Sunday, August 31, 2025
HomeUncategorizedಮಂಗಳೂರು : ಪಹಲ್ಗಾಮ್​ ಉಗ್ರ ಕೃತ್ಯ ಸಮರ್ಥಿಸಿಕೊಂಡು ಫೇಸ್​​ಬುಕ್​ನಲ್ಲಿ ಪೋಸ್ಟ್​

ಮಂಗಳೂರು : ಪಹಲ್ಗಾಮ್​ ಉಗ್ರ ಕೃತ್ಯ ಸಮರ್ಥಿಸಿಕೊಂಡು ಫೇಸ್​​ಬುಕ್​ನಲ್ಲಿ ಪೋಸ್ಟ್​

ಮಂಗಳೂರು : ಜಮ್ಮು-ಕಾಶ್ಮೀರದ ಪೆಹಲ್ಗಾಮ್​ನಲ್ಲಿ ನಡೆದಿರುವ ಭೀಕರ ಉಗ್ರ ದಾಳಿಯಲ್ಲಿ 27 ಪ್ರವಾಸಿಗರು ಸಾವನ್ನಪ್ಪಿದ್ದು. ಘಟನೆ ಸಂಬಂಧ ದೇಶದೆಲ್ಲಡೆ ಆಕ್ರೋಶ ಕೇಳಿ ಬರುತ್ತಿವೆ. ಆದರೆ ಈ ಘಟನೆಯನ್ನು ಸಮರ್ಥಸಿ ಮಂಗಳೂರಿನಲ್ಲಿ ದುಷ್ಕರ್ಮಿಯೊಬ್ಬ ಫೇಸ್​ಬುಕ್​ ಪೇಜ್​ನಲ್ಲಿ ಪೋಸ್ಟ್​ವೊಂದನ್ನು ಹಾಕಿದ್ದಾನೆ. ಇದಕ್ಕೆ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದ್ದು. ಪೊಲೀಸರು ಎಫ್​ಐಆರ್​ ದಾಖಲಿಸಿಕೊಂಡಿದ್ದಾರೆ.

ಜಮ್ಮು-ಕಾಶ್ಮೀರದ ಪಹಲ್ಗಾಮ್​ನಲ್ಲಿ ನಡೆದ ಉಗ್ರರ ಗುಂಡಿನ ದಾಳಿಯನ್ನು ಸಮರ್ಥಿಸಿಕೊಂಡು ಪೋಸ್ಟ್​ ಹಾಕಿದ್ದ ಫೇಸ್ ಬುಕ್ ಪೇಜ್ ವಿರುದ್ಧ ಮಂಗಳೂರಿನ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಿಎನ್​ಎಸ್​ ಸೆಕ್ಷನ್ 192 ಮತ್ತು 353(1)(,b) ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಫೇಸ್​ಬುಕ್ ಪೇಜ್​ನ ಡಿಪಿ‌ಯಲ್ಲಿರುವ ವ್ಯಕ್ತಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ. ಇದನ್ನೂ ಓದಿ :ಸಿಂಧೂ ನದಿ ನೀರನ್ನು ನಿಲ್ಲಿಸಿದರೆ ಅದನ್ನು ಯುದ್ದವೆಂದೇ ಪರಿಗಣಿಸುತ್ತೇವೆ: ಭಾರತದ ರಾಜತಾಂತ್ರಿಕ ನಡೆಗೆ ಪಾಕ್​ ಶಾಕ್

ನಿಚ್ಚು ಮಂಗಳೂರು ಎಂಬ‌ ಫೇಸ್​ಬುಕ್​ ಪೇಜ್​ನಲ್ಲಿ, “2023ರಲ್ಲಿ ಮಹಾರಾಷ್ಟ್ರದ ಪಾಲ್ಗರ್​ನಲ್ಲಿ ಮೂವರು ಮುಸ್ಲಿಮರನ್ನು‌ ಕೊಲ್ಲಲಾಗಿತ್ತು. ಆರೋಪಿ ಚೇತನ್ ಸಿಂಗ್​ಗೆ ಸಾರ್ವಜನಿಕವಾಗಿ ನೇಣಿಗೆ ಹಾಕಲಿಲ್ಲ. ಪಾಲ್ಗರ್ ಘಟನೆ ಕಾರಣಕ್ಕೆ ಕಾಶ್ಮೀರದಲ್ಲಿ ಧರ್ಮ ಕೇಳಿ ಉಗ್ರರು ಹತ್ಯೆ ಮಾಡಿದ್ದಾರೆ” ಎಂದು ಪೋಸ್ಟ್​ ಹಾಕಲಾಗಿದೆ.

ಇದನ್ನೂ ಓದಿ :ರಾಜನಾಥ್​ ಸಿಂಗ್​ ನೇತೃತ್ವದಲ್ಲಿ ಸರ್ವಪಕ್ಷ ಸಭೆ ಆರಂಭ: ರಾಹುಲ್​, ಖರ್ಗೆ ಹಾಜರ್

ಈ ಪೋಸ್ಟ್​ಗೆ ಸಾಮಾಜಿಕ‌ ಜಾಲತಾಣದಲ್ಲಿ ನೆಟ್ಟಿಗರು ಭಾರಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇನ್ನು ಪೇಸ್ ​ಬುಕ್​ ಪೇಜ್​ನ ಡಿಪಿಯಲ್ಲಿರುವ ಯುವಕ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ‌ಯಾಗಿದ್ದು, ಪೊಲೀಸರು ಆತನಿಗಾಗಿ ಹುಡುಕಾಟ ನಡೆಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments