Site icon PowerTV

ಜೀನಿ ಮಾಲೀಕ ದಿಲೀಪ್​ ವಿರುದ್ದ ಅತ್ಯಾಚಾರ ಯತ್ನ ಆರೋಪ

ತುಮಕೂರು : ಜೀನಿ ಸಂಸ್ಥೆಯ ಮಾಲೀಕ ದಿಲೀಪ್​ ವಿರುದ್ದ ಅತ್ಯಾಚಾರ ಯತ್ನದ ಆರೋಪ ಕೇಳಿಬಂದಿದ್ದು. ರಾಜ್ಯಕ್ಕೇ ಜೀನಿ ಕೊಡಿಸಿದವನು, ಜೇನು ಹೀರಲು ಹೋಗಿದ್ನಾ ಎಂಬ ಆರೋಪ ಕೇಳಿಬಂದಿದೆ. ಕೆಲಸಕ್ಕೆ ಬರುವ ಹೆಣ್ಣು ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪ ಕೇಳಿ ಬಂದಿದ್ದು. ಕಳ್ಳಂಬೆಳ್ಳ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತುಮಕೂರು ಜಿಲ್ಲೆ, ಶಿರಾ ತಾಲೂಕಿನ, ಯರಗುಂಟೆ ಬಳಿ ಇರುವ ಜೀನಿ ಕಂಪನಿಯಲ್ಲಿ ಕೆಲಸಕ್ಕೆ ಬರುವ ಮಹಿಳೆಯರು ದಿಲೀಪ್ ಮೇಲೆ ಗಂಭೀರ ಆರೋಪ ಮಾಡಿದ್ದು. ಕೆಲಸಕ್ಕೆ ಬರುವ ಹೆಂಗಸರ ಮೈ ,ಕೈ ಮುಟ್ಟಿ ಎಳೆದಾಡಿದ್ದಾರೆ ಎಂದು ಆರೋಪಿಸಿದ್ದಾರೆ. ಅಷ್ಟೇ ಅಲ್ಲದೆ ಬೇಡಿಕೊಂಡರು ಬಿಡದೆ ಅತ್ಯಾಚಾರಕ್ಕೆ ಯತ್ನಿಸಿದ ಆರೋಪ ಕೇಳಿ ಬಂದಿದೆ. ಒಂದು ವೇಳೆ ಸಹಕರಿಸದಿದ್ದರೆ ಕೆಲಸದಿಂದ ತೆಗೆಯುವುದಾಗಿ ಬೆದರಿಕೆ ಹಾಕಿದ್ದಾನೆ ಎಂದು ಆರೋಪ ಕೇಳಿ ಬಂದಿದೆ.

ಇದನ್ನೂ ಓದಿ :ಪಹಲ್ಗಾಂ ದಾಳಿಯಲ್ಲಿ ಪಾಲ್ಗೊಂಡಿದ್ದ ಇಬ್ಬರು ಉಗ್ರರ ಮನೆಗಳನ್ನು ನಾಶಪಡಿಸಿದ ಭದ್ರತಾ ಪಡೆಗಳು

ದಿಲೀಪ್​ನಿಂದ ದೌರ್ಜನ್ಯಕ್ಕೆ ಒಳಗಾದ ಮಹಿಳೆಯರು ಕಳ್ಳಂಬೆಳ್ಳ ಪೊಲೀಸ್​ ಠಾಣೆ ಮೆಟ್ಟಿಲೇರಿದ್ದು. ದೂರು ದಾಖಲಿಸಿಕೊಂಡಿರುವ ಪೊಲೀಸರು ಎಫ್​ಐಆರ್​ ದಾಖಲಿಸಿಕೊಂಡಿದ್ದಾರೆ. ಈಗಾಗಲೇ ಪ್ರಾಥಮಿಕ ತನಿಖೆ ಮುಗಿಸಿರುವ ಪೊಲೀಸರು , ಸಂತ್ರಸ್ಥೆಯನ್ನು ಸ್ಥಳಕ್ಕೆ ಕರೆದೊಯ್ದು ಸ್ಥಳ ಮಹಜರು ನಡೆಸಿದ್ದಾರೆ. ಇನ್ನು ದಿಲೀಪ್​ನನ್ನು ಇಂದೇ ಬಂಧಿಸುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ.

Exit mobile version