ಆಪರೇಷನ್​ ಸಿಂಧೂರ: ದೇಶದ ರಕ್ಷಣೆಗೆ ಅಚಲರಾಗಿರುವ ಯೋಧರಿಗೆ ಧನ್ಯವಾದ ತಿಳಿಸಿದ ನಟ ಯಶ್​

ಪಹಲ್ಗಾಮ್​ನಲ್ಲಿ ನಡೆದಿರುವ ಉಗ್ರ ದಾಳಿಗೆ ಪ್ರತಿಯಾಗಿ ಭಾರತ ಪಾಕಿಸ್ತಾನದ ಮೇಲೆ ಪ್ರತಿಕಾರ ತೀರಿಸಿಕೊಂಡಿದ್ದು. ಇದಕ್ಕೆ ಪ್ರತಿಯಾಗಿ ಪಾಕ್​ ದಾಳಿ ನಡೆಸಿ ಪರಿಸ್ಥಿತಿಯನ್ನು ಮತ್ತಷ್ಟು ಉದ್ವಿಘ್ನಗೊಳಿಸಿದೆ. ಈ ಕುರಿತು ನಟ ಯಶ್​ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್​ ಹಂಚಿಕೊಂಡಿದ್ದು. ಭಾರತ ಮತ್ತು ಪಾಕ್ ನಡುವಿನ ಯುದ್ಧ ಸನ್ನಿವೇಶ ಕುರಿತು ತಪ್ಪು ಮಾಹಿತಿ ಹಂಚಿಕೊಳ್ಳಬೇಡಿ ಎಂದು ಯಶ್ ಮನವಿ ಮಾಡಿದ್ದಾರೆ.

ಇದನ್ನೂ ಓದಿ :ಪಾಕಿಸ್ತಾನದ ಮೇಲಿನ ದಾಳಿ ದೇಶದ ಸ್ವಾಭಿಮಾನ ಮತ್ತು ನೈತಿಕತೆಯನ್ನು ಹೆಚ್ಚಿಸಿದೆ: ಆರ್​ಎಸ್​ಎಸ್​

ಸಾಮಾಜಿಕ ಜಾಲತಾಣ ಎಕ್ಷ್​ನಲ್ಲಿ ಪೋಸ್ಟ್​ ಹಂಚಿಕೊಂಡಿರುವ ನಟ ಯಶ್​ ‘ನಮ್ಮ ಭಾರತೀಯ ಸಶಸ್ತ್ರ ಪಡೆಗಳ ಅಚಲ ಶಕ್ತಿ ಮತ್ತು ಕಾರ್ಯಕ್ಕೆ ಧನ್ಯವಾದಗಳು. ಭಾರತೀಯ ಯೋಧರ ಸೇವೆಗೆ ಧನ್ಯವಾದ ತಿಳಿಸುವುದರ ಜೊತೆಗೆ ಒಗ್ಗಟ್ಟಿನಿಂದ ನಿಂತು ಜವಾಬ್ದಾರಿಯುತವಾಗಿ ವರ್ತಿಸೋಣ. ಸಾಮಾಜಿಕ ಜಾಲತಾಣದಲ್ಲಿ ಯಾವುದಾದರೂ ವಿಚಾರ ಹಂಚಿಕೊಳ್ಳುವ ಮುನ್ನ ಮೊದಲು ಪರಿಶೀಲಿಸಿ ಎಂದಿದ್ದಾರೆ. ತಪ್ಪು ಮಾಹಿತಿಯ ವಿರುದ್ಧ ನಿಲ್ಲೋಣ. ಜೈ ಹಿಂದ್ ಎಂದು ಯಶ್ ಬರೆದುಕೊಂಡಿದ್ದಾರೆ

RELATED ARTICLES

Related Articles

TRENDING ARTICLES