Thursday, August 21, 2025
Google search engine
HomeUncategorizedಕನ್ನಡ ಕಿರುತೆರೆಯ ಖ್ಯಾತ ನಟ ಶ್ರೀಧರ್​ ನಿಧನ

ಕನ್ನಡ ಕಿರುತೆರೆಯ ಖ್ಯಾತ ನಟ ಶ್ರೀಧರ್​ ನಿಧನ

ಪಾರು ಧಾರಾವಾಹಿ ನಟ ಶ್ರೀಧರ್‌ ಅವರು ಮೇ 26ರಂದು ರಾತ್ರಿ 10ಗಂಟೆಗೆ ನಿಧನರಾಗಿದ್ದಾರೆ. ಬಹುದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಶ್ರೀಧರ್‌ ಅವರು ನಿಧನರಾಗಿದ್ದಾರೆ ಎಂದು ನಟಿ ಸಪ್ನಾ ದೀಕ್ಷಿತ್‌, ನಾಗೇಂದ್ರ ಶಾ ಅವರು ಸೋಶಿಯಲ್‌ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಶ್ರೀಧರ್ ನಾಯಕ್ ಅವರಿಗೆ ಇತ್ತೀಚೆಗೆ ತೀವ್ರ ಅನಾರೋಗ್ಯ ಕಾಡಿತ್ತು. ಶ್ರೀಧರ್ ಅವರು ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರು ಎಳೆದಿದ್ದಾರೆ. ಬೆಂಗಳೂರಿನ ಹೆಬ್ಬಾಳದ ಬ್ಯಾಪ್ಟಿಸ್ಟ್ ಆಸ್ಪತ್ರೆಯಲ್ಲಿ ಅವರ ಮೃತ ಶರೀರವನ್ನು ಇಡಲಾಗಿದೆ.

ಇದನ್ನೂ ಓದಿ :ಹಾಡಹಗಲೇ ಒಂಟಿ ಮಹಿಳೆಯ ಬರ್ಬರ ಹತ್ಯೆ; ಚಿನ್ನಾಭರಣ ಕಳವು ಮಾಡಿ ಪರಾರಿಯಾದ ಹಂತಕರು

ಗುರುತೇ ಸಿಗದಷ್ಟು ಬದಲಾಗಿ ಶ್ರೀಧರ್ ನಾಯಕ್ ಬೆಡ್ ಮೇಲೆ ಮಲಗಿದ್ದು ನೋಡಿ ಹಲವರಿಗೆ ಶಾಕ್ ಆಗಿತ್ತು. ಸಹಾಯ ಮಾಡುವಂತೆ ಅನೇಕರು ಕೋರಿಕೊಂಡಿದ್ದರು. ‘ಪಾರು’ ಮತ್ತು ‘ವಧು’ ಧಾರಾವಾಹಿಗಳಲ್ಲಿ ಅವರ ಪಾತ್ರಗಳು ಜನಪ್ರಿಯವಾಗಿದ್ದವು. ‘ಮ್ಯಾಕ್ಸ್’ ಚಿತ್ರದಲ್ಲೂ ಅವರು ನಟಿಸಿದ್ದರು. ಬೆಂಗಳೂರಿನ ಬ್ಯಾಪ್ಟಿಸ್ಟ್ ಆಸ್ಪತ್ರೆಯಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments