Saturday, August 23, 2025
Google search engine
HomeUncategorizedಕನ್ನಡದ ಸಾಹಿತಿ ಬಾನು ಮುಷ್ತಾಕ್​ ಅವರ ಕೃತಿಗೆ ಪ್ರತಿಷ್ಠಿತ 'ಬೂಕರ್'​ ಪ್ರಶಸ್ತಿ

ಕನ್ನಡದ ಸಾಹಿತಿ ಬಾನು ಮುಷ್ತಾಕ್​ ಅವರ ಕೃತಿಗೆ ಪ್ರತಿಷ್ಠಿತ ‘ಬೂಕರ್’​ ಪ್ರಶಸ್ತಿ

ಲಂಡನ್: ಕನ್ನಡದ ಪ್ರಸಿದ್ಧ ಸಾಹಿತಿ ಬಾನು ಮುಷ್ತಾಕ್ ಅವರು ಪ್ರತಿಷ್ಠಿತ ಅಂತರಾಷ್ಟ್ರೀಯ ಬೂಕರ್ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಈ ಮೂಲಕ ಮೊದಲ ಬಾರಿಗೆ ಕನ್ನಡದ ಕೃತಿಗೆ ಪ್ರತಿಷ್ಠಿತ ಪ್ರಶಸ್ತಿ ಲಭಿಸಿದೆ.

ಕನ್ನಡ ಪ್ರಸಿದ್ದ ಸಾಹಿತಿ ಬಾನು ಮುಷ್ತಾಕ್​ ಅವರ  ‘ಹಸೀನಾ ಮತ್ತು ಇತರ ಕತೆಗಳು’ ಕೃತಿಯ ಇಂಗ್ಲಿಷ್ ಅನುವಾದಿತ ಹಾರ್ಟ್ ಲ್ಯಾಂಪ್‌ಗೆ ಪ್ರಶಸ್ತಿ ಬೂಕರ್​ ಪ್ರಶಸ್ತಿ ಲಭಿಸಿದೆ.ಈ ಮೂಲಕ ಇದೇ ಮೊದಲ ಬಾರಿಗೆ ಕನ್ನಡದ ಕೃತಿಗೆ ಈ ಪ್ರತಿಷ್ಠಿತ ಪ್ರಶಸ್ತಿ ಲಭಿಸಿದೆ. ಇನ್ನು ಬೂಕರ್ ಪ್ರಶಸ್ತಿ 50 ಸಾವಿರ ಪೌಂಡ್‌ (ಅಂದಾಜು 57.28 ಲಕ್ಷ ರೂ.) ಒಳಗೊಂಡಿದೆ. ಇದನ್ನೂ ಓದಿ :ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಸಾರಿಗೆ ಬಸ್: ತಪ್ಪಿತು ಭಾರಿ ಅನಾಹುತ..!

ಪ್ರಶಸ್ತಿ ಸ್ವೀಕರ ಸಮಾರಂಭದಲ್ಲಿ ಪ್ರಶಸ್ತಿ ಸ್ವೀಕರಿಸಿ ಮಾತನಾಡಿರುವ ಮುಷ್ತಾಕ್, ತಮ್ಮ ಗೆಲುವನ್ನು ವೈವಿಧ್ಯತೆಗೆ ದೊರೆತ ಜಯ ಎಂದು ಬಣ್ಣಿಸಿದ್ದಾರೆ. ‘ಯಾವ ಕಥೆಯೂ ಸಣ್ಣದಲ್ಲ, ಅನುಭವದ ವಸ್ತ್ರದಲ್ಲಿನ ಪ್ರತಿ ಎಳೆಯೂ ಇಡೀ ಕಥೆಯ ತೂಕವನ್ನು ಹೊಂದಿರುತ್ತದೆ ಎಂಬ ನಂಬಿಕೆಯಿಂದಲೇ ಈ ಪುಸ್ತಕ ರೂಪುಗೊಂಡಿತು’ ಎಂದು ಹೇಳಿದ್ದಾರೆ. ‘ನನ್ನ ಸುಂದರವಾದ ಭಾಷೆಗೆ ದೊರೆತ ಎಂತಹ ಸೊಗಸಾದ ಗೆಲುವು ಇದು’ ಎಂದು ಅನುವಾದಕಿ ಭಸ್ತಿ ಹರ್ಷ ವ್ಯಕ್ತಪಡಿಸಿದ್ದಾರೆ. ಫ್ರೆಂಚ್‌ನಿಂದ ಅನುವಾದವಾದ ಎರಡು ಕೃತಿಗಳು, ಜಪಾನ್‌, ಇಟಾಲಿಯನ್‌ ಹಾಗೂ ಡ್ಯಾನಿಷ್‌ ಭಾಷೆಯ ತಲಾ ಒಂದು ಕೃತಿ ‘ಶಾರ್ಟ್‌ ಲಿಸ್ಟ್‌’ನಲ್ಲಿದ್ದವು. ಶಾರ್ಟ್ ಲಿಸ್ಟ್‌ನಲ್ಲಿ ಆಯ್ಕೆಯಾಗಿದ್ದ ಎಲ್ಲರನ್ನೂ ಲಂಡನ್‌ ಕಾರ್ಯಕ್ರಮಕ್ಕೆ ಆಹ್ವಾನಿಸಲಾಗಿತ್ತು.

