Saturday, August 23, 2025
Google search engine
HomeUncategorizedಚಾರ್​ಮಿನಾರ್​ ಬಳಿ ಭಾರೀ ಅಗ್ನಿ ದುರಂತ: ಮಕ್ಕಳು ಸೇರಿದಂತೆ 17 ಮಂದಿ ಸಜೀವ ದಹನ

ಚಾರ್​ಮಿನಾರ್​ ಬಳಿ ಭಾರೀ ಅಗ್ನಿ ದುರಂತ: ಮಕ್ಕಳು ಸೇರಿದಂತೆ 17 ಮಂದಿ ಸಜೀವ ದಹನ

ಹೈದರಾಬಾದ್: ತೆಲಂಗಾಣದ ಚಾರ್​ಮಿನಾರ್​ ಬಳಿ ಇರುವ ಗುಲ್ಜಾರ್​ ಹೌಸ್​ನಲ್ಲಿ ಭಾರಿ ಬೆಂಕಿ ಅವಘಡ ಸಂಭವಿಸಿದ್ದು. ಕಟ್ಟಡದ ಒಳಗೆ ಸಿಲುಕಿದ ಮೂವರು ಮಕ್ಕಳು ಸೇರಿದಂತೆ 17 ಮಂದಿ ಸುಟ್ಟು ಕರಕಲಾಗಿದ್ದಾರೆ. ಘಟನೆಗೆ ಪ್ರಧಾನಿ ಮೋದಿ ತೀವ್ರ ಸಂತಾಪ ಸೂಚಿಸಿದ್ದು, ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ್ದಾರೆ.

ಹೈದರಾಬಾದ್​ನ ಚಾರ್​ಮಿನಾರ್ ಬಳಿಯ ಗುಲ್ಜಾರ್​ ಹೌಸ್​ನಲ್ಲಿರುವ ಕಟ್ಟಡದಲ್ಲಿ ಇಂದು ಬೆಳಗ್ಗೆ ಬೆಂಕಿ ಕಾಣಿಸಿಕೊಂಡಿದೆ. ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಅವಘಡ ಸಂಭವಿಸಿದ್ದು. ಘಟನೆಯಲ್ಲಿ ಘಟನೆಯಲ್ಲಿ 17 ಮಂದಿ ಸಾವನ್ನಪ್ಪಿದ್ದಾರೆ. ಬೆಂಕಿಯನ್ನು ನಿಯಂತ್ರಣಕ್ಕೆ ತರಲು 11 ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ತಲುಪಿವೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಸಾವನ್ನಪ್ಪಿದ್ದ 17 ಜನರ ಪೈಕಿ ಮೂವರು ಮಕ್ಕಳಿದ್ದಾರೆ. ಇದನ್ನೂ ಓದಿ :ಪಂಜಾಬ್​ಗೆ​ ತೆರಳಿದ್ದ ಧರ್ಮಸ್ಥಳ ಮೂಲದ ಏರೋಸ್ಪೇಸ್​ ಇಂಜಿನಿಯರ್​ ನಿಗೂಢವಾಗಿ ಸಾವು

ಇನ್ನು ಘಟನಾ ಸ್ಥಳಕ್ಕೆ ಕೇಂದ್ರ ಸಚಿವ ಮತ್ತು ರಾಜ್ಯ ಬಿಜೆಪಿ ಮುಖ್ಯಸ್ಥ ಜಿ. ಕಿಶನ್ ರೆಡ್ಡಿ ಮತ್ತು ತೆಲಂಗಾಣ ಸಚಿವ ಪೊನ್ನಂ ಪ್ರಭಾಕರ್ ಗುಲ್ಜಾರ್ ಹೌಸ್​ಗೆ ಭೇಟಿ ನೀಡಿ ಮಾಹಿತಿ ಪಡೆದಿದ್ದು. ಘಟನೆಯ ಬಗ್ಗೆ ಮುಖ್ಯಮಂತ್ರಿ ಎ. ರೇವಂತ್ ರೆಡ್ಡಿ ದುಃಖ ವ್ಯಕ್ತಪಡಿಸಿದ್ದಾರೆ. ಕಟ್ಟಡದಲ್ಲಿ ಸಿಲುಕಿರುವ ಜನರನ್ನು ರಕ್ಷಿಸಲು ಅಗತ್ಯವಿರುವ ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳುವಂತೆ ಅವರು ಹಿರಿಯ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಮೃತದೇಹಗಳನ್ನು ಹೊರತೆಗೆದು ಆಸ್ಪತ್ರೆಗಳಿಗೆ ಕಳುಹಿಸಲಾಗಿದ್ದು, ರಾಜ್ಯ ಸರ್ಕಾರ ಶೀಘ್ರದಲ್ಲೇ ಸಂಪೂರ್ಣ ವಿವರಗಳನ್ನು ಹಂಚಿಕೊಳ್ಳಲಿದೆ ಎಂದು ತೆಲಂಗಾಣ ಸಚಿವ ಪೊನ್ನಂ ಪ್ರಭಾಕರ್ ಹೇಳಿದ್ದಾರೆ. ಇದನ್ನೂ ಓದಿ :ಭಾರತವೇ ಕದನ ವಿರಾಮ ಪ್ರಸ್ತಾಪಿಸಿದೆ ಅಂತ ಪಾಕ್​ ಪ್ರಧಾನಿ ಹೇಳಿದ್ದಾರೆ: ಪ್ರಿಯಾಂಕ್​ ಖರ್ಗೆ

ನರೇಂದ್ರ ಮೋದಿ ಸಂತಾಪ..!

ದುರ್ಘಟನೆ ಬಗ್ಗೆ ಪ್ರಧಾನಿ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ. ತೆಲಂಗಾಣದ ಹೈದರಾಬಾದ್‌ನಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಜೀವ ಮತ್ತು ಆಸ್ತಿಪಾಸ್ತಿ ನಷ್ಟವಾಗಿದ್ದರಿಂದ ಪ್ರಧಾನಿ ಮೋದಿ ತೀವ್ರ ದುಃಖಿತರಾಗಿದ್ದಾರೆ ಎಂದು ಪ್ರಧಾನಿ ಕಚೇರಿ ತಿಳಿಸಿದೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ನನ್ನ ಸಂತಾಪಗಳು. ಮೃತರ ಕುಟುಂಬ ಸದಸ್ಯರಿಗೆ ಪ್ರಧಾನ ಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿಯಿಂದ ತಲಾ 2 ಲಕ್ಷ ರೂಪಾಯಿಗಳ ಪರಿಹಾರ ನೀಡಲಾಗುವುದು. ಗಾಯಾಳುಗಳಿಗೆ 50,000 ರೂ. ಪರಿಹಾರ ನೀಡಲಾಗುವುದು ಎಂದು ಘೋಷಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments