ಚಿಕ್ಕಬಳ್ಳಾಪುರ: ಅಪ್ರಾಪ್ತ ಬಾಲಕಿ ಮೇಲೆ ವ್ಯಕ್ತಿಯೊಬ್ಬ ಅತ್ಯಾಚಾರ ಎಸಗಿರುವ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದ್ದು. ಘಟನೆ ಸಂಬಂಧ ಚಿಕ್ಕಬಳ್ಳಾಪುರ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಯನ್ನು 55 ವರ್ಷದ ಮಹಪ್ಯೂಸ್ ಎಂದು ಗುರುತಿಸಲಾಗಿದೆ. ಈತನ ಮಗ ಮದರಸವೊಂದರಲ್ಲಿ ಮೌಲ್ವಿಯಾಗಿದ್ದಾನೆ ಎಂದು ತಿಳಿದು ಬಂದಿದೆ. ಇದನ್ನೂ ಓದಿ :ವನ್ಯಜೀವಿಗಳ ಕಾಳಜಿಗಾಗಿ ಕೈಲಾದಷ್ಟು ಸೇವೆ ಸಲ್ಲಿಸುತ್ತೇನೆ; ಅನಿಲ್ ಕುಂಬ್ಳೆ
ಅಪ್ರಾಪ್ತ ಬಾಲಕಿ ಮೇ.30ರ ಸಂಜೆ ಮನೆ ಮುಂಭಾಗ ಆಟವಾಡುವ ವೇಳೆ ಕೃತ್ಯ ನಡೆದಿದ್ದು. ಆರೋಪಿ ಮಹಪ್ಯೂಸ್ ಬಾಲಕಿಗೆ ಚಾಕ್ಲೇಟ್ ನೀಡುವ ಆಮಿಷ ತೋರಿಸಿ ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದಾನೆ. ನಂತರ ಬಾಲಕಿಯ ತಾಯಿ ಮಗಳು ಅಳುತ್ತಿರುವುದನ್ನು ಕಂಡು ಏನಾಯಿತು ಎಂದು ಕೇಳಿದಾಗ ಘಟನೆ ಬೆಳಕಿಗೆ ಬಂದಿದ್ದು. ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಇದನ್ನು ಓದಿ:ಡಾಕ್ಟರೇಟ್ ಪದವಿ ತಿರಸ್ಕರಿಸಿದ ಸಚಿವ ಸತೀಶ್ ಜಾರಕಿಹೊಳಿ
ಚಿಕ್ಕಬಳ್ಳಾಪುರ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು. ಆರೋಪಿ ಮಹಪ್ಯೂಸ್ನನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಆರೋಪಿಯ ಮಗ ಬೇರೊಂದು ಮಸೀದಿಯಲ್ಲಿ ಮೌಲ್ವಿಯಾಗಿ ಕೆಲಸ ಮಾಡುತ್ತಿದ್ದುದರಿಂದ ಮೌಲ್ವಿಯ ಆಶ್ರಯಕ್ಕೆ ಮಸಿದಿಯ ಕೊಠಡಿಯನ್ನು ಜಮಾತ್ ನೀಡಿತ್ತು. ಅದೇ ಕೊಠಡಿಯನ್ನು ಆರೋಪಿ ದುರುಪಯೋಗಪಡಿಸಿಕೊಂಡಿದ್ದಾನೆ ಎಂದು ಆರೋಪಿಸಲಾಗಿದೆ.