Site icon PowerTV

ಭಾರೀ ಮಳೆಗೆ ಸೇನಾ ಶಿಬಿರದ ಮೇಲೆ ಗುಡ್ಡ ಕುಸಿತ; ಮೂವರು ಸಾವು, 6 ಮಂದಿ ಕಣ್ಮರೆ

ಸಿಕ್ಕಿಂನ ಛಾಟೆನ್‌ನಲ್ಲಿ ಸೇನಾ ಶಿಬಿರದ ಮೇಲೆ ಭೂಕುಸಿತ ಸಂಭವಿಸಿದ್ದು, ಕನಿಷ್ಠ ಮೂವರು ಸಾವನ್ನಪ್ಪಿ ಆರು ಭದ್ರತಾ ಸಿಬ್ಬಂದಿ ನಾಪತ್ತೆಯಾಗಿದ್ದಾರೆ ಎಂದು ರಕ್ಷಣಾಧಿಕಾರಿಗಳು ಸೋಮವಾರ ಹೇಳಿದ್ದಾರೆ. ಭಾನುವಾರ (ಜೂನ್​.01) ರಾತ್ರಿ 7 ಗಂಟೆ ವೇಳೆಗೆ ಭಾರಿ ಮಳೆಯಿಂದಾಗಿ ಭೂಕುಸಿತ ಸಂಭವಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ :ಮಂಗಳೂರು ಕ್ಲಾಕ್​ ಟವರ್ ಮುಂಭಾಗ ಪೊಲೀಸರಿಂದ ಲಾಠಿ ಡ್ರಿಲ್​; ಗಲಭೆಕೋರರಿಗೆ ನೇರ ಎಚ್ಚರಿಕೆ

ಘಟನೆ ಕುರಿತು ರಕ್ಷಣಾ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದು “ಭಾರಿ ಮಳೆಯಿಂದಾಗಿ ಭೂ ಕುಸಿತ ಸಂಭವಿಸಿದೆ. ಮಣ್ಣಿನಡಿ ಸಿಲುಕಿದ್ದ ಮೂರು ಶವಗಳನ್ನು ಹೊರತೆಗೆಯಲಾಗಿದ್ದು, ಆರು ಸೈನಿಕರು ನಾಪತ್ತೆಯಾಗಿದ್ದಾರೆ. ಭಾರತೀಯ ಸೇನೆಯು ತಕ್ಷಣವೇ ರಕ್ಷಣಾ ಕಾರ್ಯಾಚರಣೆಗಳನ್ನು ಪ್ರಾರಂಭಿಸಿದ್ದು. ನಾಲ್ವರು ಅಧಿಕಾರಿಗಳನ್ನು ರಕ್ಷಿಸಲಾಗಿದೆ ಎಂದು ತಿಳಿದು ಬಂದಿದೆ. ಇದನ್ನೂ ಓದಿ :ಅಣ್ಣಾ ವಿವಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ಆರೋಪ; ಅಪರಾಧಿಗೆ 30 ವರ್ಷ ಜೈಲು ಶಿಕ್ಷೆ

ಮೃತ ಸೈನಿಕರನ್ನು ಹವಾಲ್ದಾರ್ ಲಖ್ವಿಂದರ್ ಸಿಂಗ್, ಲ್ಯಾನ್ಸ್ ನಾಯಕ್ ಮುನೀಶ್ ಠಾಕೂರ್ ಮತ್ತು ಪೋರ್ಟರ್ ಅಭಿಷೇಕ್ ಲಖಾಡ ಎಂದು ಗುರುತಿಸಲಾಗಿದ್ದು. ಕಾಣೆಯಾಗಿರುವ 6 ಸಿಬ್ಬಂದಿಗಳಿಗಾಗಿ ಹುಡುಕಾಟ ಆರಂಭಿಸಲಾಗಿದೆ.

ಮಳೆಗೆ ನಲುಗಿದ ಈಶಾನ್ಯ ರಾಜ್ಯಗಳು..!

ಭಾರೀ ಮಳೆಯಿಂದಾಗಿ ಈಶಾನ್ಯ ರಾಜ್ಯಗಳ ಹಲವು ಭಾಗಗಳು ಪ್ರವಾಹದಂತಹ ಪರಿಸ್ಥಿತಿಯನ್ನು ಎದುರಿಸುತ್ತಿದ್ದು. ಅಸ್ಸಾಂನ 15ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಪ್ರವಾಹದಿಂದಾಗಿ 78,000 ಕ್ಕೂ ಹೆಚ್ಚು ಜನರು ಬಾಧಿತರಾಗಿದ್ದಾರೆ. ಕಳೆದ ಕೆಲವು ದಿನಗಳಿಂದ ರಾಜ್ಯಾದ್ಯಂತ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ರಸ್ತೆ ಸಾರಿಗೆ, ರೈಲು ಮತ್ತು ದೋಣಿ ಸೇವೆಗಳು ಸಹ ತೊಂದರೆಗೊಳಗಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ :ರಸ್ತೆಗೆ ಬೇಲಿ ಹಾಕಿದ ಭೂಪ; ಸ್ಮಶಾನಕ್ಕೆ ದಾರಿ ಇಲ್ಲದೇ ಹೆಣ ಹೂಳಲು ಪರದಾಟ

ಕಳೆದ ಎರಡು ದಿನಗಳಲ್ಲಿ ಅರುಣಾಚಲ ಪ್ರದೇಶದಲ್ಲಿ ಧಾರಾಕಾರ ಮಳೆಯಿಂದಾಗಿ ಉಂಟಾದ ಭೂಕುಸಿತಗಳಲ್ಲಿ ಒಂಬತ್ತು ಜನರು ಸಾವನ್ನಪ್ಪಿದ್ದಾರೆ. ಸತತ ಮಳೆಯಿಂದಾಗಿ ಉಂಟಾದ ಭೂಕುಸಿತದಿಂದಾಗಿ ಮುಖ್ಯ ರಸ್ತೆ ಸಂಪರ್ಕ ಕಡಿತಗೊಂಡಿದ್ದರಿಂದ ಶನಿವಾರ ಉತ್ತರ ಸಿಕ್ಕಿಂನ ವಿವಿಧ ಭಾಗಗಳಲ್ಲಿ ಸುಮಾರು 1,500 ಪ್ರವಾಸಿಗರು ಸಿಲುಕಿಕೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Exit mobile version