Site icon PowerTV

‘ನಮ್ಮ ಸಹೋದರರ ಹತ್ಯೆಗೆ ಆಪರೇಷನ್​ ಸಿಂಧೂರದ ಮೂಲಕ ಉತ್ತರ’: ಸೇನೆಗೆ ಅಮಿತ್​ ಶಾ ಶ್ಲಾಘನೆ

ದೆಹಲಿ: ಭಾರತೀಯ ಸೇನೆ ನಿನ್ನೆ ರಾತ್ರಿ ಸುಮಾರು 1:44ಕ್ಕೆ ಪಾಕಿಸ್ತಾನದ ಭಯೋತ್ಪಾದಕ ಶಿಬಿರಗಳ ಮೇಲೆ ದಾಳಿ ನಡೆಸಿದ್ದು. ಈ ಕಾರ್ಯಚರಣೆಯಲ್ಲಿ ಸುಮಾರು 100ಕ್ಕೂ ಹೆಚ್ಚು ಉಗ್ರರು ಸಾವನ್ನಪ್ಪಿದ್ದಾರೆ. ಭಾರತೀಯ ಸೇನೆಯ ಈ ಕಾರ್ಯಚರಣೆಗೆ ಕೇಂದ್ರ ಗೃಹಸಚಿವ ಅಮಿತ್​ ಶಾ ಶ್ಲಾಘನೆ ವ್ಯಕ್ತಪಡಿಸಿದ್ದಾರೆ.

ಈ ಕುರಿತು ತಮ್ಮ ಎಕ್ಷ್​ ಖಾತೆಯಲ್ಲಿ ಬರೆದುಕೊಂಡಿರುವ ಅಮಿತ್ ಶಾ ‘ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ನಮ್ಮ ಮುಗ್ಧ ಸಹೋದರರ ಕ್ರೂರ ಹತ್ಯೆಗೆ ಆಪರೇಷನ್ ಸಿಂಧೂರದ ಮೂಲಕ ಭಾರತ ಉತ್ತರ ನೀಡಿದೆ. ಭಾರತ ಮತ್ತು ಇಲ್ಲಿನ ಜನರ ಮೇಲಿನ ಯಾವುದೇ ದಾಳಿಗೆ ಸೂಕ್ತ ಪ್ರತಿಕ್ರಿಯೆ ನೀಡಲು ಮೋದಿ ಸರ್ಕಾರವು ನಿರ್ಧರಿಸಿದೆ. ಭಯೋತ್ಪಾದನೆಯನ್ನು ಬೇರು ಸಹಿತ ಕಿತ್ತು ಹಾಕಲು ಭಾರತ ಸದಾ ಸಿದ್ಧ ಎಂದು ಬರೆದುಕೊಂಡಿದ್ದಾರೆ. ಇದನ್ನೂ ಓದಿ:‘ನನ್ನ ಪತಿ ಸಾವಿಗೆ ಸೇಡು ತೀರಿಸಿಕೊಂಡ ಪ್ರಧಾನಿ ಮೋದಿ ಧನ್ಯವಾದ’: ಶುಭಂ ದ್ವಿವೇದಿ ಪತ್ನಿ

ಪಹಲ್ಗಾಮ್ ಉಗ್ರರ ದಾಳಿಗೆ ಪತ್ರೀಕಾರವಾಗಿ ಇಂದು ತಡರಾತ್ರಿ ಆಪರೇಷನ್ ಸಿಂಧೂರ ಹೆಸರಿನಲ್ಲಿ ಸೇನಾಯು ಪಾಕಿಸ್ತಾನದ 9 ಉಗ್ರರ ಅಡಗುತಾಣಗಳ ಮೇಲೆ ದಾಳಿ ನಡೆಸಿದೆ. ದಾಳಿಯಲ್ಲಿ 100ಕ್ಕೂ ಹೆಚ್ಚು ಉಗ್ರರರು ಮೃತಪಟ್ಟಿದ್ದಾರೆ ಎಂದು ಮೂಲಗಳು ತಿಳಿಸಿವೆ.

Exit mobile version