Site icon PowerTV

ಸಾವರ್ಕರ್​ ಸ್ವಾತಂತ್ರ್ಯ ತಂದುಕೊಟ್ಟಿದ್ದಾರೆ, ನೀವೇನ್​ ಮಾಡ್ತಿದ್ದೀರಿ: ಸುಪ್ರೀಂ ಪ್ರಶ್ನೆ, ರಾಹುಲ್​ಗೆ ಮುಖಭಂಗ

ನವದೆಹಲಿ : ಸ್ವಾತಂತ್ರ್ಯ ಹೋರಾಟಗಾರ ವೀರ ಸಾವರ್ಕರ್​ ವಿರುದ್ದ ನಾಲಿಗೆ ಹರಿಬಿಟ್ಟಿದ್ದ ರಾಹುಲ್​ ಗಾಂಧಿಯನ್ನು ಸುಪ್ರೀಂ ಕೋರ್ಟ್ ತರಾಟೆಗೆ ತೆಗೆದುಕೊಂಡಿದ್ದು. ಸಾವರ್ಕರ್​ ನಮಗೆ ಸ್ವಾತಂತ್ರ್ಯ ತಂದು ಕೊಟ್ಟಿದ್ದಾರೆ. ಆದರೆ ನೀವೇನು ಮಾಡ್ತಿದ್ದೀರಾ ಎಂದು ಪೀಠ ಪ್ರಶ್ನೆ ಕೇಳಿದೆ.

ರಾಹುಲ್​ ಗಾಂಧಿ ಮತ್ತು ಕಾಂಗ್ರೆಸ್​ ಪಕ್ಷದ ಇತರ ನಾಯಕರು ವಿಡಿ ಸಾವರ್ಕರ್​ ಕುರಿತು ಅವಹೇಳನಕಾರಿಯಾಗಿ ಮಾತನಾಡುವುದನ್ನು ನಾವು ಖಂಡಿರುತ್ತೇವೆ. ಇದರ ಕುರಿತು ವಕೀಲ ನೃಪೇಂದ್ರ ಪಾಂಡೆ ಲಖ್ನೋ ಕೋರ್ಟ್​ಗೆ ಮಾನಹಾನಿ ಅರ್ಜಿ ಸಲ್ಲಿಸಿದ್ದರು. ಇದರ ಕುರಿತು ಸುಪ್ರೀಂಕೋರ್ಟ್​ ರಾಹುಲ್​ರನ್ನು ತರಾಟೆಗೆ ತೆಗೆದುಕೊಂಡಿದ್ದು. ನ್ಯಾಯಮೂರ್ತಿ ದೀಪಂಕರ್ ದತ್ತ ಮತ್ತು ಮನಮೋಹನ್ ಅವರನ್ನೊಳಗೊಂಡ ಪೀಠವು ರಾಹುಲ್​ಗೆ ಎಚ್ಚರಿಕೆ ನೀಡಿದೆ. ಇದನ್ನೂ ಓದಿ :ದಾಯಾದಿ ಕಲಹ: ಸತ್ತು ಮೂರು ದಿನವಾದರೂ ಅಂತ್ಯಕ್ರಿಯೆ ಮಾಡದ ಕುಟುಂಬಸ್ಥರು

“ಸ್ವಾತಂತ್ರ್ಯ ಹೋರಾಟಗಾರರ ವಿರುದ್ಧ ಹೇಳಿಕೆಗಳನ್ನು ನಾವು ಅನುಮತಿಸುವುದಿಲ್ಲ, ಈ ಬಾರಿ ಸಾವರ್ಕರ್, ಮುಂದಿನ ಬಾರಿ ಯಾರಾದರೂ ಮಹಾತ್ಮಾ ಗಾಂಧಿ ಬ್ರಿಟಿಷರ ಸೇವಕರಾಗಿದ್ದರು ಎಂದು ಹೇಳುತ್ತಾರೆ ಅದೆಲ್ಲಾ ಕೇಳಬೇಕೇ?, ಮುಂದಿನ ಬಾರಿ ಅಂತಹ ಹೇಳಿಕೆಗಳನ್ನು ನೀಡಿದರೆ ನಾವು ಅದನ್ನು ತೀರಾ ಗಂಭೀರವಾಗಿ ತೆಗೆದುಕೊಳ್ಳಬೇಕಾಗುತ್ತದೆ ಎಂದು ಪೀಠ ಎಚ್ಚರಿಸಿದೆ.

ಅಷ್ಟೇ ಅಲ್ಲದೇ “ಸಾವರ್ಕರ್ ವಿರುದ್ಧದ ಹೇಳಿಕೆಗಳಿಗೆ ಸಂಬಂಧಿಸಿದಂತೆ ರಾಹುಲ್ ಗಾಂಧಿ ವಿರುದ್ಧ ಲಕ್ನೋ ನ್ಯಾಯಾಲಯದಲ್ಲಿ ಬಾಕಿ ಇರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ವಿಚಾರಣೆಗೆ ನ್ಯಾಯಾಲಯ ತಡೆ ನೀಡಿದ್ದರೂ, ಭವಿಷ್ಯದಲ್ಲಿ ಅವರು ಅಂತಹ ಯಾವುದೇ ಹೇಳಿಕೆಗಳನ್ನು ನೀಡಿದರೆ ಅವರ ವಿರುದ್ಧ ಸ್ವಯಂ ಪ್ರೇರಿತವಾಗಿ ಮೊಕದ್ದಮೆ ಹೂಡಲಾಗುವುದು ಎಂದು ಮೌಖಿಕವಾಗಿ ಎಚ್ಚರಿಸಿದೆ.

ಇದನ್ನೂ ಓದಿ :ಚಾಮರಾಜನಗರಕ್ಕೆ ಬರುವುದರಿಂದ ನನ್ನ ಅಧಿಕಾರ ಮತ್ತಷ್ಟು ಗಟ್ಟಿಯಾಗುತ್ತೆ: ಸಿಎಂ ಸಿದ್ದರಾಮಯ್ಯ

ಅವರು ಒಂದು ರಾಜಕೀಯ ಪಕ್ಷದ ರಾಜಕೀಯ ನಾಯಕರೇ? ನೀವು ಮಹಾರಾಷ್ಟ್ರಕ್ಕೆ ಹೋಗಿ ಹೇಳಿಕೆ ನೀಡಿ, ಅಲ್ಲಿ ಅವರನ್ನು ಪೂಜಿಸಲಾಗುತ್ತದೆ. ಹೀಗೆ ಮಾಡಬೇಡಿ ಎಂದು ನ್ಯಾಯಮೂರ್ತಿ ದತ್ತ ಹೇಳಿದರು. ಕಳೆದ ವರ್ಷ ಡಿಸೆಂಬರ್‌ನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಸಾವರ್ಕರ್ ಬ್ರಿಟಿಷರ ಸೇವಕ ಮತ್ತು ಅವರು ಬ್ರಿಟಿಷರಿಂದ ಪಿಂಚಣಿ ಪಡೆದಿದ್ದರು ಎಂದು ರಾಹುಲ್ ಗಾಂಧಿ ಮಾಡಿದ ಭಾಷಣಕ್ಕಾಗಿ ಸಮನ್ಸ್​ ಜಾರಿ ಮಾಡಲಾಗಿತ್ತು.

 

Exit mobile version