Site icon PowerTV

ಚಲಿಸುತ್ತಿದ್ದ ಖಾಸಗಿ ಬಸ್​ನಲ್ಲಿ ಅಗ್ನಿ ಅವಘಡ: 25ಕ್ಕೂ ಹೆಚ್ಚು ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು

ಮಂಡ್ಯ: ಚಲಿಸುತ್ತಿದ್ದ ಖಾಸಗಿ ಬಸ್‌ನಲ್ಲಿ‌ ಆಕಸ್ಮಿಕ ಬೆಂಕಿ‌ ಕಾಣಿಸಿಕೊಂಡು, ಸಂಪೂರ್ಣ ಬಸ್​ ಸುಟ್ಟು ಕರಕಲಾಗಿರುವ ಘಟನೆ ಮಂಡ್ಯದ ನಾಗಮಂಗಲದ ಬಳಿ ನಡೆದಿದ್ದು. ಘಟನೆಯಲ್ಲಿ ಬಸ್​ನಲ್ಲಿ ಪ್ರಯಾಣಿಸುತ್ತಿದ್ದ 25ಕ್ಕೂ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಮಂಡ್ಯದ ನಾಗಮಂಗಲ ಬಳಿಯ ಕದಬಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದ್ದು. ಇಂದು ಬೆಳಗ್ಗಿನ ಜಾವ 5 ಗಂಟೆ ವೇಳೆಯಲ್ಲಿ ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಉಡುಪಿಯಿಂದ‌ ಬೆಂಗಳೂರು ಕಡೆಗೆ ಬರುತ್ತಿದ್ದ ರೇಷ್ಮಾ ಟೂರ್ಸ್​ ಆ್ಯಂಡ್​ ಟ್ರಾವೆಲ್ಸ್​ನ ಖಾಸಗಿ ಬಸ್ ಚಲಿಸುತ್ತಿತ್ತು. ಕದಬಹಳ್ಳಿ ಬಳಿ ಇದ್ದಕ್ಕಿದ್ದಂತೆ ಬಸ್‌ನಲ್ಲಿ‌ ಬೆಂಕಿ‌ ಕಾಣಿಸಿದೆ. ಕೂಡಲೇ ಬಸ್ ಚಾಲಕ ಬಸ್‌ನಲ್ಲಿ‌ ಇದ್ದ 25 ಮಂದಿ ಪ್ರಯಾಣಿಕರನ್ನು ತಮ್ಮ ಲೆಗೇಜ್‌ ಸಹಿತ ಕೆಳಗೆ‌ ಇಳಿಯಲು ಹೇಳಿದ್ದಾನೆ. ಬಳಿಕ‌ ಎಲ್ಲಾ ಪ್ರಯಾಣಿಕರು ಬಸ್‌ನಿಂದ ಕೆಳಗೆ ಇಳಿಸಿದಿದ್ದಾರೆ.

ಇದನ್ನೂ ಓದಿ :ಬಾಡಿಗೆಗೆ ಇದ್ದ ಯುವತಿಗೆ ಓನರ್​ ಕಾಟ: ಪ್ರೀತ್ಸೆ, ಪ್ರೀತ್ಸೆ ಎಂದ ಅಂಕಲ್​ ಪೊಲೀಸರ ಅಥಿತಿ

ಬಳಿಕ‌ ಬಸ್‌ನಲ್ಲಿ‌ ಬೆಂಕಿಯ ಪ್ರಮಾಣ ಹೆಚ್ಚಿದ್ದು, ನೋಡ‌ ನೋಡುತ್ತಿದ್ದಂತೆ ಬಸ್ ಧಗಧಗನೇ‌ ಹೊತ್ತಿ‌ ಉರಿದಿದೆ. ಅಗ್ನಿಶಾಮಕ ದಳದ ಸಿಬ್ಬಂದಿ ಬಸ್‌ನ ಬೆಂಕಿಯನ್ನು ಹಾರಿಸಿದ್ದಾರೆ. ಸದ್ಯ ಬಸ್‌ನಲ್ಲಿ‌ ಹೇಗೆ ಬೆಂಕಿ ಕಾಣಿಸಿಕೊಂಡಿದೆ ಎಂದು ತಿಳಿದುಬಂದಿಲ್ಲ. ಬಿಂಡಿಗನವಿಲೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ಜರುಗಿದೆ.

Exit mobile version