Site icon PowerTV

ಅಪ್ರಾಪ್ತ ಬಾಲಕಿ ಮೇಲೆ 55 ವರ್ಷದ ವ್ಯಕ್ತಿಯಿಂದ ಅತ್ಯಾಚಾರ

ಚಿಕ್ಕಬಳ್ಳಾಪುರ: ಅಪ್ರಾಪ್ತ ಬಾಲಕಿ ಮೇಲೆ ವ್ಯಕ್ತಿಯೊಬ್ಬ ಅತ್ಯಾಚಾರ ಎಸಗಿರುವ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದ್ದು. ಘಟನೆ ಸಂಬಂಧ ಚಿಕ್ಕಬಳ್ಳಾಪುರ ಮಹಿಳಾ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಯನ್ನು 55 ವರ್ಷದ ಮಹಪ್ಯೂಸ್​ ಎಂದು ಗುರುತಿಸಲಾಗಿದೆ. ಈತನ ಮಗ ಮದರಸವೊಂದರಲ್ಲಿ ಮೌಲ್ವಿಯಾಗಿದ್ದಾನೆ ಎಂದು ತಿಳಿದು ಬಂದಿದೆ. ಇದನ್ನೂ ಓದಿ :ವನ್ಯಜೀವಿಗಳ ಕಾಳಜಿಗಾಗಿ ಕೈಲಾದಷ್ಟು ಸೇವೆ ಸಲ್ಲಿಸುತ್ತೇನೆ; ಅನಿಲ್​ ಕುಂಬ್ಳೆ

ಅಪ್ರಾಪ್ತ ಬಾಲಕಿ ಮೇ.30ರ ಸಂಜೆ ಮನೆ ಮುಂಭಾಗ ಆಟವಾಡುವ ವೇಳೆ ಕೃತ್ಯ ನಡೆದಿದ್ದು. ಆರೋಪಿ ಮಹಪ್ಯೂಸ್​ ಬಾಲಕಿಗೆ ಚಾಕ್​ಲೇಟ್​ ನೀಡುವ ಆಮಿಷ ತೋರಿಸಿ ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದಾನೆ. ನಂತರ ಬಾಲಕಿಯ ತಾಯಿ ಮಗಳು ಅಳುತ್ತಿರುವುದನ್ನು ಕಂಡು ಏನಾಯಿತು ಎಂದು ಕೇಳಿದಾಗ ಘಟನೆ ಬೆಳಕಿಗೆ ಬಂದಿದ್ದು. ಪೊಲೀಸ್​ ಠಾಣೆಗೆ ದೂರು ನೀಡಿದ್ದಾರೆ. ಇದನ್ನು ಓದಿ:ಡಾಕ್ಟರೇಟ್​ ಪದವಿ ತಿರಸ್ಕರಿಸಿದ ಸಚಿವ ಸತೀಶ್​ ಜಾರಕಿಹೊಳಿ

ಚಿಕ್ಕಬಳ್ಳಾಪುರ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು. ಆರೋಪಿ ಮಹಪ್ಯೂಸ್​ನನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಆರೋಪಿಯ ಮಗ ಬೇರೊಂದು ಮಸೀದಿಯಲ್ಲಿ ಮೌಲ್ವಿಯಾಗಿ ಕೆಲಸ ಮಾಡುತ್ತಿದ್ದುದರಿಂದ ಮೌಲ್ವಿಯ ಆಶ್ರಯಕ್ಕೆ ಮಸಿದಿಯ ಕೊಠಡಿಯನ್ನು ಜಮಾತ್ ನೀಡಿತ್ತು. ಅದೇ ಕೊಠಡಿಯನ್ನು ಆರೋಪಿ ದುರುಪಯೋಗಪಡಿಸಿಕೊಂಡಿದ್ದಾನೆ ಎಂದು ಆರೋಪಿಸಲಾಗಿದೆ.

Exit mobile version