Sunday, August 24, 2025
Google search engine
HomeUncategorizedಪಹಲ್ಗಾಮ್​ನಲ್ಲಿ ದಾಳಿ ನಡೆಸಿದ ಉಗ್ರರ ಪೋಟೊ ಬಿಡುಗಡೆ ಮಾಡಿದ NIA

ಪಹಲ್ಗಾಮ್​ನಲ್ಲಿ ದಾಳಿ ನಡೆಸಿದ ಉಗ್ರರ ಪೋಟೊ ಬಿಡುಗಡೆ ಮಾಡಿದ NIA

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಬುಧವಾರ ನಡೆದ ಭಯೋತ್ಪಾದಕರ ದಾಳಿಯಲ್ಲಿ 26 ಪ್ರವಾಸಿಗರು ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದರು. ಘಟನೆ ಸಂಬಂಧ ದಾಳಿಯಲ್ಲಿ ಭಾಗಿಯಾಗಿದ್ದ ಮೂವರು ಉಗ್ರರ ರೇಖಾಚಿತ್ರವನ್ನು ರಾಷ್ಟ್ರೀತ ತನಿಖಾ ದಳ (NIA) ಬಿಡುಗಡೆ ಮಾಡಿದೆ.

ಭದ್ರತಾ ಪಡೆಗಳು ಭಯೋತ್ಪಾದಕರನ್ನು ಪತ್ತೆಹಚ್ಚಲು ಪ್ರತ್ಯಕ್ಷದರ್ಶಿಗಳ ಮಾಹಿತಿಯ ಮೇರೆಗೆ ಶಂಕಿತ ಭಯೋತ್ಪಾದಕರ ರೇಖಾಚಿತ್ರವನ್ನು ಬಿಡುಗಡೆಗೊಳಿಸಿದ್ದಾರೆ. ದಾಳಿ ಮಾಡಿರುವ ಉಗ್ರರನ್ನು ಆಸಿಫ್ ಫೌಜಿ, ಸುಲೇಮಾನ್ ಶಾ ಮತ್ತು ಅಬು ತಲ್ಹಾ ಎಂದು ಗುರುತಿಸಲಾಗಿದೆ. ದಾಳಿ ಮಾಡುವ ಸಂಪೂರ್ಣ ಯೋಜನೆ ರೂಪಿಸಿದ್ದ ಉಗ್ರರು ಅರಣ್ಯ ಪ್ರದೇಶದಲ್ಲಿ ಅಡಗುದಾಣಗಳನ್ನು ನಿರ್ಮಿಸಿದ್ದರು. ದಾಳಿ ಮಾಡುವ ವೇಳೆ ಕ್ಯಾಮರ ಧರಿಸಿ ಕೃತ್ಯವನ್ನು ಸಂಪೂರ್ಣವಾಗಿ ಚಿತ್ರಿಕರಿಸಿದ್ದಾರೆ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದು ಬಂದಿದೆ.

ಇದನ್ನೂ ಓದಿ :ಮೆಹಂದಿ ಮಾಸುವ ಮುನ್ನವೇ ಕುಂಕುಮ ಅಳಿಸಿದ ಉಗ್ರರು: ಉಗ್ರ ದಾಳಿಯಲ್ಲಿ ನೌಕಪಡೆ ಅಧಿಕಾರಿ ಸಾವು

ಮೂಲಗಳ ಪ್ರಕಾರ ಮೂವರು ಭಯೋತ್ಪಾದಕರು ಪ್ರವಾಸಿಗರನ್ನು ಒಟ್ಟುಗೂಡಿಸಿ ಪುರುಷ ಮತ್ತು ಮಹಿಳಾ ಗುಂಪುಗಳಾಗಿ ವಿಂಗಡಿಸಿದ್ದಾರೆ. ನಂತರ ಅವರ ಧರ್ಮ, ಹೆಸರನ್ನು ಕೇಳಿದ್ದಾರೆ. ಈ ವೇಳೆ ಹಿಂದೂ ಹೆಸರು ಹೇಳಿದವರ ಮೇಲೆ ಶೂಟ್ ಮಾಡಿ ಹತ್ಯೆ ಮಾಡಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments