ದೆಹಲಿ: ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ಇದ್ದಕ್ಕಿದ್ದಂತೆ ಟೆಸ್ಟ್ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸುವ ಮೂಲಕ ಕ್ರಿಕೆಟ್ ಜಗತ್ತನ್ನು ಒಂದು ಕ್ಷಣ ಅಚ್ಚರಿಗೊಳಿಸಿದರು. ಕೊಹ್ಲಿಯ ಈ ನಿರ್ಧಾರ ತಂಡದ ಆಟಗಾರರಿಗೆ ಅಚ್ಚರಿ ಮೂಡಿಸಿತ್ತು. ಇದೀಗ ಇದರ ಬಗ್ಗೆ ಟೀಂ ಇಂಡಿಯಾದ ಮಾಜಿ ಆಟಗಾರ ಹರ್ಭಜನ್ ಸಿಂಗ್ ವಿರಾಟ್ ಕೊಹ್ಲಿಯ ಈ ನಿರ್ಧಾರ ತನ್ನ ಮಗಳು ಹೇಗೆ ಪ್ರತಿಕ್ರಿಯೆ ನೀಡಿದ್ದಳು ಎಂಬುದನ್ನ ಹೇಳಿದ್ದಾರೆ.
ಇದನ್ನೂ ಓದಿ :ರಾಜಣ್ಣ ಹನಿಟ್ರ್ಯಾಪ್ ಪ್ರಕರಣ; ಸಾಕ್ಷಿ ಸಿಗಲಿಲ್ಲ ಎಂದು ಕೇಸ್ ಕ್ಲೋಸ್ ಮಾಡಿದ SIT
T20 ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಕೆಲವೇ ತಿಂಗಳಲ್ಲಿ ಕೊಹ್ಲಿ ಟೆಸ್ಟ್ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದು ಕ್ರಿಕೆಟ್ ಜಗತ್ತಿಗೆ ಅಚ್ಚರಿ ಮೂಡಿಸಿತ್ತು. ಕೊಹ್ಲಿ ಅವರ ನಿವೃತ್ತಿ ಘೋಷಣೆಯು ಅವರ ಅಭಿಮಾನಿಗಳಿಗೆ ಮಾತ್ರವಲ್ಲದೆ ತಂಡದ ಮಾಜಿ ಆಟಗಾರರಿಗೂ ಅಚ್ಚರಿ ಮೂಡಿಸಿದೆ. ಇನ್ನು ಈ ಕುರಿತು ಮಾಜಿ ಮಾಜಿ ಕ್ರಿಕೆಟಿಗ ಹರ್ಭಜನ್ ಸಿಂಗ್ ಅವರ ಮಗಳು ಹಿನಾಯಾ ಹೇಗೆ ಭಾವನಾತ್ಮಕವಾಗಿ ಪ್ರತಿಕ್ರಿಯೆ ನೀಡಿದರು ಎಂಬುದನ್ನು ಸಂದರ್ಶನವೊಂದರಲ್ಲಿ ಹಂಚಿಕೊಂಡಿದ್ದಾರೆ.