ಇನ್ನೂ ಬೂಕರ್ ಪ್ರಶಸ್ತಿ ಪಡೆದ ಬಾನು ಮುಸ್ತಾಕ್ ಅವರಿಗೆ ಸಿಎಂ ಸಿದ್ದರಾಮಯ್ಯ ಅಭಿನಂದನೆ ಸಲ್ಲಿಸಿದ್ದಾರೆ. ಅಂತಾರಾಷ್ಟ್ರೀಯ ಬೂಕರ್ ಸಾಹಿತ್ಯ ಪ್ರಶಸ್ತಿ ಪುರಸ್ಕೃತರಾಗಿರುವ ಕನ್ನಡದ ಹೆಮ್ಮೆಯ ಲೇಖಕಿ ಬಾನು ಮುಸ್ತಾಕ್ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು. ಇದು ಕನ್ನಡ, ಕನ್ನಡಿಗ ಮತ್ತು ಕರ್ನಾಟಕ ಸಂಭ್ರಮಿಸುವ ಹೊತ್ತು. ಈ ನೆಲದ ಸೌಹಾರ್ದತೆ, ಜಾತ್ಯತೀತತೆ ಮತ್ತು ಸೋದರತ್ವದ ನಿಜ ಮೌಲ್ಯಗಳನ್ನು ಮೈಗೂಡಿಸಿಕೊಂಡು ಬರೆಯುತ್ತಿರುವ ಬಾನು ಮುಸ್ತಾಕ್ ಅವರು ಕನ್ನಡದ ಹಿರಿಮೆಯ ಬಾವುಟವನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಹಾರಿಸಿ ನಮಗೆಲ್ಲ ಗೌರವ ತಂದುಕೊಟ್ಟಿದ್ದಾರೆ. ಇದನ್ನೂ ಓದಿ :ಗೃಹ ಸಚಿವ ಪರಮೇಶ್ವರ್ ಅವರ ಸಿದ್ಧಾರ್ಥ ಶಿಕ್ಷಣ ಸಂಸ್ಥೆಗಳ ಮೇಲೆ ಇಡಿ ದಾಳಿ..!

ಅವರು ಇನ್ನಷ್ಟು ಕಾಲ ಸತ್ವಯುತವಾಗಿ ಬರೆಯುತ್ತಾ ಕನ್ನಡದ ಕಂಪನ್ನು ಜಗದಗಲಕ್ಕೆ ಪಸರಿಸುತ್ತಾ ಇರಲಿ ಎಂದು ಹಾರೈಸುತ್ತೇನೆ. ಬೂಕರ್ ಪ್ರಶಸ್ತಿಗೆ ಭಾಜನವಾಗಿರುವ ಅವರ ಕೃತಿ ‘ಹೃದಯ ದೀಪ’ವನ್ನು ಇಂಗ್ಲೀಷ್ ಗೆ ಅನುವಾದಿಸಿರುವ ಪ್ರತಿಭಾವಂತ ಲೇಖಕಿ ದೀಪಾ ಭಸ್ತಿ ಅವರಿಗೂ ಕನ್ನಡಿಗರೆಲ್ಲರ ಪರವಾಗಿ ಅಭಿನಂದನೆಗಳನ್ನು ಸಲ್ಲಿಸುತ್ತೇನೆ ಎಂದು ಬರೆದುಕೊಂಡಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments