ದೇವನಹಳ್ಳಿ : ಏಪೋರ್ಟ್ ಸಿಬ್ಬಂದಿಯನ್ನ ಡ್ರಾಪ್ ಮಾಡಲು ತೆರಳುತ್ತಿದ್ದ ಮಿನಿ ಬಸ್ ಪಲ್ಟಿಯಾಗಿ ಹಲವಾರು ಸಿಬ್ಬಂದಿಗಳು ಗಂಭೀರವಾಗಿ ಗಾಯಗೊಂಡಿರುವ ಘಟನೆ ಕೆಂಪೇಗೌಡ ವಿಮಾನ ನಿಲ್ದಾನದ ಬಳಿ ನಡೆದಿದ್ದು. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಘಟನೆ ನಡೆದಿದ್ದು. ಏರ್ಪೋಟ್ ಸಿಬ್ಬಂದಿಯನ್ನ ಡ್ರಾಪ್ ಮಾಡಲು ತೆರಳುತ್ತಿದ್ದ ಮಿನಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಬಸ್ನಲ್ಲಿ ಪ್ರಯಾಣಿಸುತ್ತಿದ್ದ 20ಕ್ಕೂ ಹೆಚ್ಚು ಸಿಬ್ಬಂದಿಗಳಿಗೆ ಗಾಯವಾಗಿದ್ದು. ಕೆಲವರ ಪರಿಸ್ಥಿತಿ ಗಂಭೀರವಾಗಿದೆ.
ಇದನ್ನೂ ಓದಿ :‘ನನ್ನ ಸೂಪರ್ ಹೀರೋ ಕೊಹ್ಲಿ ಭಯ್ಯಾ’: ವಿರಾಟ್ ನಿವೃತ್ತಿಗೆ ಭಾವುಕ ಪತ್ರ ಬರೆದ ಸಿರಾಜ್
ಅಪಘಾತದ ಬಗ್ಗೆ ತಿಳಿದ ಕೂಡಲೇ ಏರ್ಪೋರ್ಟ್ ಪೊಲೀಸರು ಮತ್ತು ಟ್ರಾಫಿಕ್ ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ಗಾಯಾಳಾಗಳನ್ನು ಆಸ್ಪತ್ರೆಗೆ ರವಾನೆ ಮಾಡಿದ್ದಾರೆ. ದೇವನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು. ಘಟನೆ ಬಗ್ಗೆ ಇನ್ನಷ್ಟೆ ಹೆಚ್ಚಿನ ಮಾಹಿತಿ ದೊರೆಯಬೇಕಿದೆ.