ಚಂಡೀಗಢ: ಸಾಲದ ಸುಳಿಗೆ ಸಿಲುಕಿದ್ದ ಒಂದೇ ಕುಟುಂಬದ 7 ಮಂದಿ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹರಿಯಾಣದ ಪಂಚಕುಲ ಸೆಕ್ಟರ್ 27ರಲ್ಲಿ ನಡೆದಿದೆ. ಮೃತರೆಲ್ಲರು ಉತ್ತರಖಂಡ್ನ ಡೆಹ್ರಾಡೂನ್ನವರು ಎಂದು ಪ್ರಾಥಮಿಕ ಮಾಹಿತಿಯಲ್ಲಿ ತಿಳಿದು ಬಂದಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಉತ್ತರಾಖಂಡ ಡೆಹ್ರಾಡೂನ್ ನಿವಾಸಿ ಪ್ರವೀಣ್ ಮಿತ್ತಲ್ (42) ಅವರ ಪತ್ನಿ, ಪೋಷಕರು, ಇಬ್ಬರು ಹೆಣ್ಣು ಮಕ್ಕಳು ಹಾಗೂ ಓರ್ವ ಮಗ ಮೃತರೆಂದು ಗುರುತಿಸಲಾಗಿದ್ದು. ಹರಿಯಾಣದ ಪಂಚಕುಲದ ಸೆಕ್ಟರ್27ರಲ್ಲಿ ಸೋಮವಾರ ರಾತ್ರಿ ಕಾರೊಂದನ್ನು ಪಾರ್ಕ್ ಮಾಡಲಾಗಿತ್ತು. ಆ ಕಾರಿನಲ್ಲಿದ್ದ 6 ಮಂದಿ ಅಸ್ವಸ್ಥರಾಗಿ ಪರದಾಡುತ್ತಿದ್ದರು. ಇದನ್ನೂ ಓದಿ :ರಾಜಕಾರಣಿಗಳ ಹಿತದೃಷ್ಟಿಗಾಗಿ ತಮ್ಮನ್ನಾ ರಾಯಭಾರಿ..?; ಬಿ, ವೈ ವಿಜಯೇಂದ್ರ
ಕಾರಿನ ಪಕ್ಕದಲ್ಲಿ ಕುಳಿತಿದ್ದ ವ್ಯಕ್ತಿಯ ಬಳಿ ವಿಚಾರಿಸಿದಾಗ ಆತ, ನಾನು ಸಾಲದ ಸುಳಿಯಲ್ಲಿ ಸಿಲುಕಿದ್ದೇನೆ. ಹಾಗಾಗಿ ನನ್ನ ಕುಟುಂಬದವರೆಲ್ಲರೂ ವಿಷ ಸೇವಿಸಿದ್ದೇವೆ. ಇನ್ನು 5 ನಿಮಿಷದಲ್ಲಿ ನಾನೂ ಸಾಯುತ್ತೇನೆ ಎಂದು ಹೇಳಿದ್ದರು ಎಂದು ಪ್ರತ್ಯಕ್ಷದರ್ಶಿಯೊಬ್ಬರು ತಿಳಿಸಿದ್ದಾರೆ. ಇದನ್ನು ಕೇಳಿದ ಕೂಡಲೇ ಆ ವ್ಯಕ್ತಿ ಪೊಲೀಸರಿಗೆ ಮಾಹಿತಿ ನೀಡಿದ್ದು. ಸ್ಥಳಕ್ಕೆ ಬಂದ ಪೊಲೀಸರು ಕಾರಿನಲ್ಲಿದ್ದ ಎಲ್ಲರನ್ನು ಆಸ್ಪತ್ರೆಗೆ ಸಾಗಿಸಿದ್ದಾರೆ.
ಆದರೆ ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ 6 ಮಂದಿ ಮೃತಪಟ್ಟಿದ್ದು, ಅರೆಜೀವವಾಗಿದ್ದ ಓರ್ವ ವ್ಯಕ್ತಿಯನ್ನು ಸೆಕ್ಟರ್ 6ರ ಸಿವಿಲ್ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಆಸ್ಪತ್ರೆಗೆ ದಾಖಲಿಸಿದ ನಂತರ ಆತನು ಸಾವನ್ನಪ್ಪಿದ್ದಾನೆ ಎಂದು ವೈದ್ಯರು ಘೋಷಿಸಿದ್ದಾರೆ. ಇದನ್ನೂ ಓದಿ :ಕೋವಿಡ್ ಹೆಚ್ಚಳ; 50 ವರ್ಷ ಮೇಲ್ಪಟ್ಟವರಿಗೆ ಮಾಸ್ಕ್ ಕಡ್ಡಾಯ, ಆರೋಗ್ಯ ಸಿಬ್ಬಂದಿ ರಜೆ ಕಟ್