Site icon PowerTV

ಆಧುನಿಕ ರಾಬಿನ್​ ಹುಡ್: ಕಳ್ಳತನ ಮಾಡಿದ ಹಣದಲ್ಲಿ 20 ಶಾಲಾ ಮಕ್ಕಳ ಸ್ಕೂಲ್​ ಫೀಸ್​ ಕಟ್ಟಿ ಸಮಾಜ ಸೇವೆ

ಬೆಂಗಳೂರು: ಖತರ್ನಾಕ್ ಕಳ್ಳನೊಬ್ಬ ಕಳ್ಳತನ ಮಾಡಿದ ಹಣದಲ್ಲಿ 20 ಮಕ್ಕಳ ಶಾಲಾ, ಕಾಲೇಜು ಫೀಸ್ ಕಟ್ಟಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದ್ದು. ಆಧುನಿಕ ರಾಬಿನ್​ ಹುಡ್​ ಕಳ್ಳನನ್ನು ಬೇಗೂರು ನಿವಾಸಿ ಶಿವು @ ಶಿವರಪ್ಪನ್ ಎಂದು ಗುರುತಿಸಲಾಗಿದೆ.

ಹೆಂಡತಿ, ಮಕ್ಕಳಿಲ್ಲದ ಶಿವು ಆತ್ಮಹತ್ಯೆ ಮಾಡಿಕೊಳ್ಳಲು ಯೋಚಿಸುತ್ತಿದ್ದಾಗ ಏರಿಯಾದಲ್ಲಿ ಸ್ನೇಹಿತರು ಮಕ್ಕಳ ಸ್ಕೂಲ್ ಫೀಸ್ ಕಟ್ಟಲು ಪರದಾಡುತ್ತಿರುವುದನ್ನು ನೋಡಿದ್ದ. ಬಳಿಕ ಶಿವು ಬ್ಯಾಡರಹಳ್ಳಿ ಸೇರಿದಂತೆ ಹಲವೆಡೆ ಮನೆಗಳಿಗೆ ಕನ್ನ ಹಾಕಿದ್ದು, ಕದ್ದ ಚಿನ್ನಾಭರಣವನ್ನು ಸ್ನೇಹಿತರಾದ ಅನಿಲ್ @ ಜಗ್ಗ ಮತ್ತು ವಿವೇಕ್‌ನ ಸಹಾಯದಿಂದ ಮಾರಾಟ ಮಾಡಿದ್ದಾನೆ ಮತ್ತು ಬಂದ ಹಣದಿಂದ ಸ್ನೇಹಿತರಾದ ವಿವೇಕ್​ ಮತ್ತು ಅನಿಲ್​ಗೆ ಆಟೋ ಕೊಡಿಸಿದ್ದನು. ಇದನ್ನೂ ಓದಿ :ಭೀಕರ ಸರಣಿ ಅಪಘಾತ: ಒಂದೇ ಕುಟುಂಬದ ನಾಲ್ವರು ಸೇರಿದಂತೆ 6 ಮಂದಿ ಸಾ*ವು

ತಮಿಳುನಾಡಿನಲ್ಲಿ 22 ಲಕ್ಷಕ್ಕೆ ಚಿನ್ನ ಮಾರಾಟ ಮಾಡಿಸಿದ್ದ ಶಿವು ಬಂದ ಹಣದಲ್ಲಿ ವಿವೇಕ್‌ಗೆ 4 ಲಕ್ಷ, ಅನಿಲ್‌ಗೆ 4 ಲಕ್ಷ ರೂ. ಮೌಲ್ಯದ ಆಟೋ ಕೊಡಿಸಿದ್ದ. ಉಳಿದ 14 ಲಕ್ಷ ರೂ. ಹಣದಲ್ಲಿ ಏರಿಯಾದ 20 ಮಕ್ಕಳಿಗೆ ಶಾಲಾ ಹಾಗೂ ಕಾಲೇಜ್ ಫೀಸ್ ಕಟ್ಟಿದ್ದಾನೆ. ಮನೆಗಳ್ಳರ ಬೆನ್ನತ್ತಿದ್ದ ಬ್ಯಾಡರಹಳ್ಳಿ ಪೊಲೀಸರು ಮೂವರನ್ನು ಬಂಧಿಸಿದ್ದಾರೆ. ಶಿವು, ಅನಿಲ್ ಹಾಗು ವಿವೇಕ್‌ನನ್ನು ಬಂಧಿಸಿದ ಪೊಲೀಸರು 24 ಲಕ್ಷ ಮೌಲ್ಯದ 260 ಗ್ರಾಂ ಚಿನ್ನದ ಗಟ್ಟಿಯನ್ನು ಸೀಜ್ ಮಾಡಿದ್ದಾರೆ.

Exit mobile version