಫ್ ಮುಖ್ಯಸ್ಥ ಜ್ಞಾನೇಂದ್ರ ಪ್ರತಾಪ್ ಸಿಂಗ್, ಜೆ & ಕೆ ಪೊಲೀಸ್ ಮಹಾನಿರ್ದೇಶಕ ನಳಿನ್ ಪ್ರಭಾತನ್ ಮತ್ತು ಕೆಲವು ಸೇನಾ ಅಧಿಕಾರಿಗಳು ಸಹ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದು ತಿಳಿದು ಬಂದಿದೆ.

ಇದನ್ನೂ ಓದಿ :ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್​ ಪಲ್ಟಿ: 50ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಂಭೀರ ಗಾಯ

ಘಟನೆ ಸಂಬಂಧ ಅಮಿತ್​ ಷಾ ಜಮ್ಮು ಕಾಶ್ಮೀರದ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಮತ್ತು ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅವರೊಂದಿಗೆ ಮಾತನಾಡಿ ಮಾಹಿತಿ ಪಡೆದಿದ್ದಾರೆ.

ಕರ್ನಾಟಕ ಮೂಲದ ಪ್ರವಾಸಿಗ ಸಾವು..!

ಜಮ್ಮು ಕಾಶ್ಮೀರಕ್ಕೆ ಕುಟುಂಬ ಸಮೇತ ಪ್ರವಾಸಕ್ಕೆ ತೆರಳಿದ್ದ ಶಿವಮೊಗ್ಗ ಮೂಲದ 47 ವರ್ಷದ ಮಂಜುನಾಥ್​ ಗೌಡ ಎಂಬುವವರು ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.

Exit mobile version