ಮಂಡ್ಯ : ಕಬ್ಬಡ್ಡಿ ಆಟದ ವೇಳೆ ವೀಕ್ಷಕರ ಗ್ಯಾಲರಿ ಕುಸಿದು ಓರ್ವ ಸಾವನ್ನಪ್ಪಿ, 13 ಮಂದಿ ಗಾಯಗೊಂಡಿದ್ದಾರೆ. ಘಟನೆ ಮಂಡ್ಯದಲ್ಲಿ ನಡೆದಿದ್ದು. ಮೃತ ದುರ್ದೈವಿಯನ್ನು 55 ವರ್ಷದ ಪಾಪಣ್ಣಾಚಾರ್ ಎಂದು ಗುರುತಿಸಲಾಗಿದೆ.
ಮಂಡ್ಯ ತಾಲೂಕಿನ, ಮಲ್ಲನಾಯಕನ ಕಟ್ಟೆ ಗ್ರಾಮದಲ್ಲಿ ನಿತಿನ್, ಕಾರ್ತಿಕ್, ಜೈ ಶಂಕರ್, ಬಸವರಾಜು ಎಂಬುವವರು ಪೊಲೀಸರ ಅನುಮತಿ ಪಡೆದು ಭೈರವ ಕಪ್ ಹೆಸರಿನಲ್ಲಿ ಕಬ್ಬಡ್ಡಿ ಪಂದ್ಯಾವಳಿ ಆಯೋಜನೆ ಮಾಡಿದ್ದರು. ಅದರಂತೆ ಕಬ್ಬಡ್ಡಿ ಪಂದ್ಯಾವಳಿಯು ಕೂಡ ಸುಗಮವಾಗಿ ನಡೆಯುತ್ತಿತ್ತು ಈ ವೇಳೆ ಇದ್ದಕ್ಕಿದ್ದಂತೆ ಪ್ರೇಕ್ಷಕರ ಗ್ಯಾಲರಿ ಕುಸಿದು ದುರ್ಘಟನೆ ಸಂಭವಿಸಿದೆ. ಈ ದುರ್ಘಟನೆಯಲ್ಲಿ ಓರ್ವ ಸಾವನ್ನಪ್ಪಿದ್ದು. 13 ಮಂದಿ ಗಾಯಗೊಂಡಿದ್ದಾರೆ.
ಇದನ್ನೂ ಓದಿ :‘ನೀನು ಬಂದು ಶರಣಾದರೆ ನಾವು ನೆಮ್ಮದಿಯಿಂದ ಬದುಕುತ್ತೇವೆ’: ಮನೆ ಕಳೆದುಕೊಂಡ ಉಗ್ರನ ತಾಯಿ ರೋಧನೆ
ಗಾಯಾಳುಗಳನ್ನು ಮಂಡ್ಯ ಮಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದ್ದು. ಸದ್ಯ ಗಾಯಾಳುಗಳು ಚೇತರಿಸಿಕೊಳ್ಳುತ್ತಿದ್ದಾರೆ. ಸ್ಥಳಕ್ಕೆ ಮೇಲುಕೋಟೆ ಶಾಸಕ ದರ್ಶನ್ ಪುಟ್ಟಣ್ಣಯ್ಯ, ಸಚಿವ ಚೆಲುವರಾಯಸ್ವಾಮಿ, ಮಾಜಿ ಸಚಿವ ಸಿ ಎಸ್ ಪುಟ್ಟರಾಜು ಭೇಟಿ ನೀಡಿ ಗಾಯಾಳುಗಳಿಗೆ ಸಾಂತ್ವನ ಹೇಳಿದ್ದಾರೆ.
ಸದ್ಯ ಮೃತ ಪಾಪಣ್ಣಾಚಾರ್ ಅವರ ಮೃತ ದೇಹದ ಮರಣೋತ್ತರ ಪರೀಕ್ಷೆ ನಡೆಸಿ ಶವವನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಿದ್ದು. ಗಾಯಾಳುಗಳಿಗೆ ಚಿಕಿತ್ಸೆಯನ್ನು ಮುಂದುವರಿಸಲಾಗಿದೆ. ಖುಷಿ ಖುಷಿಯಲ್ಲಿದ್ದ ಗ್ರಾಮವೀಗ ದುಃಖದ ಮಡುವಿನಲ್ಲಿದೆ.