Site icon PowerTV

ರಾಹುಲ್​ ಆಧುನಿಕ ಯುಗದ ಮೀರ್​ ಜಾಫರ್​: ಸೇನೆ ಬಗ್ಗೆ ಪ್ರಶ್ನೆ ಎತ್ತಿದ ರಾಹುಲ್​ ವಿರುದ್ದ ಬಿಜೆಪಿ ವಾಗ್ದಾಳಿ

ದೆಹಲಿ : ಆಪರೇಷನ್​ ಸಿಂಧೂರ್​ ಬಗ್ಗೆ ವಿಪಕ್ಷ ನಾಯಕ ರಾಹುಲ್​ ಗಾಂಧಿ ಎತ್ತಿರುವ ಪ್ರಶ್ನೆಗಳಿಗೆ ಪ್ರತಿಕ್ರಿಯೆ ನೀಡಿರುವ ಬಿಜೆಪಿ ರಾಹುಲ್​ ಗಾಂಧಿಯನ್ನ ಆಧುನಿಕ ಯುಗದ ಮೀರ್​ ಜಾಫರ್​ ಎಂದು ಬಿಂಬಿಸಿದ್ದು. ಪಾಕಿಸ್ತಾನದ ಸೇನಾ ಮುಖ್ಯಸ್ಥ ಆಸಿಮ್​ ಮುನೀರ್​ ಮತ್ತು ರಾಹುಲ್​ ಗಾಂಧಿ ಪೋಟೊವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡು ರಾಹುಲ್​ ವಿರುದ್ದ ವಾಗ್ದಾಳಿ ನಡೆಸಿದ್ದಾರೆ.

ಆಪರೇಷನ್ ಸಿಂಧೂರದಲ್ಲಿ ಭಾರತೀಯ ಸೇನೆಯ ಎಷ್ಟು ಯುದ್ಧ ವಿಮಾನಗಳು ನಾಶವಾಗಿವೆ? ಆಪರೇಷನ್​ ಸಿಂಧೂರ್​ ಬಗ್ಗೆ ಪಾಕಿಸ್ತಾನಕ್ಕೆ ಮುನ್ನವೇ ಯಾಕೆ ಮಾಹಿತಿ ನೀಡಿದ್ದೀರಿ? ಎಂದು ಪ್ರಶ್ನೆ ಕೇಳಿರುವ ರಾಹುಲ್​ ಗಾಂಧಿ ಪಾಕಿಸ್ತಾನದ ಮಾಧ್ಯಮಗಳಲ್ಲಿ ಹೀರೋ ಹಾಗಿದ್ದಾರೆ. ಇದರ ನಡುವೆ ಬಿಜೆಪಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್​ಗಳನ್ನು ಹಂಚಿಕೊಂಡಿದ್ದು. ಇದು ಸಾಕಷ್ಟು ವಿವಾದಕ್ಕೆ ಕಾರಣವಾಗಿದೆ. ಇದನ್ನೂ ಓದಿ:ನಿರಂತರ ಮಳೆ: RCB vs SRH ನಡುವಿನ ಪಂದ್ಯ ಬೆಂಗಳೂರಿನಿಂದ ಲಕ್ನೋಗೆ ಶಿಫ್ಟ್​

ಪಹಲ್ಗಾಮ್ ದಾಳಿಗೆ ಪ್ರತಿಕಾರವಾಗಿ ಭಾರತೀಯ ಸೇನೆ ಆಪರೇಷನ್​ ಸಿಂಧೂರ್​ದ ಮೂಲಕ ಪಾಕಿಸ್ತಾನದಲ್ಲಿರುವ ಭಯೋತ್ಪಾದಕ ನೆಲೆಗಳನ್ನ ನಾಶಪಡಿಸಿದ್ದು. ಪ್ರತಿದಾಳಿಗೆ ಮುಂದಾದ ಪಾಕಿಸ್ತಾನದ ಹೆಡೆಮುರಿಯನ್ನು ಕಟ್ಟಿದೆ.  ಇದರ ಮಧ್ಯೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಈ ಕಾರ್ಯಾಚರಣೆಯ ಬಗ್ಗೆ ವಿವರಣೆ ಕೇಳುವುದರಲ್ಲಿ ನಿರತರಾಗಿದ್ದಾರೆ.

ಆಪರೇಷನ್ ಸಿಂಧೂರದಲ್ಲಿ ಭಾರತೀಯ ಸೇನೆ ಎಷ್ಟು ಯುದ್ಧ ವಿಮಾನಗಳನ್ನು ಕಳೆದುಕೊಂಡಿದೆ ಎಂಬ ಬಗ್ಗೆ ಭಾರತದ ಜನರಿಗೆ ಕೇಂದ್ರ ಸರ್ಕಾರ ಮಾಹಿತಿ ನೀಡಬೇಕು ಎಂದು ಹೇಳಿದ್ದರು. ಆದರೆ ಇದಕ್ಕೆ ವಿದೇಶಾಂಗ ಇಲಾಖೆ ಉತ್ತರಿಸಲು ನಿರಾಕರಿಸಿದ್ದು. ಎರಡು ದೇಶಗಳ ನಡುವೆ ಸಂಘರ್ಷ ಇನ್ನು ಅಂತ್ಯವಾಗಿಲ್ಲ. ಈ ಸಮಯದಲ್ಲಿ ಇಂತಹ ಮಾಹಿತಿ ನೀಡುವುದು ಸೂಕ್ತವಲ್ಲ, ಆದರೆ ನಮ್ಮ ಎಲ್ಲಾ ಪೈಲೆಟ್​ಗಳು ಸುರಕ್ಷಿತರಾಗಿದ್ದಾರೆ ಎಂದು ಉತ್ತರಿಸಿದೆ. ಆದರೆ ರಾಹುಲ್​ ಇಷ್ಟಕ್ಕೂ ಸುಮ್ಮನಾಗದೆ ಉತ್ತರಕ್ಕಾಗಿ ಒತ್ತಾಯಿಸುತ್ತಿದ್ದು,ಪಾಕಿಸ್ತಾನದ ಮಾಧ್ಯಮಗಳಲ್ಲಿ ರಾಹುಲ್ ಗಾಂಧಿಯನ್ನು ಹೀರೋನಂತೆ ಬಿಂಬಿಸಲಾಗುತ್ತಿದೆ.

