Site icon PowerTV

ಯತ್ನಾಳ್ ಸವಾಲ್ ಸ್ವೀಕರಿಸಿ ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಟ್ಟ ಶಿವಾನಂದ ಪಾಟೀಲ್

ಬೆಂಗಳೂರು : ಶಾಸಕ ಶಿವಾನಂದ ಪಾಟೀಲ್​ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು. ಬಸನಗೌಡ ಪಾಟೀಲ್​ ಯತ್ನಾಳ್​ ಹಾಕಿದ ಸವಾಲನ್ನು ಸ್ವೀಕರಿಸಿ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಯು.ಟಿ ಸ್ಪೀಕರ್​ ಕೊಠಡಿಗೆ ತೆರಳಿ ತಮ್ಮ ರಾಜೀನಾನೆ ಸಲ್ಲಿಸಿದ್ದಾರೆ. ಸ್ಪೀಕರ್ ಈ ರಾಜೀನಾಮೆಯನ್ನು ಅಂಗೀಕರಿಸಿದರೆ ಬಸವನ ಬಾಗೇವಾಡಿ ಕ್ಷೇತ್ರಕ್ಕೆ ಮರುಚುನಾವಣೆ ನಡೆಯಲಿದೆ.

ಇದನ್ನೂ ಓದಿ:ಸ್ಪೀಕರ್​ ಖಾದರ್​ ಜೊತೆಗೆ ನನಗೂ ಬೆದರಿಕೆ ಕರೆಗಳು ಬರುತ್ತಿವೆ: ಸಿಎಂ ಸಿದ್ದರಾಮಯ್ಯ

ಶಿವಾನಂದ ಪಾಟೀಲ್​ ವಿರುದ್ದ ವಾಗ್ದಾಳಿ ನಡೆಸಿದ್ದ ಯತ್ನಾಳ್​

ಕಳೆದೆರಡು ದಿನಗಳ ಹಿಂದೆ ಮಾಧ್ಯಮದೊಂದಿಗೆ ಮಾತನಾಡಿದ್ದ ಯತ್ನಾಳ್​ ಶಿವಾನಂದ ಪಾಟೀಲ್​ ವಿರುದ್ದ ವಾಗ್ದಾಳಿ ನಡೆಸಿದ್ದರು. ಶಿವಾನಂದ್ ಪಾಟೀಲ್ ಅವರಪ್ಪನಿಗೆ ಹುಟ್ಟಿದರೆ ನನ್ನ ವಿರುದ್ಧ ಸ್ಪರ್ಧೆ ಮಾಡಲಿ, ಅವರ ಮನೆ ಹೆಸರು ಪಾಟೀಲ್ ಅಲ್ಲ ಹಚಡದ ಎಂದು, ನಿಮ್ಮಪ್ಪ ನೀವು ಸೇರಿ ನಿಮ್ಮ ಅಡ್ಡ ಹೆಸರು ಬದಲಾಯಿಸಿಕೊಂಡಿದ್ದೀರಿ, ರಾಜಕಾರಣಕ್ಕಾಗಿ ಪಾಟೀಲ್ ಎಂದು ಮಾಡಿಕೊಂಡಿದ್ದಾರೆಂದು ಹೇಳಿದರು.

ರಾಜೀನಾಮೆ ನೀಡಲು ಸವಾಲು ಹಾಕಿದ್ದ ಯತ್ನಾಳ್​..!

ಇದನ್ನೂ ಓದಿ: SSLC ಪರೀಕ್ಷೆ ಫಲಿತಾಂಶ ಪ್ರಕಟ: ದಕ್ಷಿಣ ಕನ್ನಡ, ಉಡುಪಿ ಟಾಪ್​, ಕಲಬುರಗಿ ಲಾಸ್ಟ್​

ಶಿವಾನಂದ ಪಾಟೀಲ್ ಹಾಗೂ ವಿಜಯಾನಂದ ಕಾಶಪ್ಪನವರ ಒಂದು ವಾರದಲ್ಲಿ ತಮ್ಮ ಶಾಸಕತ್ವಕ್ಕೆ ರಾಜೀನಾಮೆ ನೀಡಿ, ಸಭಾಪತಿಯವರಿಂದ ರಾಜೀನಾಮೆ ಅಂಗೀಕಾರ ಮಾಡಿಕೊಂಡು ಬನ್ನಿ, ನೀವು ಪಕ್ಷೇತರರಾಗಿ ಬನ್ನಿ ನಾನು ಬರುವೆ, ಬಾಗೇವಾಡಿಯಲ್ಲೇ ಬಂದು ಮಣ್ಣು ಕೊಡುತ್ತೇನೆಂದು ಹೇಳಿದರು. ಇದೀಗ ಈ ಸವಾಲನ್ನು ಸ್ವೀಕರಿಸಿರುವ ಶಿವಾನಂದ ಪಾಟೀಲ್​ ತನ್ನ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

Exit mobile version