Thursday, August 21, 2025
Google search engine
HomeUncategorizedಸಾಲಭಾದೆ; ಕಾರ್​ನಲ್ಲಿ ವಿಷ ಸೇವಿಸಿ ಒಂದೇ ಕುಟುಂಬದ 7 ಮಂದಿ ಆತ್ಮಹ*ತ್ಯೆ

ಸಾಲಭಾದೆ; ಕಾರ್​ನಲ್ಲಿ ವಿಷ ಸೇವಿಸಿ ಒಂದೇ ಕುಟುಂಬದ 7 ಮಂದಿ ಆತ್ಮಹ*ತ್ಯೆ

ಚಂಡೀಗಢ: ಸಾಲದ ಸುಳಿಗೆ ಸಿಲುಕಿದ್ದ ಒಂದೇ ಕುಟುಂಬದ 7 ಮಂದಿ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹರಿಯಾಣದ ಪಂಚಕುಲ ಸೆಕ್ಟರ್​ 27ರಲ್ಲಿ ನಡೆದಿದೆ. ಮೃತರೆಲ್ಲರು ಉತ್ತರಖಂಡ್​ನ ಡೆಹ್ರಾಡೂನ್​ನವರು ಎಂದು ಪ್ರಾಥಮಿಕ ಮಾಹಿತಿಯಲ್ಲಿ ತಿಳಿದು ಬಂದಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಉತ್ತರಾಖಂಡ ಡೆಹ್ರಾಡೂನ್‌ ನಿವಾಸಿ ಪ್ರವೀಣ್ ಮಿತ್ತಲ್ (42) ಅವರ ಪತ್ನಿ, ಪೋಷಕರು, ಇಬ್ಬರು ಹೆಣ್ಣು ಮಕ್ಕಳು ಹಾಗೂ ಓರ್ವ ಮಗ ಮೃತರೆಂದು ಗುರುತಿಸಲಾಗಿದ್ದು. ಹರಿಯಾಣದ ಪಂಚಕುಲದ ಸೆಕ್ಟರ್27ರಲ್ಲಿ ಸೋಮವಾರ ರಾತ್ರಿ ಕಾರೊಂದನ್ನು ಪಾರ್ಕ್ ಮಾಡಲಾಗಿತ್ತು. ಆ ಕಾರಿನಲ್ಲಿದ್ದ 6 ಮಂದಿ ಅಸ್ವಸ್ಥರಾಗಿ ಪರದಾಡುತ್ತಿದ್ದರು. ಇದನ್ನೂ ಓದಿ :ರಾಜಕಾರಣಿಗಳ ಹಿತದೃಷ್ಟಿಗಾಗಿ ತಮ್ಮನ್ನಾ ರಾಯಭಾರಿ..?; ಬಿ, ವೈ ವಿಜಯೇಂದ್ರ

ಕಾರಿನ ಪಕ್ಕದಲ್ಲಿ ಕುಳಿತಿದ್ದ ವ್ಯಕ್ತಿಯ ಬಳಿ ವಿಚಾರಿಸಿದಾಗ ಆತ, ನಾನು ಸಾಲದ ಸುಳಿಯಲ್ಲಿ ಸಿಲುಕಿದ್ದೇನೆ. ಹಾಗಾಗಿ ನನ್ನ ಕುಟುಂಬದವರೆಲ್ಲರೂ ವಿಷ ಸೇವಿಸಿದ್ದೇವೆ. ಇನ್ನು 5 ನಿಮಿಷದಲ್ಲಿ ನಾನೂ ಸಾಯುತ್ತೇನೆ ಎಂದು ಹೇಳಿದ್ದರು ಎಂದು ಪ್ರತ್ಯಕ್ಷದರ್ಶಿಯೊಬ್ಬರು ತಿಳಿಸಿದ್ದಾರೆ. ಇದನ್ನು ಕೇಳಿದ ಕೂಡಲೇ ಆ ವ್ಯಕ್ತಿ ಪೊಲೀಸರಿಗೆ ಮಾಹಿತಿ ನೀಡಿದ್ದು. ಸ್ಥಳಕ್ಕೆ ಬಂದ ಪೊಲೀಸರು ಕಾರಿನಲ್ಲಿದ್ದ ಎಲ್ಲರನ್ನು ಆಸ್ಪತ್ರೆಗೆ ಸಾಗಿಸಿದ್ದಾರೆ.

