ದೆಹಲಿ: ಆಪರೇಷನ್ ಸಿಂಧೂರದ ಬಗ್ಗೆ ಮಾಹಿತಿ ನೀಡಿದ್ದ ಕರ್ನಲ್ ಸೋಫಿಯಾ ಖುರೇಷಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದ ಮಧ್ಯಪ್ರದೇಶದ ಬಿಜೆಪಿ ಸಚಿವ ವಿಜಯ್ ಶಾ ಅವರ ಕ್ಷಮೆಯಾಚನೆಯನ್ನ ಸುಪ್ರೀಂ ಕೋರ್ಟ್ ತಿರಸ್ಕರಿಸಿದ್ದು. ಪ್ರಕರಣದ ತನಿಖೆಯನ್ನ ಎಸ್ಐಟಿಗೆ ವಹಿಸಿದೆ.
ಇಂದೋರ್ ಜಿಲ್ಲೆಯ ಮಾಹುವಿನ ರಾಯ್ಕುಂಡ ಗ್ರಾಮದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ್ದ ವಿಜಯ್ ಶಾ ‘ಭಯೋತ್ಪಾದಕರು ನಮ್ಮ ಸಹೋದರಿಯರು ಮತ್ತು ಹೆಣ್ಣುಮಕ್ಕಳ ಸಿಂಧೂರವನ್ನು ಅಳಿಸಿದ್ದರು. ಆ ಉಗ್ರರಿಗೆ ಪಾಠ ಕಲಿಸಲು ಅವರ ಸಹೋದರಿಯನ್ನು ನಾವು ಕಳುಹಿಸಿದ್ದೇವೆ ಎಂದು ಹೇಳಿದ್ದರು. ಈ ಹೇಳಿಕೆ ಸಾಕಷ್ಟು ವಿವಾದಕ್ಕೆ ಕಾರಣವಾಗಿತ್ತು. ಈ ಹೇಳಿಕೆ ಬಗ್ಗೆ ಆಕ್ರೋಶ ಹೊರಹಾಕಿದ್ದ ಮಧ್ಯಪ್ರದೇಶ ಹೈಕೋರ್ಟ್ ವಿಜಯ್ ಶಾ ವಿರುದ್ದ ಪ್ರಕರಣ ದಾಖಲಿಸಲು ಸೂಚಿಸಿತ್ತು. ಈ ಆದೇಶವನ್ನ ಪ್ರಶ್ನಿಸಿಕೊಂಡು ವಿಜಯ್ ಶಾ ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ಇದನ್ನೂ ಓದಿ :ಕಾಂಗ್ರೆಸ್ ಮಾಡ್ತಿರೋದು ಸಾಧನ ಸಮಾವೇಶ ಅಲ್ಲ, 2ನೇ ವರ್ಷದ ಪುಣ್ಯ ತಿಥಿ: ಬಿ.ಸಿ ಪಾಟೀಲ್
ಈ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ವಿಜಯ್ ಶಾ ಅವರನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ “ನೀವು ಯಾವ ರೀತಿ ಕ್ಷಮೆಯಾಚಿಸಿದ್ದೀರಿ? ಕೆಲವು ಕ್ಷಮೆಯಾಚನೆಗೆ ಅರ್ಥವಿರುತ್ತದೆ, ಆದರೆ ನ್ಯಾಯಾಲಯ ಹೇಳಿದೆ ಎಂಬ ಕಾರಣಕ್ಕೆ ನೀವು ಕ್ಷಮೆ ಕೇಳಿದ್ದೀರಿ, ಇಲ್ಲಿಯವರೆಗೆ ನಿಮ್ಮ ಅಸಭ್ಯ ಹೇಳಿಕೆಗಳಿಗೆ ಪ್ರಾಮಾಣಿಕವಾಗಿ ಕ್ಷಮೆಯಾಚಿಸಲು ನಿಮ್ಮನ್ನು ಏನು ತಡೆದಿತ್ತು ಎಂದು ಪೀಠ ಛೀಮಾರಿ ಹಾಕಿತು. ಇದನ್ನೂ ಓದಿ:ರಾಜಧಾನಿಯಲ್ಲಿ ಭಾರಿ ಮಳೆ: ನಗರದ ಕಸವನ್ನ ರಾಮನಗರಕ್ಕೆ ಸಾಗಿಸಿದ ವೃಷಭಾವತಿ
ಜೊತೆಗೆ ವಿಜಯ್ ಶಾ ವಿರುದ್ದ ತನಿಖೆ ನಡೆಸಲು ಮೂರು ಜನ ಅಧಿಕಾರಿಗಳ ವಿಶೇಷ ತನಿಖಾ ತಂಡ ರಚಿಸಲು ನ್ಯಾಯಾಲಯ ಆದೇಶ ಹೊರಡಿಸಿದ್ದು. ಈ ಅಧಿಕಾರಿಗಳ ತಂಡದಲ್ಲಿ ಮಹಿಳಾ ಅಧಿಕಾರಿಗಳು ಇರಲಿದ್ದಾರೆ. ಈ ತಂಡ ಮೇ 28 ರೊಳಗೆ ವರದಿಯನ್ನು ಸಲ್ಲಿಸಬೇಕು ಎಂದು ನ್ಯಾಯಾಲಯ ಆದೇಶಿಸಿದೆ.