ಮಂಗಳೂರು: ಧರ್ಮಸ್ಥಳ ಮೂಲದ ಏರೋಸ್ಪೇಸ್ ಇಂಜಿನಿಯರ್ ಪಂಜಾಬ್ನಲ್ಲಿ ನಿಗೂಡವಾಗಿ ಸಾವನ್ನಪ್ಪಿದ್ದು. ಕಾಲೇಜಿನಿಂದ ಸರ್ಟಿಫಿಕೇಟ್ ತೆಗೆದುಕೊಂಡು ಬರಲು ತೆರಳಿದ್ದ ಯುವತಿ ನಿನ್ನೆ (ಮೇ.17) ನಿಗೂಡವಾಗಿ ಸಾವನ್ನಪ್ಪಿದ್ದಾರೆ. ಮೃತ ಯುವತಿಯನ್ನು ಅಕಾಂಕ್ಷಾ.ಎಸ್. ನಾಯರ್ ಎಂದು ಗುರುತಿಸಲಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಮೂಲದ ಏರೋಸ್ಪೇಸ್ ಉದ್ಯೋಗಿ ಯುವತಿ ಆಕಾಂಕ್ಷಾ ಎಸ್. ನಾಯರ್, ಮೂರನೇ ಮಹಡಿಯಿಂದ ಬಿದ್ದು ಸಾವನ್ನಪ್ಪಿದ್ದಾರೆ ಎಂದು ಸ್ಥಳೀಯ ಪೊಲೀಸರು ಮಾಹಿತಿ ನೀಡಿದ್ದು. ಮಗಳ ಸಾವಿನ ಬಗ್ಗೆ ತಿಳಿಯುತ್ತಿದ್ದಂತೆ ಆಕಾಂಕ್ಷಾ ಪೋಷಕರಾದ ಸುರೇಂದ್ರ ಮತ್ತು ಸಿಂಧೂದೇವಿ ಪಂಜಾಬ್ ತೆರಳಿದ್ದಾರೆ. ಜಲಂಧರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ:ಭಾರತವೇ ಕದನ ವಿರಾಮ ಪ್ರಸ್ತಾಪಿಸಿದೆ ಅಂತ ಪಾಕ್ ಪ್ರಧಾನಿ ಹೇಳಿದ್ದಾರೆ: ಪ್ರಿಯಾಂಕ್ ಖರ್ಗೆ
ಪಂಜಾಬ್ನಲ್ಲಿ ಓದು, ದೆಹಲಿಯಲ್ಲಿ ಕೆಲಸ..!
ಯುವತಿ ಆಕಾಂಕ್ಷ ಪಂಜಾಬ್ನ ಎಲ್.ಸಿ.ಯು ಪಗ್ವಾಡ ಕಾಲೇಜಿನಲ್ಲಿ ಏರೋಸ್ಪೇಸ್ ಇಂಜಿನಿಯರಿಂಗ್ ವಿಭಾಗದಲ್ಲಿ ಪದವಿ ಪಡೆದಿದ್ದಳು. ಕಳೆದ 6 ತಿಂಗಳಿಂದ ದೆಹಲಿಯಲ್ಲಿ ಏರೋಸ್ಪೇಸ್ ಇಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದ ಆಕಾಂಕ್ಷ ಜಪಾನ್ಗೇ ಹೋಗಲು ಕೂಡ ಪ್ಲಾನ್ ರೂಪಿಸಿದ್ದಳು. ಇದಕ್ಕಾಗಿ ಸರ್ಟಿಫಿಕೇಟ್ ಪಡೆಯಲು ಎಂದು ಪಂಜಾಬ್ಗೆ ತೆರಳಿದ್ದಳು. ಸರ್ಟಿಫಿಕೇಟ್ ಪಡೆದ ನಂತರ ತನ್ನ ತಂದೆ-ತಾಯಿಗೆ ಈ ಮಾಹಿತಿಯನ್ನು ಪೋನ್ ಮಾಡಿ ತಿಳಿಸಿದ್ದಳು. ಆದರೆ ಇದೀಗ ಇದ್ದಕ್ಕಿದ್ದಂತೆ ಯುವತಿ ನಿಗೂಡವಾಗಿ ಸಾವನ್ನಪ್ಪಿದ್ದು ಹಲವು ಅನುಮಾನಗಳಿಗೆ ಕಾರಣವಾಗಿದೆ.