Site icon PowerTV

ತಪ್ಪು ಮಾಡಿಲ್ಲ, ಕ್ಷಮೆ ಕೇಳಲ್ಲ; ಮತ್ತೆ ಉದ್ದಟತನದ ಹೇಳಿಕೆ ನೀಡಿದ ನಟ ಕಮಲ್​ ಹಾಸನ್​

ಕನ್ನಡ ಭಾಷೆಯ ಬಗ್ಗೆ ಕಮಲ್ ಹಾಸನ್ ನೀಡಿರುವ ಹೇಳಿಕೆಗೆ ಕರ್ನಾಟಕದಲ್ಲಿ ತೀವ್ರ ವಿರೋಧ ವ್ಯಕ್ತವಾಗಿದೆ. ಕಮಲ್​ ಹಾಸನ್​ ಕ್ಷಮೆ ಕೇಳದಿದ್ದರೆ ಕನ್ನಡದಿಂದ ಬ್ಯಾನ್​ ಮಾಡಬೇಕು ಎಂಬ ಕೂಗು ಕೇಳಿ ಬರುತ್ತಿದೆ. ಇದರ ನಡುವೆ ನಟ ‘ಕರ್ನಾಟಕಕ್ಕೆ ಕ್ಷಮೆ ಕೇಳಲ್ಲ, ನಾನು ತಪ್ಪು ಮಾಡಿಲ್ಲ’ ಎಂದು ಕಮಲ್ ಹಾಸನ್ ಮತ್ತೆ ಉದ್ಧಟತನ ತೋರಿದ್ದಾರೆ. ಇದನ್ನೂ ಓದಿ:ಸ್ಟಾರ್ ಕ್ರಿಕೆಟಿಗ ವೈಭವ್ ಸೂರ್ಯವಂಶಿ ಭೇಟಿಯಾದ ಪ್ರಧಾನಿ ಮೋದಿ

ಕಮಲ್ ಹಾಸನ್ ಕನ್ನಡ ಭಾಷೆಯ ಬಗ್ಗೆ ನೀಡಿರುವ ಹೇಳಿಕೆ ರಾಜ್ಯದಾದ್ಯಂತ ವಿರೋಧಕ್ಕೆ ಒಳಗಾಗಿದೆ. ಬೆಂಗಳೂರು ಸೇರಿದಂತೆ ರಾಜ್ಯದ ಇನ್ನೂ ಕೆಲವೆಡೆ ಕಮಲ್ ಹಾಸನ್ ಹೇಳಿಕೆ ಖಂಡಿಸಿ ಪ್ರತಿಭಟನೆ ನಡೆಸಲಾಗುತ್ತಿದೆ. ಫಿಲಂ ಚೇಂಬರ್ ಹಾಗೂ ಕೆಲ ಕನ್ನಡಪರ ಸಂಘಟನೆಗಳು, ‘ಕಮಲ್ ಹಾಸನ್ ಕ್ಷಮೆ ಕೇಳದ ಹೊರತು ಅವರ ನಟನೆಯ ‘ಥಗ್ ಲೈಫ್’ ಸಿನಿಮಾ ಬಿಡುಗಡೆಗೆ ಅವಕಾಶ ಕೊಡುವುದಿಲ್ಲ ಎಂದು ಪಟ್ಟು ಹಿಡಿದಿವೆ. ಇದನ್ನೂ ಓದಿ:ಸಂಸ್ಕಾರಹೀನರಾಗಿ ವರ್ತಿಸೋ MLC ರವಿ ಕುಮಾರ್​ಗೆ ಮಂಗ ಅಂತ ಹೆಸರಿಡಬೇಕು; ಪ್ರದೀಪ್​ ಈಶ್ವರ್​

ಆದರೆ ಈ ಕುರಿತು ಚೆನೈನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿರುವ ನಟ ಕಮಲ್​ ಹಾಸನ್​ ‘ನಾನು ತಪ್ಪು ಮಾಡಿಲ್ಲ, ಹಾಗಾಗಿ ಕ್ಷಮೆ ಕೇಳುವ ಪ್ರಶ್ನೆಯೇ ಇಲ್ಲ’ ಎಂದಿದ್ದಾರೆ. ‘ನನ್ನಿಂದ ತಪ್ಪು ಆಗಿದ್ದರೆ ಮಾತ್ರ ಕ್ಷಮೆಯಾಚಿಸುವೆ, ನನ್ನಿಂದ ತಪ್ಪು ಆಗಿಲ್ಲ, ಹಾಗಾಗಿ ನಾನು ಕ್ಷಮೆ ಕೇಳಲ್ಲ, ಯಾವುದೇ ಬೆದರಿಕೆ, ಎಚ್ಚರಿಕೆಗೆ ನಾನು ಹೆದರುವುದಿಲ್ಲ, ನಾನು ಕಾನೂನು & ನ್ಯಾಯದ ಮೇಲೆ ನಂಬಿಕೆ ಇಟ್ಟಿದ್ದೇನೆ’ ಎಂದು ಸ್ಪಷ್ಟಪಡಿಸಿದ್ದಾರೆ.

ನಿನ್ನೆ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ನಡೆದ ಸಭೆಯಲ್ಲಿ ಚಿತ್ರಸಂಘದ ಅಧ್ಯಕ್ಷ ನರಸಿಂಹಲು, ಥಗ್​ಲೈಫ್​ ಸಿನಿಮಾದ ವಿತರಕ ವೆಂಕಟೇಶ್​ ಕಮಲ್​ ಹಾಸನ್​​ ಬಳಿ ಕ್ಷಮೆ ಕೇಳಲು ಒತ್ತಾಯಿಸುತ್ತೇವೆ ಎಂದು ಹೇಳಿದ್ದರು. ಆದರೆ ಇದಾದ ಬಳಿಕವು ಕಮಲ್​ ತಾವು ಕ್ಷಮೆ ಕೇಳುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಇದನ್ನೂ ಓದಿ:ಮಂಗಳೂರಲ್ಲಿ ಮಳೆ ಅವಾಂತರ; ಕಾಂಪೌಂಡ್​ ಕುಸಿದು ಬಾಲಕಿ ಸಾ*ವು, ಸ್ಥಳಕ್ಕೆ ತೆರಳಲು ಸಚಿವರಿಗೆ ಸಿಎಂ ಸೂಚನೆ

Exit mobile version