Site icon PowerTV

ಸೈಫುಲ್ಲಾ ಖಾಲಿದ್​: ಪಹಲ್ಗಾಮ್​ ಉಗ್ರದಾಳಿಯ ಹಿಂದಿನ ಮಾಸ್ಟರ್​ ಮೈಂಡ್​ ಹಿನ್ನಲೆ ಏನು..?

ಶ್ರೀನಗರ :  ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್​ನಲ್ಲಿ ಭೀಕರ ಉಗ್ರ ದಾಳಿ ನಡೆದಿದ್ದು. ಈ ಭಯೋತ್ಪದಾಕ ದಾಳಿಯಲ್ಲಿ ಇಲ್ಲಿಯವರೆಗೂ 26 ಜನ ಪ್ರವಾಸಿಗರು ಸಾವನ್ನಪ್ಪಿದ್ದಾರೆ. 2019 ರಲ್ಲಿ ಪುಲ್ವಾಮಾ ದಾಳಿಯ ನಂತರ ಕಣಿವೆಯಲ್ಲಿ ನಡೆದ ಅತಿದೊಡ್ಡ ದಾಳಿ ಇದಾಗಿದೆ. ಇದೀಗ ಈ ದಾಳಿಯ ಹಿಂದಿನ ಮಾಸ್ಟರ್​ ಮೈಂಡ್​ ಸೈಫುಲ್ಲಾ ಖಾಲಿದ್​ ಎನ್ನುವ ವಿಚಾರ ಬಹಿರಂಗಗೊಂಡಿದೆ.

ಪಹಲ್ಗಾಮ್ ಭಯೋತ್ಪಾದಕ ದಾಳಿಯ ಹೊಣೆಯನ್ನು ಲಷ್ಕರ್-ಎ-ತೊಯ್ಬಾ ಸಂಘಟನೆಯ ಉಪ ಶಾಖೆಯಂತಿರುವ ‘ದಿ ರೆಸಿಸ್ಟೆನ್ಸ್ ಫ್ರಂಟ್’ (TRF) ಹೊತ್ತುಕೊಂಡಿದೆ. ಈ ದಾಳಿಯ ಮಾಸ್ಟರ್ ಮೈಂಡ್ ಭಯೋತ್ಪಾದಕ ಸೈಫುಲ್ಲಾ ಖಾಲಿದ್. ಜಮ್ಮು ಮತ್ತು ಕಾಶ್ಮೀರದಲ್ಲಿ ಲಷ್ಕರ್ ಮತ್ತು ಟಿಆರ್‌ಎಫ್‌ನ ಭಯೋತ್ಪಾದಕ ಚಟುವಟಿಕೆಗಳ ಪ್ರಮುಖ ನಿರ್ವಾಹಕ ಎಂದು ತಿಳಿದು ಬಂದಿದೆ.

ಇದನ್ನೂ ಓದಿ :ಪ್ರಧಾನಿ ಮೋದಿ,​ದೋವಲ್ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ: ‘ಆಪರೇಷನ್​ ಟಿಕ್ಕಾ’ ಕಾರ್ಯಚರಣೆ ಆರಂಭ

ಸೈಪುಲ್​ ಕಸೂರಿ ಎಂದು ಕರೆಸಿಕೊಳ್ಳುವ ಈತ ಪಾಕಿಸ್ತಾನದ ಐಎಸ್​ಐ ಜೊತೆ ಸಂಪರ್ಕ ಹೊಂದಿದ್ದು. ತನ್ನ ಭಯೋತ್ಪಾದಕ ಕೃತ್ಯವನ್ನು ಮರೆಮಾಚಲು ಈತ ಧಾರ್ಮಿಕ ಚಟುವಟಿಕೆಯಲ್ಲಿ ಹೆಚ್ಚಾಗಿ ಭಾಗವಹಿಸುತ್ತಾನೆ. ಲಷ್ಕರ್​-ಎ-ತೋಯ್ಬಾ ಸಂಘಟನೆಯ ಉಪಮುಖ್ಯಸ್ಥನಾಗಿರುವ ಈತ. ಅಂತಾರಾಷ್ಟ್ರೀಯ ಭಯೋತ್ಪಾದಕ ಹಫೀಜ್ ಸಯೀದ್​ಗೆ ಆಪ್ತ ಎಂದು ಪರಿಗಣಿಸಲಾಗಿದೆ.

ಖೈಬರ್ ಪಖ್ತುಂಖ್ವಾದಲ್ಲಿ ನಡೆದ ಸಭೆಯಲ್ಲಿ ಸೈಫುಲ್ಲಾ ಭಾರತದ ವಿರುದ್ದ ವಿಷ ಕಾರಿದ್ದು. ಆತ ಭಾಷಣದಲ್ಲಿ 2026ರ ಫೆಬ್ರವರಿ ಹೊತ್ತಿಗೆ ಕಾಶ್ಮೀರವನ್ನು ವಶಪಡಿಸಿಕೊಳ್ಳಲು ತನ್ನ ಕೈಲಾದಷ್ಟು ಪ್ರಯತ್ನ ಮಾಡುತ್ತೇನೆ ಎಂದು ಹೇಳಿದ್ದ. ನಮ್ಮ ಮುಜಾಹಿದ್ದೀನ್‌ಗಳು ಮುಂದಿನ ದಿನಗಳಲ್ಲಿ ದಾಳಿಯನ್ನು ತೀವ್ರಗೊಳಿಸುತ್ತವೆ.ಫೆಬ್ರವರಿ 2, 2026 ರ ವೇಳೆಗೆ ಕಾಶ್ಮೀರ ಸ್ವತಂತ್ರವಾಗುವ ಭರವಸೆ ಇದೆ ಎಂದಿದ್ದ.

ಇದನ್ನೂ ಓದಿ :ಪ್ರವಾಸಿಗರ ಮೇಲೆ ಭಯೋತ್ಪಾದಕ ದಾಳಿ: ಅಮಿತ್​ ಶಾ ನೇತೃತ್ವದಲ್ಲಿ ತುರ್ತು ಸಭೆ

ಇನ್ನು ದಾಳಿಗೆ ಪ್ರತ್ಯುತ್ತರ ನೀಡಲು ಭಾರತ ಸೇನೆ ಸಿದ್ದವಾಗಿದ್ದು. ಆಪರೇಷನ್​ ಟಿಕ್ಕ ಹೆಸರಿನಲ್ಲಿ ಕಾರ್ಯಚರಣೆ ಆರಂಭವಾಗಿದೆ. ಪ್ರಧಾನಿ ಮೋದಿ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ ನಡೆದಿದೆ.

Exit mobile version