ಆದರೆ ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ 6 ಮಂದಿ ಮೃತಪಟ್ಟಿದ್ದು, ಅರೆಜೀವವಾಗಿದ್ದ ಓರ್ವ ವ್ಯಕ್ತಿಯನ್ನು ಸೆಕ್ಟರ್​ 6ರ ಸಿವಿಲ್​ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಆಸ್ಪತ್ರೆಗೆ ದಾಖಲಿಸಿದ ನಂತರ ಆತನು ಸಾವನ್ನಪ್ಪಿದ್ದಾನೆ ಎಂದು ವೈದ್ಯರು ಘೋಷಿಸಿದ್ದಾರೆ. ಇದನ್ನೂ ಓದಿ :ಕೋವಿಡ್​ ಹೆಚ್ಚಳ; 50 ವರ್ಷ ಮೇಲ್ಪಟ್ಟವರಿಗೆ​​ ಮಾಸ್ಕ್​ ಕಡ್ಡಾಯ, ಆರೋಗ್ಯ ಸಿಬ್ಬಂದಿ ರಜೆ ಕಟ್​

ಕಾರ್ಯಕ್ರಮದಲ್ಲಿ ಭಾಗಿಯಾಗಿ ವಾಪಾಸಾಗುವಾಗ ಆತ್ಮಹತ್ಯೆ..!

ಡೆಹ್ರಾಡೂನ್ ಮೂಲದ ಪ್ರವೀಣ್ ಮಿತ್ತಲ್ ಅವರ ಕುಟುಂಬವು ಸೋಮವಾರ ರಾತ್ರಿ ಪಂಚಕುಲದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ, ಹಿಂತಿರುಗುವಾಗ ವಿಷ ಸೇವಿಸಿ ಆತ್ಮಹತ್ಯೆ ಮಾಡಿದೆ. ಕಾರಿನಲ್ಲಿ ಸಿಕ್ಕ ಡೆತ್‌ನೋಟ್‌ನಲ್ಲಿ ಸಾಲಭಾದೆಯಿಂದ ಕುಟುಂಬಸ್ಥರೆಲ್ಲರು ಆತ್ಮಹತ್ಯೆ ಮಾಡಿಕೊಂಡಿದ್ದೇವೆ ಎಂದು ಬರೆಯಲಾಗಿದೆ. ಇದನ್ನೂ ಓದಿ: ಅವೈಜ್ಞಾನಿಕವಾಗಿ ವಾಹನ ತಡೆದಿದ್ದಾರೆ; ಮಂಡ್ಯ ಘಟನೆ ತಲೆ ತಗ್ಗಿಸುವಂತದ್ದು; ಪರಮೇಶ್ವರ್​

ಕಾರಿನಲ್ಲಿದ್ದ 7 ಮಂದಿಯೂ ಮೃತಪಟ್ಟಿದ್ದಾರೆ. ಪ್ರಾಥಮಿಕ ತನಿಖೆಯಲ್ಲಿ ಆತ್ಮಹತ್ಯೆಯೆಂದು ತಿಳಿದುಬಂದಿದೆ. ಹೆಚ್ಚಿನ ತನಿಖೆಯನ್ನು ಕೈಗೊಂಡಿದ್ದೇವೆ ಎಂದು ಡಿಸಿಪಿ ಹಿಮಾದ್ರಿ ಕೌಶಿಕ್ ತಿಳಿಸಿದ್ದಾರೆ. ಘಟನಾ ಸ್ಥಳಕ್ಕೆ ಡಿಸಿಪಿ ಹಿಮಾದ್ರಿ ಕೌಶಿಕ್ ಹಾಗೂ ಪಂಚಕುಲ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಪಂಚಕುಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments