Site icon PowerTV

ರೈಲ್ವೇ ಇಲಾಖೆ ಪರೀಕ್ಷೆ, ಜನಿವಾರ, ಮಂಗಳಸೂತ್ರಕ್ಕಿಲ್ಲ ತಡೆ :ಸಚಿವ ಸೋಮಣ್ಣ ಸ್ಪಷ್ಟನೆ

ಮಂಗಳೂರು: CET ಪರೀಕ್ಷೆ ವೇಳೆ ಜನಿವಾರ ವಿವಾದದ ಬೆನ್ನಲ್ಲೇ ಇದೀಗ ಮತ್ತೊಂದು ವಿವಾದ ಶುರುವಾಗಿದೆ. ರೈಲ್ವೇ ಇಲಾಖೆಯ ಪರೀಕ್ಷೆಗಳಿಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಮಂಗಳಸೂತ್ರ ಮತ್ತು ಜನಿವಾರ ನಿಷೇಧಿಸಿದ್ದು ವಿವಾದಕ್ಕೆ ಕಾರಣವಾಗಿತ್ತು. ಈ ಕುರಿತು ಕಾಂಗ್ರೆಸ್​ ನಾಯಕರು ಸೇರಿದಂತೆ ಜನರಿಂದ ಭಾರೀ ಆಕ್ರೋಶ ವ್ಯಕ್ತವಾಗುತ್ತಿತ್ತು. ಇದರ ಬೆನ್ನಲ್ಲೇ ರೈಲ್ವೆ ಸಚಿವ ವಿ.ಸೋಮಣ್ಣ ಮಂಗಳಸೂತ್ರ ಹಾಗೂ ಜನಿವಾರ ತೆಗೆಸದಂತೆ ರೈಲ್ವೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಮಂಗಳವಾರ ರೈಲ್ವೆ ಇಲಾಖೆಯ ನರ್ಸಿಂಗ್ ಸೂಪರಿಂಟೆಂಡೆಂಟ್ ಹುದ್ದೆಗೆ ಪರೀಕ್ಷೆ ನಡೆಯಲ್ಲಿದ್ದು, ಈಗಾಗಲೇ ಪ್ರವೇಶ ಪತ್ರವು ಪರೀಕ್ಷಾರ್ಥಿಗಳ ಕೈ ಸೇರಿದೆ. ಪ್ರವೇಶ ಪತ್ರದಲ್ಲಿ ಜನಿವಾರ, ಮಂಗಳಸೂತ್ರ ತೆಗೆದು ಪರೀಕ್ಷೆ ಹಾಜರಾಗುವಂತೆ ಸೂಚನೆ ನೀಡಿದ್ದಾರೆ.

ಇದನ್ನು ಓದಿ:‘ಒಂದೇ ಒಂದು ಸಭೆ ಮಾಡಲು ಬಿಡಲ್ಲ’; ಬಿಜೆಪಿ ವಿರುದ್ದ ಪ್ರತಿಜ್ಞೆ ಕೈಗೊಂಡ ಕಾಂಗ್ರೆಸ್​​

ಈ ವಿವಾದದ ಬೆನ್ನಲ್ಲೇ ರೈಲ್ವೆ ಇಲಾಖೆಯ ಪರೀಕ್ಷೆಯ ಪ್ರವೇಶಪತ್ರದಲ್ಲಿನ ಸೂಚನೆಗಳ ಬಗ್ಗೆ ಎಕ್ಸ್ ಖಾತೆಯಲ್ಲಿ ಟ್ವೀಟ್‌ನ ಮೂಲಕ ರೈಲ್ವೆ ಸಚಿವರಿಗೆ ದಕ್ಷಿಣ ಕನ್ನಡದ ಸಂಸದ ಕ್ಯಾ.ಬ್ರಿಜೇಶ್ ಚೌಟ ಮಾಹಿತಿ ನೀಡಿದ್ದಾರೆ. ಇದರ ಬೆನ್ನಲ್ಲೇ ಎಚ್ಚೆತ್ತುಕೊಂಡ ಸಚಿವ ವಿ.ಸೋಮಣ್ಣ ಮಂಗಳಸೂತ್ರ ಹಾಗೂ ಜನಿವಾರ ತೆಗೆಸದಂತೆ ರೈಲ್ವೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಇಂದಿನಿಂದ ಮೂರು ದಿನಗಳ ಕಾಲ ರೈಲ್ವೇ ನರ್ಸಿಂಗ್​ ಪರೀಕ್ಷೆ ನಡೆಯಲಿದೆ.

Exit mobile version