Site icon PowerTV

ಸಿಂಧೂ ನದಿ ನೀರನ್ನು ಎಲ್ಲಿ ಸಂಗ್ರಹಿಸುತ್ತೀರಾ; ಕೇಂದ್ರ ಸರ್ಕಾರಕ್ಕೆ ಓವೈಸಿ ಪ್ರಶ್ನೆ

ದೆಹಲಿ : ಪಹಲ್ಗಾಮ್​ನಲ್ಲಿ ನಡೆದಿದ್ದ ಭೀಕರ ಉಗ್ರ ದಾಳಿಯನ್ನು ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ (ಎಐಎಂಐಎಂ) ಮುಖ್ಯಸ್ಥ ಅಸಾದುದ್ದೀನ್​ ಓವೈಸಿ ಖಂಡಿಸಿದ್ದು. ಸಿಂಧೂ ಜಲ ಒಪ್ಪಂದವನ್ನು ಅಮಾನತುಗೊಳಿಸಿರುವುದನ್ನು ಬೆಂಬಲಿಸಿದ್ದಾರೆ. ಆದರೆ ಸರ್ಕಾರ ಆ ನೀರನ್ನು ಎಲ್ಲಿ ಸಂಗ್ರಹಿಸುತ್ತಾರೆ ಎಂದು ಪ್ರಶ್ನಿಸಿದ್ದಾರೆ.

ನವದೆಹಲಿಯಲ್ಲಿ ಕೇಂದ್ರ ಕರೆದಿದ್ದ ಸರ್ವಪಕ್ಷ ಸಭೆಯಲ್ಲಿ ಭಾಗವಹಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಓವೈಸಿ, ಭದ್ರತೆಯ ಕುರಿತಾದ ಸಂಪುಟ ಸಮಿತಿ ತೆಗೆದುಕೊಂಡ ನಿರ್ಧಾರಗಳನ್ನು ಸ್ವಾಗತಿಸಿದರು ಮತ್ತು ಭಯೋತ್ಪಾದಕ ಸಂಘಟನೆಗಳಿಗೆ ಆಶ್ರಯ ನೀಡುವ ದೇಶದ ವಿರುದ್ಧ ಕ್ರಮ ಕೈಗೊಳ್ಳಲು ಸರ್ಕಾರ ಹಿಂಜರಿಯಬಾರದು. ಇದನ್ನೂ ಓದಿ :ಅಪ್ರಾಪ್ತ ಮಗಳ ಎದುರೆ ತಾಯಿಯ ಮೇಲೆ ಅತ್ಯಾಚಾರ

ಜೊತೆಗೆ ರಾಜತಾಂತ್ರಿಕವಾಗಿ 1960ರ ಸಿಂಧೂ ಜಲ ಒಪ್ಪಂದವನ್ನು ಸ್ಥಗಿತಗೊಳಿಸುವ ಸರ್ಕಾರದ ನಿರ್ಧಾರಕ್ಕೆ ಪ್ರತಿಕ್ರಿಯಿಸಿದ ಓವೈಸಿ, “ಸಿಂಧೂ ಜಲ ಒಪ್ಪಂದವನ್ನು ಅಮಾನತುಗೊಳಿಸಿರುವುದು ತುಂಬಾ ಒಳ್ಳೆಯದು, ಆದರೆ ನಾವು ನೀರನ್ನು ಎಲ್ಲಿ ಸಂಗ್ರಹಿಸುತ್ತೀರಿ? ಕೇಂದ್ರ ಸರ್ಕಾರ ತೆಗೆದುಕೊಳ್ಳುವ ಯಾವುದೇ ನಿರ್ಧಾರವನ್ನು ನಾವು ಬೆಂಬಲಿಸುತ್ತೇವೆ. ಇದು ರಾಜಕೀಯ ವಿಷಯವಲ್ಲ” ಎಂದು ಹೇಳಿದರು.

ಭದ್ರತಾ ಲೋಪದ ಬಗ್ಗೆ ಓವೈಸಿ ಮಾತು..!

ಮೂಲಗಳ ಪ್ರಕಾರ, ಸರ್ವಪಕ್ಷ ಸಭೆಯ ಸಮಯದಲ್ಲಿ ಸರ್ಕಾರ ಭಯೋತ್ಪಾದಕ ದಾಳಿಯಲ್ಲಿ ಭದ್ರತಾ ಲೋಪಗಳನ್ನು ಒಪ್ಪಿಕೊಂಡಿದೆ.

ಇದನ್ನೂ ಓದಿ :ಕಳೆದ 3 ದಶಕಗಳಿಂದ ಕೊಳಕು ಕೆಲಸ ಮಾಡಿದ್ದೇವೆ: ಭಯೋತ್ಪಾದನೆಯನ್ನು ಒಪ್ಪಿಕೊಂಡ ಪಾಕ್​

“ಏನೂ ತಪ್ಪಾಗಿಲ್ಲದಿದ್ದರೆ, ನಾವು ಇಲ್ಲಿ ಏಕೆ ಕುಳಿತುಕೊಳ್ಳುತ್ತಿದ್ದೆವು? ನಾವು ಕಂಡುಹಿಡಿಯಬೇಕಾದ ಲೋಪಗಳು ನಡೆದಿವೆ” ಎಂದು ಆಡಳಿತ ಪಕ್ಷದ ನಾಯಕರೊಬ್ಬರು ಸಭೆಯಲ್ಲಿ ವಿರೋಧ ಪಕ್ಷದ ನಾಯಕರಿಗೆ ಹೇಳಿದರು ಎಂದು ವರದಿಯಾಗಿದೆ.

Exit mobile version