ಇದನ್ನೂ ಓದಿ :2 ವರ್ಷದ ಮಗುವಿನ ಮೇಲೆ ಅತ್ಯಾಚಾರವೆಸಗಲು ತಾಯಿಯಿಂದಲೇ ಅನುಮತಿ

ಬಿಜೆಪಿ ನಾಯಕರ ಆಕ್ರೋಶ..!

ಇದಕ್ಕೆ ಬಿಜೆಪಿ ನಾಯಕರು ರಾಹುಲ್ ಗಾಂಧಿಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಆಪರೇಷನ್ ಸಿಂಧೂರದ ಮೂಲಕ ಸಂಘರ್ಷದ ಸಮಯದಲ್ಲಿ ಎಷ್ಟು ಪಾಕಿಸ್ತಾನಿ ಜೆಟ್‌ಗಳನ್ನು ಹೊಡೆದುರುಳಿಸಲಾಗಿದೆ ಅಥವಾ ನಾಶಪಡಿಸಲಾಗಿದೆ ಎಂಬುದನ್ನು ಕಂಡುಹಿಡಿಯಲು ರಾಹುಲ್ ಗಾಂಧಿ ಒಮ್ಮೆಯೂ ಪ್ರಯತ್ನಿಸಲಿಲ್ಲ ಎಂದು ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವೀಯ ಹೇಳಿದ್ದಾರೆ.

ಹಾಗೇ, ಪಾಕಿಸ್ತಾನದ ಸೇನಾ ಮುಖ್ಯಸ್ಥ ಅಸಿಮ್ ಮುನೀರ್ ಅವರ ಅರ್ಧ ಮುಖ ಮತ್ತು ರಾಹುಲ್ ಗಾಂಧಿಯ ಅರ್ಧ ಮುಖವನ್ನು ಸೇರಿಸಿ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಹಾಗೇ, ಬಿಜೆಪಿ ನಾಯಕರು ರಾಹುಲ್ ಗಾಂಧಿಯನ್ನು ಮೀರ್ ಜಾಫರ್ ಜೊತೆ ಹೋಲಿಸಿದ್ದಾರೆ. ಇದನ್ನೂ ಓದಿ :ಅನೈತಿಕ ಸಂಬಂಧ: ಗಂಡನನ್ನೇ ಕೊಂದು ಬಾವಿಗೆ ಎಸೆದ ಪತ್ನಿ, ಪ್ರಿಯಕರ ಅಂದರ್​

ಈ ಪೋಸ್ಟ್ ಜೊತೆಗೆ ಅಮಿತ್ ಮಾಳವೀಯ ಅವರು ಪಾಕಿಸ್ತಾನಿ ಸೇನಾ ಮುಖ್ಯಸ್ಥ ಅಸಿಮ್ ಮುನೀರ್ ಅವರ ಅರ್ಧ ಮುಖ ಮತ್ತು ರಾಹುಲ್ ಗಾಂಧಿಯವರ ಅರ್ಧ ಮುಖ ಕಾಣುವ ಚಿತ್ರವನ್ನು ಸಹ ಪೋಸ್ಟ್ ಮಾಡಿದ್ದಾರೆ. ಇಬ್ಬರದ್ದೂ ಒಂದೇ ಅಜೆಂಡಾ ಎಂದು ವ್ಯಂಗ್ಯವಾಡಿದ್ದಾರೆ. ಮತ್ತೊಂದು ಪೋಸ್ಟ್‌ನಲ್ಲಿ, ರಾಹುಲ್ ಗಾಂಧಿ ಹೊಸ ಯುಗದ ಮೀರ್ ಜಾಫರ್ ಎಂದು ಅವರು ಟೀಕಿಸಿದ್ದಾರೆ.

ಪಹಲ್ಗಾಮ್ ದಾಳಿಯ ನಂತರ, ಭಾರತವು ಆಪರೇಷನ್ ಸಿಂಧೂರ್ ಮೂಲಕ ಪಾಕಿಸ್ತಾನ ಮತ್ತು ಪಿಒಕೆಯಲ್ಲಿ ಭಯೋತ್ಪಾದಕ ಅಡಗುತಾಣಗಳನ್ನು ನಾಶಪಡಿಸಿತು. ರಾಹುಲ್ ಗಾಂಧಿ ಈ ಇಡೀ ಕಾರ್ಯಾಚರಣೆಯಲ್ಲಿ ಎಷ್ಟು ಭಾರತೀಯ ವಿಮಾನಗಳು ಹಾನಿಗೊಳಗಾದವು ಎಂದು ಪದೇ ಪದೇ ಕೇಳುತ್ತಿದ್ದಾರೆ. ವಿದೇಶಾಂಗ ಸಚಿವ ಜೈಶಂಕರ್ ಅವರನ್ನು ಪ್ರಶ್ನಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ವಿದೇಶಾಂಗ ಸಚಿವ ಏಕೆ ಜೈಶಂಕರ್ ಮೌನವಾಗಿದ್ದಾರೆ ಎಂದು ಕೇಳಿದ್ದರು.

Exit mobile version