ಉಡುಪಿ : ‘ಸಿದ್ದರಾಮಯ್ಯನನ್ನ ಕೊಂದರೆ ಹಿಂದುಗಳಿಗೆ ನೆಮ್ಮದಿ ಸಿಗುತ್ತೆ’ ಎಂದು ಪೋಸ್ಟ್ ಹಾಕಿದ್ದ ಹೋಂ ಗಾರ್ಡ್ನನ್ನು ಕಾರ್ಕಳ ಪೊಲೀಸರು ಬಂಧಿಸಿದ್ದು. ಯೂತ್ ಕಾಂಗ್ರೆಸ್ ಅಧ್ಯಕ್ಷ ಸೂರಜ್ ಶೆಟ್ಟಿ ನೀಡಿದ ದೂರಿನ ಆಧಾರದ ಮೇಲೆ ಈತನನ್ನು ಬಂಧಿಸಿದ್ದಾರೆ. ಬಂಧನವಾದ ಹೋಂ ಗಾರ್ಡ್ನನ್ನು ಸಂಪತ್ ಸಾಲಿಯಾನ್ ಎಂದು ಗುರುತಿಸಲಾಗಿದೆ.
ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಮಂಗಳೂರು ಪೊಲೀಸರು 8 ಜನರನ್ನು ಬಂಧಿಸಿದ್ದು, ತನಿಖೆ ನಡೆಸಿದ್ದಾರೆ. ಇದರ ಮಧ್ಯ ಸುಹಾಸ್ ಶೆಟ್ಟಿ ಕೊಲೆಯ ನಂತರ ಸಾಮಾಜಿಕ ಜಾಲತಾಣಗಳಲ್ಲಿ ಪ್ರತೀಕಾರದ ಬೆದರಿಕೆಗಳು ಹರಿದಾಡುತ್ತಿವೆ. ಇದರ ನಡುವೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹೋಂ ಗಾರ್ಡ್ ಅವಹೇಳಕನಕಾರಿ ಮತ್ತು ಬೆದರಿಕೆ ಕಮೆಂಟ್ ಮಾಡಿದ್ದಾನೆ.
ಇದನ್ನೂ ಓದಿ :‘ತಪ್ಪು ಯಾರದ್ದು ಎಂದು ಪ್ರಜ್ಞಾವಂತ ಕನ್ನಡಿಗರು ನಿರ್ಧರಿಸಲಿ’: ಸುದೀರ್ಘ ಪತ್ರ ಬರೆದ ಸೋನು ನಿಗಮ್
ಉಡುಪಿಯ ಕಾರ್ಕಳದ, ಸಾಣೂರು ನಿವಾಸಿ ಸಂಪತ್ ಸಾಲಿಯಾನ್ ಎಂಬಾತ ಬೆಂಗಳೂರಿನ ಹೋಂ ಗಾರ್ಡ್ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದ. ಈತ ಸಿಎಂ ಸಿದ್ದರಾಮಯ್ಯನನ್ನು ಕೊಂದರೆ ಹಿಂದೂಗಳಿಗೆ ನೆಮ್ಮದಿ ಎಂದು ಸಾಮಾಜಿಕ ಜಾಲತಾಣದಲ್ಲಿ ಕಮೆಂಟ್ ಹಾಕಿದ್ದಾನೆ. ಈ ಸಂಬಂಧ ಯೂತ್ ಕಾಂಗ್ರೆಸ್ ಅಧ್ಯಕ್ಷ ಸೂರಜ್ ಶೆಟ್ಟಿ ದೂರು ದಾಖಲಿಸಿದ್ದು. ದೂರಿನ ಮೇರೆಗೆ ಆರೋಪಿಯನ್ನು ಕಾರ್ಕಳ ಪೊಲೀಸರು ಬಂಧಿಸಿದ್ದಾರೆ.


