Site icon PowerTV

ಅಮಿತ್ ಷಾ ಘಟನೆ ನಡೆದ ಸ್ಥಳಕ್ಕೆ ಹೋದರೆ ಸತ್ತವರು ಬದುಕಿ ಬರಲ್ಲ: HC ಬಾಲಕೃಷ್ಣ

ರಾಮನಗರ : ಜಮ್ಮು-ಕಾಶ್ಮೀರದ ಪಹಲ್ಗಾಮ್​ನಲ್ಲಿ ನಡೆದ ಭೀಕರ ಉಗ್ರ ದಾಳಿಯ ಬಗ್ಗೆ ಶಾಸಕ HC ಬಾಲಕೃಷ್ಣ ಪ್ರತಿಕ್ರಿಯೆ ನೀಡಿದ್ದು. ಈ ವಿಷಯದಲ್ಲಿ ರಾಜಕೀಯ ಮಾಡುವ ಅವಶ್ಯಕತೆ ಇಲ್ಲ. ಆದರೆ ಅಮಿತ್​ ಷಾ ಘಟನಾ ಸ್ಥಳಕ್ಕೆ ಭೇಟಿ ಕೊಟ್ಟರೆ ಸತ್ತರವರು ಬದುಕಿ ಬರಲ್ಲ ಎಂದು ಹೇಳಿದರು.

ಪಹಲ್ಗಾಂನಲ್ಲಿ ನಡೆದಿರುವ ಹಿಂದೂಗಳ ಮೇಲಿನ ಉಗ್ರ  ದಾಳಿಯ ವಿಚಾರವಾಗಿ ರಾಷ್ಟ್ರದಲ್ಲಿ ಭಾರಿ ಆಕ್ರೋಶ ವ್ಯಕ್ತವಾಗುತ್ತಿದೆ. ಘಟನೆ ಕುರಿತು ಮಾಗಡಿ ಶಾಸಕ ಎಚ್​ಸಿ ಬಾಲಕೃಷ್ಣ ಹೇಳಿಕೆ ನೀಡಿದ್ದಾರೆ. ‘ಮಲ್ಲಿಕಾರ್ಜುನ ಖರ್ಗೆ ಹೇಳಿಕೆಗೆ ಸಹಮತ ವ್ಯಕ್ತಪಡಿಸುತ್ತೇನೆ. ಇದರಲ್ಲಿ ರಾಜಕೀಯ ಮಾಡುವ ಅವಶ್ಯಕತೆ ಇಲ್ಲ. ಯಾವ ಸರ್ಕಾರ ಅಧಿಕಾರದಲ್ಲಿ ಇರುತ್ತೋ ಅದೇ ಸರ್ಕಾರ ಹೊಣೆ ಹೊರಬೇಕು. ಇದನ್ನೂ ಓದಿ :ರಾಷ್ಟ್ರಪತಿ ಭೇಟಿ ಮಾಡಿದ ಅಮಿತ್​ ಷಾ, ಜೈ ಶಂಕರ್​: ಕಾಶ್ಮೀರಕ್ಕೆ ಸೇನಾ ಮುಖ್ಯಸ್ಥ, ಮಿತ್ರ ರಾಷ್ಟ್ರಗಳಿಗೆ ಮಾಹಿತಿ

ಇಲ್ಲಿ ಕೇಂದ್ರ ಸರ್ಕಾರ ಗುಪ್ತಚರ ಇಲಾಖೆ ಫೇಲ್​ ಆಗಿದೆ, ಆದ್ದರಿಂದಲೇ ಅಮಾಯಕರು ಬಲಿಯಾಗಿದ್ದಾರೆ.
ಪ್ರವಾಸಿಗರಿಗೆ ರಕ್ಷಣೆ ನೀಡಬೇಕಿತ್ತು. ಇದಕ್ಕೆಲ್ಲಾ ಕೆಂದ್ರದಲ್ಲಿ ಅಧಿಕಾರ ನಡೆಸುವವರೇ ಜವಾಬ್ದಾರಿ. ಮೃತರ ಕುಟುಂಬಕ್ಕೆ ಇಡೀ ರಾಜ್ಯ ಸರ್ಕಾರ ಸಾಂತ್ವನ ಹೇಳಿದೆ. ಸಿಎಂ ಮೃತರ ಕುಟುಂಬಕ್ಕೆ 10 ಲಕ್ಷ ಪರಿಹಾರ ನೀಡಿದ್ದಾರೆ. ಸಂತೋಷ್ ಲಾಡ್ ಕಾಶ್ಮೀರದಲ್ಲಿ ಸಿಲುಕಿರುವ ಕನ್ನಡಿಗರನ್ನ ರಕ್ಷಣೆ ಮಾಡಿದ್ದಾರೆ. ನಾವು ನಮ್ಮ ಕೆಲಸ ಮಾಡಿದ್ದೇವೆ.

ಇದನ್ನೂ ಓದಿ :ಭರತ್​ ಭೂಷಣ್​ ಅಂತ್ಯಕ್ರಿಯೆ: ತಂದೆಯನ್ನು ಕಳೆದುಕೊಂಡು ರೋಧಿಸುತ್ತಿದೆ 3 ವರ್ಷದ ಕಂದಮ್ಮ

ಆದರೆ ಅಮಯಾಕರ ರಕ್ಷಣೆಯನ್ನ ಅವರು ಮಾಡಬೇಕಿತ್ತು, ಆದರೆ ಅವರು ಮಾಡಿಲ್ಲ. ಕೇಂದ್ರ ಗೃಹ ಮಂತ್ರಿಗಳು ಈಗ ಘಟನೆ ನಡೆದ ಜಾಗಕ್ಕೆ ಹೋದ್ರೆ ಸತ್ತವರು ಬದುಕಿ ಬರೋಲ್ಲ. ಘಟನೆ ನಡೆಯದಾಗೆ ತಡೆಯಬೇಕಾಗಿದ್ದು ಕೇಂದ್ರ ಸರ್ಕಾರದ ಜವಾಬ್ದಾರಿ. ಮುಗಿದ ಮೇಲೆ ಸಾಂತ್ವನ ಎಲ್ಲರೂ ಹೇಳುತ್ತಾರೆ‌. ಘಟನೆ ನಡೆಯುವ ಮುನ್ನವೇ ಮಿಲಿಟರಿ ನಿಯೋಜನೆ ಮಾಡಬೇಕಿತ್ತು. ಸೂಕ್ಷ್ಮ ಪ್ರದೇಶದಲ್ಲಿ ಹೇಗೆ ಕಾರ್ಯ ನಿರ್ವಹಣೆಯ ಮಾಡಬೇಕೆಂದು ಕೇಂದ್ರಕ್ಕೆ ಗೊತ್ತಿರಲಿಲ್ವಾ? ಎಂದು ಮಾಗಡಿ ಶಾಸಕ ಹೆಚ್.ಸಿ. ಬಾಲಕೃಷ್ಣ ಹೇಳಿಕೆ ನೀಡಿದರು.

Exit mobile version